ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಸರಣಿಯಲ್ಲಿರು ಜನಪ್ರಿಯ ಮಾದರಿಗಳನ್ನು ನವೀಕರಿಸಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಪ್ರಾರಂಭಿಸಿದೆ. ಇದರ ಜೊತೆಗೆ ಹೊಸ ಮಾದರಿಗಳನ್ನು ಕೂಡ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಇದರ ನಡುವೆ ಇತ್ತೀಚೆಗೆ 2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಮತ್ತೊಮ್ಮೆ ಸ್ಫಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ರಶ್ಲೇನ್ ಬಹಿರಂಗಪಡಿಸಿದೆ. ಸ್ಪೈ ಚಿತ್ರಗಳಲ್ಲಿ ನವೀಕರಿಸಿದ ಇನ್ಸ್ ಟ್ರೂಮೆಟ್ ಕ್ಲಸ್ಟರ್ ಮಾಹಿತಿ ಬಹಿರಂಗವಾಗಿದೆ. ಚಿತ್ರದಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಈಗ ಅನಲಾಗ್ ಸ್ಪೀಡೋಮೀಟರ್ ಕೆಳಗೆ ಸಣ್ಣ ಡಿಜಿಟಲ್ ಡಿಸ್ ಪ್ಲೇಯನ್ನು ಹೊಂದಿರುತ್ತದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಈ ಡಿಸ್ ಪ್ಲೇಯಲ್ಲಿ ಫ್ಯೂಯಲ್ ಇಂಡಿಕೇಟರ್, ಓಡೋಮೀಟರ್ ಮತ್ತು ಇತರ ವಿವರಗಳನ್ನು ಪ್ರದರ್ಶಿಸುತ್ತದೆ. ಬದಿಯಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಪಾಡ್ ಇರುವಿಕೆಯು ಅತ್ಯಂತ ಮುಖ್ಯವಾದ ಸೇರ್ಪಡೆಯಾಗಿದೆ. ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಕೂಡ ಒಳಗೊಂಡಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಬ್ಲೂಟೂತ್ ಮತ್ತು ಮೀಸಲಾದ ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾಡಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೌಲ್ಯಭ್ಯವನ್ನು ಒದಗಿಸುತ್ತದೆ. ಇನ್ನು ಹೊಸ ಕ್ಲಾಸಿಕ್ 350 ಮಾದರಿಯು ಈಗ ವೃತ್ತಾಕಾರದ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಇನ್ನು ಇದರಲ್ಲಿ ಸ್ಪ್ಲಿಟ್ ಸೀಟ್ ಮತ್ತು ಹಿಂಭಾಗದಲ್ಲಿ ಸ್ವಲ್ಪ ದೊಡ್ಡದಾದ ಗ್ರ್ಯಾಬ್ ಹ್ಯಾಂಡಲ್ ಅನ್ನು ಹೊಂದಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಹೊಸ ಕ್ಲಾಸಿಕ್ 350 ಹ್ಯಾಲೊಜೆನ್ ಯುನಿಟ್ ಸುತ್ತ ವೃತ್ತಾಕಾರದ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ನವೀಕರಿಸಿದ ಹೆಡ್ ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿರಲಿದೆ. ಹೊಸ ಹ್ಯಾಂಡಲ್‌ಬಾರ್ ಗ್ರಿಪ್ಸ್ ಮತ್ತು ಸ್ವಿಚ್‌ಗಿಯರ್‌ಗಳನ್ನು ಸಹ ಹೊಂದಿರುತ್ತದೆ. 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಪ್ರಸ್ತುತ ಮಾದರಿಯಂತೆಯೇ ವಿನ್ಯಾಸ ಮತ್ತು ಸಿಲೂಯೆಟ್ ಅನ್ನು ಮುಂದಕ್ಕೆ ಸಾಗಿಸುತ್ತದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಅದರೆ ಮಿಟಿಯೊರ್ 350 ಬೈಕಿನಿಂದ ಕೆಲವು ಅಂಶಗಳನ್ನು ಎರವಲು ಪಡೆಯುತ್ತದೆ. ಇದು ಡಬಲ್-ಕ್ರ್ಯಾಡಲ್ ಫ್ರೇಮ್ ನತ್ತು ಸಿಂಗಲ್ ಡೌನ್‌ಟ್ಯೂಬ್ ಫ್ರೇಮ್ ಅನ್ನು ಬದಲಾಯಿಸುತ್ತದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಅಲಾಯ್ ವ್ಹೀಲ್ ಗಳು ಮತ್ತು ವಿಂಡ್ ಡಿಫ್ಲೆಕ್ಟರ್ ಅನ್ನು ಪಡೆದುಕೊಂಡಿದೆ. ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್, ಹೊಸ ಗ್ರ್ಯಾಪ್ ರೈಲ್, ಕಡಿಮೆ ಹಿಂಭಾಗದ ಫೆಂಡರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಅನಲಾಗ್ ಸ್ಪೀಡೋಮೀಟರ್ ಹೊಂದಿರುವ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಕೂಡ ಒಳಗೊಂಡಿರುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಕ್ಲಾಸಿಕ್ ಬ್ಲ್ಯಾಕ್, ಪ್ಯೂರ್ ಬ್ಲ್ಯಾಕ್, ಮರ್ಕ್ಯುರಿ ಸಿಲ್ವರ್, ಗನ್‌ಮೆಟಲ್ ಗ್ರೇ, ಸ್ಟ್ರೋಮೈಡರ್ ಸ್ಯಾಂಡ್, ಏರ್ ಬೋನ್ ಬ್ಲೂ, ಕ್ರೋಮ್, ಸ್ಟೆಲ್ತ್ ಬ್ಲ್ಯಾಕ್ ಆರೆಂಜ್ ಎಂಬರ್ ಮತ್ತು ಮೆಟಲ್ಲೊ ಸಿಲ್ವರ್ ಸೇರಿದಂತೆ 12 ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಪ್ಲಾಟ್‌ಫಾರ್ಮ್ ಮತ್ತು ಎಂಜಿನ್ ಸೆಟಪ್‌ನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗುತ್ತದೆ. 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಅನ್ನು ಹೊಸ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗುತ್ತದೆ

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕನ್ನು ಇದೇ ಪ್ಲಾಟ್‌ಫಾರ್ಮ್‌ನಡಿಯಲ್ಲಿ ತಯಾರಿಸಲಾಗುತ್ತದೆ. ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ ಅಸ್ತಿತ್ವದಲ್ಲಿರುವ ಪ್ಲಾಟ್‌ಫಾರ್ಮ್‌ಗಿಂತ ಹಗುರವಾಗಿರುತ್ತದೆ, ಇನ್ನು 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ ಹೊಸ 350ಸಿಸಿ, ಸುಧಾರಿತ ಎಸ್‌ಒಹೆಚ್‌ಸಿ ಕಾನ್ಫಿಗರೇಶನ್‌ನೊಂದಿಗೆ ಸಿಂಗಲ್ ಸಿಲಿಂಡರ್ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಅನ್ನು ಹೊಂದಿರುತ್ತದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್

ಈ 350ಸಿಸಿ ಎಂಜಿನ್ 20.2 ಬಿಹೆಚ್‌ಪಿ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. ಶೀಘ್ರದಲ್ಲೇ ಈ 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು.

Most Read Articles

Kannada
English summary
2021 Royal Enfield Classic 350 Spied With Tripper Navigation. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X