ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಅಡ್ವೆಂಚರ್ ಬೈಕನ್ನು ಹೊಸ ನವೀಕರಣದೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಹೊಸ ಬಣ್ಣಗಳ ಆಯ್ಕೆ ಮತ್ತು ಫೀಚರ್ ಗಳ ಮಾಹಿತಿ ಬಹಿರಂಗವಾಗಿವೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಪೈನ್ ಗ್ರೀನ್, ಗ್ರಾನೈಟ್ ಬ್ಲ್ಯಾಕ್ ಮತ್ತು ಮಿರಾಜ್ ಸಿಲ್ವರ್ ಎಂಬ ಮೂರು ಹೊಸ ಬಣ್ಣಗಳಲ್ಲಿ ಬರಲಿದೆ ಎಂದು ವರದಿಯಾಗಿದೆ. ಇನ್ನು ಹಿಂದಿನ ಮಾದರಿಯಲ್ಲಿರುವ ಲೇಕ್ ಬ್ಲೂ, ಗ್ರೇವೆಲ್ ಗ್ರೇ ಮತ್ತು ರಾಕ್ ರೆಡ್ ಬಣ್ಣಗಳ ಆಯ್ಕೆಯೂ ಮುಂದುವರಿಯಲಿವೆ. ಬೈಕು ಹೊಸ ಬಾಡಿ ಗ್ರಾಫಿಕ್ ಜೊತೆಗೆ ಇನ್ನೂ ಕೆಲವು ನವೀಕರಣಗಳನ್ನು ಹೊಂದಿರುತ್ತದೆ.

ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಹೊಸ ಬ್ರೌನ್ ಬಣ್ಣದ ಸೀಟ್ ಅನ್ನು ಹೊಂದಿರಲಿದೆ. ಇದು ಉತ್ತಮ ಕಂಫರ್ಟ್ ನೀಡುವ ರೀತಿಯಲಿ ಸಾಂದ್ರತೆಯ ಫೋಮ್‌ನಿಂದ ಮಾಡಲ್ಪಟ್ಟಿದೆ ಎಂದು ಹೇಳಲಾಗುತ್ತದೆ. ಇನ್ನು ಎತ್ತರದ ಸವಾರರ ಸಮಸ್ಯೆಗಳನ್ನು ಪರಿಹರಿಸಲು ಮುಂಭಾಗದ ರ್ಯಾಕ್ ಅನ್ನು ಪರಿಷ್ಕರಿಸಲಾಗುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ನವೀಕರಿಸಿದ ಹಿಮಾಲಯನ್ ಬೈಕ್ ಟಿಪ್ಪರ್ ನ್ಯಾವಿಗೇಷನ್ ಸಿಸ್ಟಮ್ ಎಂಬ ಗೂಗಲ್-ಚಾಲಿತ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸಿಸ್ಟಂನೊಂದಿಗೆ ಬರಲಿದೆ ಎಂದು ವರದಿಗಳಾಗಿದೆ. ಇತ್ತೀಚೆಗೆ ಬಿಡುಗಡೆಗೊಂಡ ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350 ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಮೊದಲು ಪರಿಚಯಿಸಿದ್ದರು.

ಈ ಹೊಸ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಬೈಕ್ ರೈಡಿಂಗ್ ವೇಳೆ ಸಾಕಷ್ಟು ಸಹಕಾರಿಯಾಗಿರಲಿದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆ ಒದಗಿಸಲಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿಗೆ ಹೋಲಿಸಿದರೆ ಹೊಸ ಮಾದರಿಯಲ್ಲಿ ಎತ್ತರದ ವಿಂಡ್‌ಶೀಲ್ಡ್ ಅನ್ನು ಹೊಂದಿರುತ್ತದೆ. ಹೆಚ್ಚಿನ ಲಗೇಜ್ ಜಾಗವನ್ನು ಒದಗಿಸುವ ಸಲುವಾಗಿ, ಬೈಕ್‌ಮೇಕರ್ ಅದರ ಹಿಂಭಾಗದ ವಾಹಕಕ್ಕೆ ಸಮತಟ್ಟಾದ ಸರ್ಫಸ್ ಮೆಟಲ್ ಪ್ಲೇಟ್ ಅನ್ನು ಅಳವಡಿಸಲಾಗಿದೆ.

ಇನ್ನು ಮಿಟಿಯೊರ್ 350 ಮಾದರಿಯಲ್ಲಿರುವಂತಹ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನಲ್ಲಿ ಹೆಚ್ಚುವರಿ ಪಾಡ್ ನೊಂದಿಗೆ ಹಿಮಾಲಯನ್ ಬೈಕಿನಲ್ಲಿ ಅಳವಡಿಸಲಾಗುತ್ತದೆ. ಉಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಭಾರತದಲ್ಲಿ ಈ ವರ್ಷದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ. ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 23.9 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.


Click it and Unblock the Notifications








