2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

ದೇಶದ ಅತಿ ದೊಡ್ಡ ದ್ವಿಚಕ್ರ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ಎಕ್ಸ್‌ಪಲ್ಸ್ 200ಟಿ ಬೈಕನ್ನು ಸದ್ದಿಲ್ಲದೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.13 ಲಕ್ಷಗಳಾಗಿದೆ.

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

ಹೀರೋ ಎಕ್ಸ್‌ಪಲ್ಸ್ 200ಟಿ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡಲಾಗಿಲ್ಲ. ಹೀರೋ ಎಕ್ಸ್‌ಪಲ್ಸ್ 200ಟಿ ಎಕ್ಸ್‌ಪಲ್ಸ್ ಸರಣಿಯ ಭಾಗವಾಗಿದ್ದು, ಇದು ಹೆಚ್ಚು ಜನಪ್ರಿಯವಾದ ಎಕ್ಸ್‌ಪಲ್ಸ್ 200 ಅಡ್ವೆಂಚರ್ ಟೂರರ್ ಅನ್ನು ಒಳಗೊಂಡಿದೆ ಮತ್ತು 200ಸಿಸಿ ಸರಣಿಯ ಎಕ್ಟ್ರೀಮ್ 200ಎಸ್ ಫೇರ್ಡ್ ಬೈಕನ್ನು ಸಹ ಒಳಗೊಂಡಿದೆ.

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಮ್ಯಾಟ್ ಶೀಲ್ಡ್ ಗೋಲ್ಡ್, ಪ್ಯಾಂಥರ್ ಬ್ಲ್ಯಾಕ್ ಮತ್ತು ಸ್ಪೋರ್ಟ್ಸ್ ರೆಡ್ ಎಂಬ ಮೂರು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

ಹೊಸ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಎಲ್‌ಇಡಿ ಹೆಡ್‌ಲ್ಯಾಂಪ್, ಬ್ಲೂಟೂತ್ ಕನೆಕ್ಟಿವಿಟಿ ಕಾಲ್ ಅಲರ್ಟ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಎಲ್ಇಡಿ ಟೈಲ್ ಲ್ಯಾಂಪ್, 17 ಇಂಚಿನ ಬ್ಲ್ಯಾಕ್ ಅಲಾಯ್ ವ್ಹೀಲ್, ಅಂಡರ್ ಕೌಲ್ ಮತ್ತು ಆಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

ಇನ್ನು ಈ ಹೊಸ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕಿನಲ್ಲಿ ಅದೇ 199.6 ಸಿಸಿ ಸಿಂಗಲ್-ಸಿಲಿಂಡರ್ ಆಯಿಲ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 18.1 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

ಇನ್ನು ಈ ಎಂಜಿನ್ 6,500 ಆರ್‌ಪಿಎಂನಲ್ಲಿ 16.15 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಟ್ರಾನ್ಸ್‌ಮಿಷನ್‌ನೊಂದಿಗೆ ಜೋಡಿಸಲ್ಪಟ್ಟಿದೆ.

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

ಇನ್ನು ಹೀರೋ ಎಕ್ಸ್‌ಪಲ್ಸ್ 200ಟಿ ಬೈಕಿನ ಆಯಾಮದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಈ ಬೈಕ್ 177 ಎಂಎಂ ಗ್ರೌಂಡ್ ಕ್ಲಿಯರೆನ್ಸ್, 13 ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಮತ್ತು 799 ಎಂಎಂ ಸೀಟ್ ಎತ್ತರವನ್ನು ಹೊಂದಿದೆ. ಇನ್ನು ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ 154 ಕೆಜಿ ತೂಕವನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 276 ಎಂಎಂ ಡಿಸ್ಕ್ ಬ್ರೇಕ್ ಮತ್ತು 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಬ್ರೇಕಿಂಗ್ ಸಿಸ್ಟಂ ಅನ್ನು ನೀಡಿದೆ.

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

ಇನ್ನು ಈ ಹೊಸ ಎಕ್ಸ್‌ಪಲ್ಸ್ 200ಟಿ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ಹೊಂದಾಣಿಕೆಯ ಮೊನೊಶಾಕ್ ಅನ್ನು ಒಳಗೊಂಡಿದೆ.

2021ರ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕ್ ಬಿಡುಗಡೆ

ಹೀರೋ ಮೋಟೊಕಾರ್ಪ್ ತನ್ನ 200ಸಿಸಿ ಸರಣಿಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಿಸುವ ನಿರೀಕ್ಷೆಯಿದೆ. ಭಾರತದಲ್ಲಿ ಹೀರೋ ಎಕ್ಸ್‌ಪಲ್ಸ್ 200ಟಿ ಬೈಕನ್ನು ಸ್ಥಗಿತಗೊಳಿಸಿದ ಒಂದು ವರ್ಷದ ಬಳಿಕ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲಾಗಿದೆ.

Article Published On: Saturday, March 13, 2021, 12:33 [IST]
English summary
2021 Hero Xpulse 200T BS6 Launched Silently. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+