ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಮಾದರಿಗಳಾದ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕುಗಳನ್ನು ನವೀಕರಿಸಲಾಗುತ್ತಿದೆ. ರಾಯಲ್ ಎನ್‍ಫೀಲ್ಡ್ ಕಂಪನಿಯು ಈ ಎರಡು ಟ್ವಿನ್ ಬೈಕುಗಳನ್ನು 2018ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತ್ತು.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ಈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕುಗಳು ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸಾಕಷ್ಟು ಜನಪ್ರಿಯತೆಗಳನ್ನು ಗಳಿಸಿದೆ. ಇದೀಗ ರಾಯಲ್ ಎನ್‍ಫೀಲ್ಡ್ ತನ್ನ ಈ ಎರಡು ಟ್ವಿನ್ ಬೈಕುಗಳ ಸೂಕ್ಷ್ಮ ನವೀಕರಣಗಳನ್ನು ಪರಿಚಯಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕುಗಳು ಭಾರತದಲ್ಲಿ ಪ್ರತ್ಯೇಕವಾಗಿ ಸ್ಪಾಟ್ ಟೆಸ್ಟ್ ಅನ್ನು ಈಗಾಗಲೇ ನಡೆಸಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕುಗಳು ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ. ಈ ಹೊಸ ಬಣ್ಣಗಳ ಮಾಹಿತಿಯು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಈ ಮಾಹಿತಿಯ ಪ್ರಕಾರ 2021ರ ರಾಯಲ್ ಎನ್‍ಫೀಲ್ಡ್ ಟ್ವಿನ್ ಬೈಕುಗಳು ರಾವಿಶಿಂಗ್ ಬ್ಲ್ಯಾಕ್, ಗ್ರೇ ಗೂಸ್, ವೆಂಚುರಾ ಬ್ಲೂ ಮತ್ತು ರಾಯಲ್ ರೆಡ್ ಎಂಬ ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬೇಕರ್ ಎಕ್ಸ್‌ಪ್ರೆಸ್, ಗ್ಲಿಟರ್ ಮತ್ತು ಡಸ್ಟ್ ಮತ್ತು ಆರೆಂಜ್ ಕ್ರಷ್ ಎಂಬ ಬಣ್ಣಗಳ ಆಯ್ಕೆಯನ್ನು ಹೊಸ ಬಣ್ಣಗಳ ಜೊತೆ ಮುಂದುವರೆಸಲಾಗುತ್ತದೆ. ಇನ್ನು ಹೊಸ ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿ‍ಟಿ650 ಬೈಕ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ಬಹಿರಂಗವಾಗಿತ್ತು. ಸ್ಪೈ ಚಿತ್ರದಲ್ಲಿ ಕಾಂಟಿನೆಂಟಲ್ ಜಿ‍ಟಿ 650 ಬ್ಲ್ಯಾಕ್ ಸಂಪೂರ್ಣವಾಗಿ ಬ್ಲ್ಯಾಕ್ ಬಣ್ಣದ ಫಿನಿಶಿಂಗ್ ಅನ್ನು ಹೊಂದಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕುಗಳಲ್ಲಿ ನವೀಕರಣವು ಸೂಕ್ಷ್ಮವಾಗಿರಬಹುದು. ಬ್ರ್ಯಾಂಡ್ ಕೇವಲ ಸಣ್ಣ ನವೀಕರಣಗಳನ್ನು ತರುತ್ತದೆ ಎಂದು ನಿರೀಕ್ಷಿಸುತ್ತೇವೆ. ಹೊಸ ಬಣ್ಣಗಳ ಆಯ್ಕೆ, ಎಂಜಿನ್ ಸೆಟಪ್, ಸಸ್ಪೆಂಕ್ಷನ್ ಮತ್ತು ವಿನ್ಯಾಸದಲ್ಲಿ ಕೆಲವು ಸಣ್ಣ ನವೀಕರಣಗಳನ್ನು ನಡೆಸಬಹುದು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ಇನ್ನು 2021ರ ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿ‍ಟಿ650 ಬೈಕಿನಲ್ಲಿ ಟ್ರಿಪರ್ ನ್ಯಾವಿಗೇಷನ್ ಫೀಚರ್ ಅನ್ನು ನೀಡಬಹುದು. ಈ ಟ್ರಿಪರ್ ನ್ಯಾವಿಗೇಷನ್ ಫೀಚರ್ ಅನ್ನು ಮೊದಲು ರಾಯಲ್ ಎನ್‍ಫೀಲ್ಡ್ ಇತ್ತೀಚೆಗೆ ಬಿಡುಗಡೆಗೊಳಿಸಿದ ಮಿಟಿಯೊರ್ ಬೈಕಿನಲ್ಲಿ ಪರಿಚಯಿಸಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ಇನ್ನು ಈ ಟ್ವಿನ್ ಬೈಕುಗಳ ಇಂಜಿನ್ ಸಾಮರ್ಥ್ಯ ಮತ್ತು ಹಲವಾರು ವೈಶಿಷ್ಟ್ಯಗಳಿಂದ ಕೂಡಿರುವ ಕಾರಣ ದೇಶಿಯ ಮಾರುಕಟ್ಟೆ ಗ್ರಾಹಕರು ಈ ಬೈಕ್‍‍ಗೆ ಫಿದಾ ಆದರು. ಎರಡೂ ಬೈ‍ಕ್‍‍ಗಳು ಪ್ಯಾರೆಲೆಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿವೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಇಂಟರ್‍‍ಸೆಪ್ಟೆರ್ 650 ಮತ್ತು ಕಾಂಟಿ‍ನೆಂಟಲ್ ಜಿಟಿ 650 ಎಂಬ ಎರಡು ಟ್ವಿನ್ ಬೈಕ್‍‍ಗಳು 649 ಸಿಸಿ ಏರ್/ಆಯಿಲ್ -ಕೂಲ್ಡ್ ಪ್ಯಾರೆಲೆಲ್-ಟ್ವಿನ್ ಎಂಜಿನ್ ಅನ್ನು ಹೊಂದಿವೆ. ಈ ಎಂಜಿನ್ 47 ಬಿ‍ಹೆಚ್‍ಪಿ ಪವರ್ ಮತ್ತು 52 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

ಎಂಜಿನ್‍‍ನೊಂದಿಗೆ ಸ್ಟ್ಯಾಂಡರ್ಡ್ ಅಸಿಸ್ಟ್ ಕ್ಲಚ್‍‍‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍‍ಗಳಲ್ಲಿ ಮೂಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 240ಎಂಎಂನ ಡಿಸ್ಕ್ ಬ್ರೇಕ್‍‍ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿವೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆಯಲಿವೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು

2021ರ ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿ‍ಟಿ650 ಬೈಕ್ ಸ್ಪೈ ಚಿತ್ರದಲ್ಲಿ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ. ಆದರೆ ರಾಯಲ್ ಎನ್‌ಫೀಲ್ಡ್ ಕೆಲವು ಸಣ್ಣ ಬದಲಾವಣೆಗಳೊಂದಿಗೆ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಬಹುದು.

Most Read Articles

Kannada
English summary
2021 Royal Enfield 650 Twins New Colour Options Leaked. Read In Kannada.
Story first published: Thursday, February 25, 2021, 15:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X