Just In
- 8 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 9 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 10 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 10 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಭಾರತದಲ್ಲಿ ಲಸಿಕೆ ಉತ್ಸವದ 4ನೇ ದಿನ ಲಸಿಕೆ ಪಡೆದ ಫಲಾನುಭವಿಗಳೆಷ್ಟು?
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ಹಿಮಾಲಯನ್ ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್ಫೀಲ್ಡ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ತನ್ನ 2021ರ ಹಿಮಾಲಯನ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯು ಚೆನ್ನೈ ಎಕ್ಸ್ ಶೋರೂಂ ಪ್ರಕಾರ ರೂ.2.01 ಲಕ್ಷಗಳಾಗಿದೆ.

ಭಾರತೀಯ ಮಾರುಕಟ್ಟೆಯಲ್ಲಿ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ವಿತರಣೆಯನ್ನು ಪ್ರಾರಂಭಿಸಲಾಗಿದೆ. ಈ ಹೊಸ ಬೈಕಿನ ಮೊದಲ ಬ್ಯಾಚ್ ಅನ್ನು ಮಾಲೀಕರಿಗೆ ವಿತರರಿಸಲಾಗಿದೆ. ಇನ್ನು 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಹೊಸ ಫೀಚರ್ ಗಳು ಮತ್ತು ಮೂರು ಹೊಸ ಬಣ್ಣ ಆಯ್ಕೆಗಳನ್ನು ಪಡೆದುಕೊಂಡಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಹೊಸ ಹಿಮಾಲಯನ್ ಆನ್ಲೈನ್ನಲ್ಲಿ ತಮ್ಮ ಬುಕ್ಕಿಂಗ್ ಅನ್ನು ಬ್ರ್ಯಾಂಡ್ನ ಅಧಿಕೃತ ವೆಬ್ಸೈಟ್ ಮೂಲಕವೂ ಮಾಡಬಹುದು.

ಮೊದಲಿಗೆ ಹಿಮಾಲಯನ್ ಬೈಕಿನ ಕಾಸ್ಮೆಟಿಕ್ ಬದಲಾವಣೆಯ ಬಗ್ಗೆ ಹೇಳುವುದಾದರೆ, ಈ ಹೊಸ ಹಿಮಾಲಯನ್ ಬೈಕ್ ಅದರ ಹಿಂದಿನ ಮಾದರಿಗಳಂತೆಯೇ ಅದೇ ವಿನ್ಯಾಸ ಮತ್ತು ಸಿಲೂಯೆಟ್ ಅನ್ನು ಮುಂದಕ್ಕೆ ಸಾಗಿಸಿದ್ದು, ಆದರೆ ಕೆಲವು ಸಣ್ಣ ನವೀಕರಣಗಳಿವೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್

ಇವುಗಳಲ್ಲಿ ನವೀಕರಿಸಿದ ಸೀಟ್ ಸೇರಿವೆ. ಇದು ಈಗ ಉತ್ತಮ ಕಂಫರ್ಟ್ ಅನ್ನು ನೀಡುತ್ತದೆ. ವಿಶೇಷವಾಗಿ ಲಾಂಗ್ ರೈಡ್ ತೆರಳುವಾಗ ಇದು ಹೆಚ್ಚು ಸಹಕಾರಿಯಾಗಿರುತ್ತದೆ. ಇನ್ನು ನವೀಕರಿಸಿದ ಹಿಂಭಾಗದ ಕ್ಯಾರಿಯರ್ ಮತ್ತು ಮುಂಭಾಗ ಮೆಟಲ್ ಫ್ರೇಮ್ ಮತ್ತು ಹೊಸ ವಿಂಡ್ಸ್ಕ್ರೀನ್ ಸೇರ್ಪಡೆಯಾಗಿದೆ.

2021ರ ಹಿಮಾಲಯನ್ ಆಫ್-ರೋಡರ್ ಹೊಸ ಪೈನ್ ಗ್ರೀನ್, ಗ್ರಾನೈಟ್ ಬ್ಲ್ಯಾಕ್ (ಡ್ಯುಯಲ್-ಟೋನ್ ವಿಥ್ ಮ್ಯಾಟ್ & ಗ್ಲೋಸ್ ಬ್ಲ್ಯಾಕ್) ಮತ್ತು ಮಿರಾಜ್ ಸಿಲ್ವರ್ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ. ಇದರೊಂದಿಗೆ ಪ್ರಸ್ತುತ ಇರುವ ಗ್ರೇವೆಲ್ ಗ್ರೇ, ರಾಕ್ ರೆಡ್ ಮತ್ತು ಲೇಕ್ ಬ್ಲೂ ಬಣ್ಣಗಳಲ್ಲಿಯು ಲಭ್ಯವಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ‘ಟ್ರಿಪ್ಪರ್ ನ್ಯಾವಿಗೇಷನ್' ಅನ್ನು ಸಹ ಒಳಗೊಂಡಿದೆ. ಹೊಸ ಸರಳ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಪಾಡ್ ಅನ್ನು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಜೊತೆಗೆ ಅಳವಡಿಸಲಾಗಿದೆ.

ಹೊಸ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಬೈಕ್ ರೈಡಿಂಗ್ ವೇಳೆ ಸವಾರನಿಗೆ ಸಾಕಷ್ಟು ಸಹಕಾರಿಯಾಗಿರುತ್ತದೆ. ರಾಯಲ್ ಎನ್ಫೀಲ್ಡ್ ಎಕ್ಸ್ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಒದಗಿಸಲಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್

ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿಲ್ಲ. 2021ರ ಹಿಮಾಲಯನ್ ಬೈಕಿನಲ್ಲಿ ಅದೇ 411ಸಿಸಿ ಸಿಂಗಲ್-ಸಿಲಿಂಡರ್ ಎಸ್ಒಹೆಚ್ಸಿ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಲಾಗಿದೆ. ಈ ಎಂಜಿನ್ 24.3 ಬಿಹೆಚ್ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ.

ಇನ್ನು 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಸಸ್ಪಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41ಎಂಎಂ ಟೆಲಿಸ್ಕೋಪಿಕ್ ಸೆಟಪ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ. ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 300ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇನ್ನು ಸ್ಟ್ಯಾಂಡರ್ಡ್ ಆಗಿ ‘ಸ್ವಿಚ್ ಮಾಡಬಹುದಾದ ಎಬಿಎಸ್' ಅನ್ನು ಹೊಂದಿದೆ.

ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಅಡ್ವೆಂಚರ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ.
Image Courtesy: Nidhin Narayanan