ಅನಾವರಣವಾಯ್ತು ಬಹುನಿರೀಕ್ಷಿತ 2021ರ ಕವಾಸಕಿ ನಿಂಜಾ 300 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಕವಾಸಕಿ ತನ್ನ ಬಹುನಿರೀಕ್ಷಿತ ಬಿಎಸ್-6 ನಿಂಜಾ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಕವಾಸಕಿ ತನ್ನ ಹೊಸ ನಿಂಜಾ 300 ಬೈಕನ್ನು ಅನಾವರಣಗೊಳಿಸಿದೆ.

ಚಿತ್ರಗಳಲ್ಲಿ ಈ ಬಿಎಸ್-6 ಕವಾಸಕಿ ನಿಂಜಾ 300 ಬೈಕ್ ಇದರ ಹಿಂದಿನ ಬಿಎಸ್ 4 ಮಾದರಿಯನ್ನು ಹೋಲುತ್ತದೆ. ಆದರೆ ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ದೊಡ್ಡ ಸಾಮರ್ಥ್ಯದ ಮಾದರಿಗಳಲ್ಲಿ ಲಭ್ಯವಿರುವ ಕೆಆರ್‌ಟಿ ಆವೃತ್ತಿಯಿಂದ ಇದು ಸ್ಫೂರ್ತಿ ಪಡೆದಿದೆ. ಹೊಸ ಬೈಕಿನಲ್ಲಿ ಅದೇ ಲಿಕ್ವೀಡ್ ಕೋಲ್ಡ್ ಪ್ಯಾರಲಲ್-ಟ್ವಿನ್ 296ಸಿ ಎಂಜಿನ್ ಅನ್ನು ಹೊಂದಿರುತ್ತದೆ. ಆದರೆ ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ.

ಈ ಎಂಜಿನ್ 11,000 ಆರ್‌ಪಿಎಂನಲ್ಲಿ ಗರಿಷ್ಠ 38.5 ಬಿಹೆಚ್‌ಪಿ ಪವರ್ ಮತ್ತು 10,000 ಆರ್‌ಪಿಎಂನಲ್ಲಿ 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್-ಅಸಿಸ್ಟ್ ಕ್ಲಚ್‌ನೊಂದಿಗೆ ಜೋಡಿಸಲಾಗಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಬಿಎಸ್-6 ಕವಾಸಕಿ ನಿಂಜಾ 300 ಬೈಕ್ ಒಟ್ಟಾರೆ ವಿನ್ಯಾಸವು ಅದರ ಬಿಎಸ್ 4 ಪ್ರತಿರೂಪದಿಂದ ಬದಲಾಗದೆ ಉಳಿಯುವ ನಿರೀಕ್ಷೆಯಿದೆ.. ಅಗ್ರೇಸಿವ್ ಕಾಣುವ ಫ್ರಂಟ್ ಎಂಡ್ ವಿನ್ಯಾಸಕ್ಕಾಗಿ ಇದು ಟ್ವಿನ್-ಹೆಡ್‌ಲ್ಯಾಂಪ್ ವಿನ್ಯಾಸವನ್ನು ಮುಂದುವರಿಸಲಿದೆ.

ಇನ್ನು ಈ ಹೊಸ ಬೈಕಿನಲ್ಲಿ ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳು, ವಿಂಡ್‌ಸ್ಕ್ರೀನ್, ಮೌಂಟಡ್ ಫ್ರಂಟ್ ಟರ್ನ್-ಸಿಗ್ನಲ್ ಇಂಡೀಕೆಟರ್ ಪೂರ್ಣ-ಫೇರಿಂಗ್, ಪೈಲಟ್ ಲ್ಯಾಂಪ್‌ಗಳು, ಸ್ಪ್ಲಿಟ್-ಸೀಟುಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿವೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಮಸ್ಕಲರ್ ಲುಕ್ ಹೊಂದಿರುವ ಎಕ್ಸಾಸ್ಟ್ ಅನ್ನು ಹೊಂದಿದೆ. ಇನ್ನು ಈ ಹೊಸ ನಿಂಜಾ 300 ಬೈಕಿನಲ್ಲಿ ಅದೇ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ವಿನ್ಯಾಸವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಬಿಎಸ್-6 ಕವಾಸಕಿ ನಿಂಜಾ 300 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿರುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಬಿಎಸ್-6 ಕವಾಸಕಿ ನಿಂಜಾ 300 ಬೈಕಿನ ಮುಂಭಾಗ 290 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದ್ದಾರೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುವುದು.

ಈ ಬಿಎಸ್-6 ಕವಾಸಕಿ ನಿಂಜಾ 300 ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಸೂಪರ್ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಟಿವಿಎಸ್ ಅಪಾಚೆ ಆರ್ಆರ್310 ಬೈಕಿಗೆ ನೇರವಾಗಿ ಪೈಪೋಟಿ ನೀಡುತ್ತದೆ.


Click it and Unblock the Notifications








