Just In
- 15 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 52 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯಲ್ಲಿರುವ ಪ್ರಮುಖ ಮಾದರಿಗಳನ್ನು ನವೀಕರಿಸಿ 2021ರಲ್ಲಿ ಬಿಡುಗಡೆಗೊಳಿಸಲಿದೆ. ಇದರಲ್ಲಿ ಜನಪ್ರಿಯ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಕೂಡ ಸೇರಿವೆ.

ಈ 2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ಗಾಡಿವಾಡಿ ಬಹಿರಂಗಪಡಿಸಿದೆ. ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಉತ್ಪಾದನೆಗೆ ಸಿದ್ದವಾಗಿರುವ ಮಾದರಿ ಎಂದು ನಿರೀಕ್ಷಿಸುತ್ತೇವೆ.

2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ರೌಂಡ್ ಹೆಡ್ಲ್ಯಾಂಪ್, ಟಿಯರ್ಡ್ರಾಪ್-ಆಕಾರದ ಟರ್ನ್ ಇಂಡಿಕೇಟರ್ಸ್, ಕ್ರೋಮ್ ರಿಯರ್ ವ್ಯೂ ಮಿರರ್ಸ್, ಬ್ರ್ಯಾಂಡ್ ರಿಯರ್ ಫೆಂಡರ್ಸ್ ಮತ್ತು ಕ್ರೋಮ್ಡ್ ಎಕ್ಸಾಸ್ಟ್ ಸಿಸ್ಟಂ ಸೇರಿದಂತೆ ಮೂಲ ರೆಟ್ರೊ ವಿನ್ಯಾಸ ಅಂಶಗಳನ್ನು ಉಳಿಸಿಕೊಂಡಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್

ಹೊಸ ತಲೆಮಾರಿನ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಎಲ್ಇಡಿ ಡಿಆರ್ಎಲ್ ಜೊತೆಗೆ ಹೊಸ ಬಾಡಿ ಪ್ಯಾನಲ್ ಗಳನ್ನು ಹೊಂದಿದೆ. ಆದರೂ ರಾಯಲ್ ಎನ್ಫೀಲ್ಡ್ ಹೊಸ ತಲೆಮಾರಿನ ಕ್ಲಾಸಿಕ್ 350 ಬೈಕಿನಲ್ಲಿಯು ಎಲ್ಇಡಿ ಹೆಡ್ಲ್ಯಾಂಪ್ ಅನ್ನು ನೀಡಲಾಗಿಲ್ಲ.

2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಅಲಾಯ್ ವ್ಹೀಲ್ ಗಳು ಮತ್ತು ವಿಂಡ್ ಡಿಫ್ಲೆಕ್ಟರ್ ಅನ್ನು ಪಡೆದುಕೊಂಡಿದೆ. ಕೆಲವು ಪ್ರಮುಖ ವಿನ್ಯಾಸವು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್ಲ್ಯಾಂಪ್, ಹೊಸ ಗ್ರ್ಯಾಪ್ ರೈಲ್, ಕಡಿಮೆ ಹಿಂಭಾಗದ ಫೆಂಡರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಅನಲಾಗ್ ಸ್ಪೀಡೋಮೀಟರ್ ಹೊಂದಿರುವ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಒಳಗೊಂಡಿರುತ್ತದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಪ್ರಸ್ತುತ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಕ್ಲಾಸಿಕ್ ಬ್ಲ್ಯಾಕ್, ಪ್ಯೂರ್ ಬ್ಲ್ಯಾಕ್, ಮರ್ಕ್ಯುರಿ ಸಿಲ್ವರ್, ಗನ್ಮೆಟಲ್ ಗ್ರೇ, ಸ್ಟ್ರೋಮೈಡರ್ ಸ್ಯಾಂಡ್, ಏರ್ ಬೋನ್ ಬ್ಲೂ, ಕ್ರೋಮ್, ಸ್ಟೆಲ್ತ್ ಬ್ಲ್ಯಾಕ್ ಆರೆಂಜ್ ಎಂಬರ್ ಮತ್ತು ಮೆಟಲ್ಲೊ ಸಿಲ್ವರ್ ಸೇರಿದಂತೆ 12 ರೀತಿಯ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕಿನ ಪ್ಲಾಟ್ಫಾರ್ಮ್ ಮತ್ತು ಎಂಜಿನ್ ಸೆಟಪ್ನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗುವುದು. 2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಅನ್ನು ಹೊಸ ಮಾಡ್ಯುಲರ್ ಜೆ ಪ್ಲಾಟ್ಫಾರ್ಮ್ನಲ್ಲಿ ನಿರ್ಮಿಸಲಾಗುವುದು.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್

ಹೊಸ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕನ್ನು ಇದೇ ಪ್ಲಾಟ್ಫಾರ್ಮ್ನಡಿಯಲ್ಲಿ ತಯಾರಿಸಲಾಗಿದೆ. ಮಾಡ್ಯುಲರ್ ಜೆ ಪ್ಲಾಟ್ಫಾರ್ಮ್ ಅಸ್ತಿತ್ವದಲ್ಲಿರುವ ಪ್ಲಾಟ್ಫಾರ್ಮ್ಗಿಂತ ಹಗುರವಾಗಿರುತ್ತದೆ,

ಇನ್ನು ಈ 2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ ಹೊಸ 350ಸಿಸಿ, ಸುಧಾರಿತ ಎಸ್ಒಹೆಚ್ಸಿ ಕಾನ್ಫಿಗರೇಶನ್ನೊಂದಿಗೆ ಸಿಂಗಲ್ ಸಿಲಿಂಡರ್ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಬಹುದು.

350ಸಿಸಿ ಎಂಜಿನ್ 20.2 ಬಿಹೆಚ್ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ಗೆ ಜೋಡಿಸಲಾಗುತ್ತದೆ ಈ 2021ರ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.