Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಯ್ತು 2021ರ ಕವಾಸಕಿ ಝಡ್650 ಮತ್ತು ವರ್ಸಿಸ್ 1000 ಬೈಕುಗಳು
ಕವಾಸಕಿ ಕಂಪನಿಯು ತನ್ನ ಹೊಸ ಝಡ್650 ಮತ್ತು ವರ್ಸಿಸ್ 1000 ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿವೆ. ಈ ಎರಡು ಜನಪ್ರಿಯ ಮಾದರಿಗಳಲ್ಲಿ ಕೆಲವು ನವೀಕರಣಗಳನ್ನು ನಡೆಸಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ.

2021ರ ಕವಾಸಕಿ ಝಡ್650 ಬೈಕಿನ ಬೆಲೆಯು ರೂ,6.04 ಲಕ್ಷಗಳಾಗಿದೆ. ಇನ್ನು ಹೊಸ ವರ್ಸಿಸ್ 1000 ಬೈಕಿನ ಬೆಲೆಯು ರೂ.11.19 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. ಕವಾಸಕಿ ಕಂಪನಿಯು ತನ್ನ ಝಡ್650 ಮತ್ತು ವರ್ಸಿಸ್ 1000 ಬೈಕುಗಳಲ್ಲಿ ಕೆಲವು ಹೊಸ ಅಪ್ಡೇಟ್ ಗಳನ್ನು ನಡೆಸಿದ್ದಾರೆ.

ಮೊದಲಿಗೆ ಹೊಸ ಕವಾಸಕಿ ಝಡ್650 ಬೈಕಿನ ಬದಲಾವಣೆಗಳ ಕುರಿತು ಬಗ್ಗೆ ಹೇಳುವುದಾದರೆ, ಇದರಲ್ಲಿ ಹೊಸ ಮಿಡಲ್ ವೇಟ್ ನೇಕೆಡ್ ಸ್ಪೋರ್ಟ್ಸ್ ಮತ್ತು ಮೆಟಾಲಿಕ್ ಸ್ಪಾರ್ಕ್ ಬ್ಲ್ಯಾಕ್ ಎಂಬ ಹೊಸ ಬಣ್ಣದ ಆಯ್ಕೆಗಳನ್ನು ಪಡೆದುಕೊಂಡಿದೆ. ಹೊಸ ಬಣ್ಣದ ಜೊತೆ ಬೈಕಿನಲ್ಲಿ ಹಸಿರು ಬಣ್ಣದ ಅಂಶಗಳನ್ನು ಹೊಂದಿದೆ. ಇದು ಈ ಬೈಕಿಗೆ ಹೆಚ್ಚಿನ ಅಗ್ರೇಸಿವ್ ಲುಕ್ ಅನ್ನು ನೀಡಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇದರೊಂದಿಗೆ ಹೆಡ್‌ಲ್ಯಾಂಪ್ ಕೌಲ್, ಫ್ಯೂಯಲ್ ಟ್ಯಾಂಕ್ ಮತ್ತು ಟ್ಯಾಂಕ್ ಶ್ರೌಡ್‌ಗಳು ಸೇರಿವೆ. ಇದರ ಫ್ರೇಮ್ ಮತ್ತು ಅಲಾಯ್ ವ್ಹೀಲ್ ಗಳು ಸಹ ಹಸಿರು ಬಣ್ಣದ ಫಿನಿಶಿಂಗ್ ಅನ್ನು ಹೊಂದಿದೆ. ಹೊಸ ಬಣ್ಣದ ಆಯ್ಕೆಯ ಹೊರತಾಗಿ ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿಲ್ಲ, ಹಿಂದಿನ ಮಾದರಿಯಂತೆಯೇ ಉಳಿದಿದೆ.

ಹೊಸ ಝಡ್650 ಬೈಕಿನಲ್ಲಿ 649 ಸಿಸಿಯ ಲಿಕ್ವಿಡ್ ಕೂಲ್ಡ್ ಟ್ವಿನ್ ಬಿಎಸ್ 6 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 8,000 ಆರ್‍ಪಿಎಂನಲ್ಲಿ 67.3 ಬಿಹೆಚ್‍ಪಿ ಪವರ್ ಹಾಗೂ 6,700 ಆರ್‍ಪಿಎಂನಲ್ಲಿ 64 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡಿನ ಗೇರ್‍ಬಾಕ್ಸ್ ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಬೈಕಿನಲ್ಲಿ ಎಲ್‍ಇಡಿ ಹೆಡ್‍ಲೈಟ್, 4.3 ಇಂಚಿನ ಟಿಎಫ್‍ಟಿ ಕಲರ್ ಇನ್ಸ್ ಟ್ರೂಮೆಂಟೆಷನ್, ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಹಾಗೂ ಡನ್‍ಲಪ್ ಸ್ಪೋರ್ಟ್ಸ್ ಮ್ಯಾಕ್ಸ್ ರೋಡ್‍ಸ್ಪೋರ್ಟ್ ಟಯರ್‍ಗಳಿವೆ. ಈ ಬೈಕಿನಲ್ಲಿ ಕಡಿಮೆ ತೂಕದ ಚಾಸೀಸ್ ಹಾಗೂ ಆರಾಮದಾಯಕವಾದ ಸೀಟುಗಳನ್ನು ಅಳವಡಿಸಲಾಗಿದೆ.

ಇನ್ನು 2021ರ ವರ್ಸಿಸ್ 1000 ಬೈಕಿನ ಬಗ್ಗೆ ಹೇಳುವುದಾದರೆ, ಈ ಅಡ್ವೆಂಚರ್ ಬೈಕಿನಲಿ ಕೆಲವು ಹೊಸ ನವೀಕರಣಗಳನ್ನು ನಡೆಸಿದ್ದಾರೆ. 2021ರ ವರ್ಸಿಸ್ 1000 ಬೈಕಿನ ಸಸ್ಪೆಂಕ್ಷನ್ ಮತ್ತು ಎಂಜಿನ್ ಅನ್ನು ರಿ-ಟ್ಯೂನ್ ಮಾಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೊಸ ಕವಾಸಕಿ ವರ್ಸಿಸ್ 1000 ಬೈಕಿನಲ್ಲಿ 1,043 ಸಿಸಿ, ಲಿಕ್ವಿಡ್-ಕೂಲ್ಡ್, ಇನ್-ಲೈನ್-ನಾಲ್ಕು ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 9000 ಆರ್‍ಪಿಎಂನಲ್ಲಿ ಗರಿಷ್ಠ 118 ಬಿಹೆಚ್ಪಿ ಮತ್ತು 7500 ಆರ್‍ಪಿಎಂನಲ್ಲಿ 102 ಎನ್ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್-ಅಸಿಸ್ಟ್ ಕ್ಲಚ್‌ನೊಂದಿಗೆ ಸಂಯೋಜಿಸಲ್ಪಟ್ಟಿದೆ.

ಇನ್ನು ಈ ಹೊಸ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 43 ಎಂಎಂ ಯುಎಸ್‌ಡಿ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ನೀಡಿದೆ. ಇದರಲ್ಲಿ ನವೀಕರಿಸಿದ ಬಳಿಕ ರಿಬೌಂಡ್ ಡ್ಯಾಂಪಿಂಗ್ ಮತ್ತು ಸ್ಪ್ರಿಂಗ್ ಪ್ರೀಲೋಡ್‌ಗಾಗಿ ಎರಡೂ ಯುನಿಟ್ ಗಳು ಸಂಪೂರ್ಣವಾಗಿ ಹೊಂದಾಣಿಕೆಯಾಗುತ್ತವೆ.

ಇವುಗಳನ್ನು ಹೊರತುಪಡಿಸಿ ವಾಸಕಿ ವರ್ಸಿಸ್ 1000 ಬೈಕಿನಲ್ಲಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈ ಬೈಕಿನ ಮುಂಭಾಗದಲ್ಲಿ ಡ್ಯುಯಲ್ 310 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 250 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ. ವರ್ಸಿಸ್ 1000 ಎಲೆಕ್ಟ್ರಾನಿಕ್ ರೈಡರ್ ಏಡ್ಸ್ ಅನ್ನು ಹೊಂದಿದೆ.

ಕವಾಸಕಿ ಕಂಪನಿಯ ಝಡ್650 ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಒಳ್ಳೆ ಮಿಡಲ್ ವೇಟ್ ನೇಕೆಡ್ ಸ್ಪೋರ್ಟ್ಸ್ ಬೈಕುಗಳಲ್ಲಿ ಒಂದಾಗಿದೆ. ಮತ್ತೊಂದೆಡೆ, ಕಂಪನಿಯು ಭಾರತೀಯ ರಸ್ತೆ ಪರಿಸ್ಥಿತಿಗಳಿಗೆ ತಕ್ಕಂತೆ 2021ರ ವರ್ಸಿಸ್ 1000 ಬೈಕನ್ನು ನವೀಕರಿಸಿ ಬಿಡುಗಡೆಗೊಳಿಸಲಾಗಿದೆ.