ಬಿಡುಗಡೆಗೆ ಸಜ್ಜಾದ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಅಡ್ವೆಂಚರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಕೆಲವು ಹೊಸ ಅಪ್ದೇಟ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ವರದಿಗಳ ಪ್ರಕಾರ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಈ ತಿಂಗಳ ಅಂತ್ಯದಲಿ ಬಿಡುಗಡೆಯಾಗಬಹುದು. ಕಂಪನಿಯ ವೆಬ್‌ಸೈಟ್‌ಗಾಗಿ ಸ್ಟುಡಿಯೋ ಶಾಟ್ ಆಗಿ ಕಾಣಿಸಿಕೊಂಡಿರುವುದು ಹೊಸ ಬಣ್ಣದ ಚಿತ್ರವನ್ನು ಬಹಿರಂಗಪಡಿಸಿದೆ. 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ವೈಟ್ ಮತ್ತು ಸಿಲ್ವರ್ ಅಥವಾ ಮ್ಯಾಟ್ ಬಣ್ಣದ ಆಯ್ಕೆಯನ್ನು ಪಡೆಯಬಹುದು.

ಇತ್ತೀಚೆಗೆ ಬಿಡುಗಡೆಗೊಂಡ ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350 ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಎಂಬ ಹೊಸ ಫೀಚರ್ ಅನ್ನು ಪರಿಚಯಿಸಿದ್ದರು. ಇದೇ ಫೀಚರ್ ಅನ್ನು ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನಲ್ಲಿ ಅಳವಡಿಸಲಿದೆ. ಈ ಫೀಚರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನಲ್ಲಿ ಕಾಣಿಸಿಕೊಂಡಿದೆ
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಬೈಕ್ ರೈಡಿಂಗ್ ವೇಳೆ ಸಾಕಷ್ಟು ಸಹಕಾರಿಯಾಗಲಿದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆ ಒದಗಿಸಲಿದೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳ ಸ್ಟ್ಯಾಂಡರ್ಡ್ ಸೆಟ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ನೀಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೊಸ ಹಿಮಾಲಯನ್ ಬೈಕಿನ ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕಿಂಗ್ ಸೆಟಪ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಉಳಿದಂತೆ ಯಾವುದೇ ಬದಲಾವಣೆಗಳಿರುವುದ್ದಿಲ್ಲ. 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 23.9 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಪ್ರಸ್ತುತ ಮಾರಾಟವಾಗುತ್ತಿರುವ ಹಿಮಾಲಯನ್ ಬೈಕಿನಲ್ಲಿ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍ಗಳನ್ನು ಹೊಂದಿದೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈಟ್‍ಗಳನ್ನು ಹೊಂದಿವೆ.

ಈ ಫೀಚರ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಆಫ್ ರೋಡ್ ಪ್ರಿಯರನ್ನು ಸೆಳೆದಿದೆ. ಈ ಸ್ವಿಚ್‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಮೇಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಬಹುದು.

ಇದರೊಂದಿಗೆ ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.


Click it and Unblock the Notifications