Just In
- 28 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ವಿಜಯನಗರ ಜಿಲ್ಲೆ; ಮೇಲುಸ್ತುವಾರಿಗೆ ಐಎಎಸ್ ಅಧಿಕಾರಿ ನೇಮಕ
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಬೈಕನ್ನು ಹೊಸ ನವೀಕರಣದೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಬಿಡುಗಡೆಯ ದಿನಾಂಕ ಬಹಿರಂಗವಾಗಿದೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಫೆಬ್ರವರಿ 11 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈಗಗಾಲೇ ಇನ್ನು ಈ ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಬಿಡುಗಡೆಗೆ ಮುನ್ನ ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ. 2021ರ ಹಿಮಾಲಯನ್ ಬೈಕ್ ಹೊಸ ಬಣ್ಣಗಳ ಆಯ್ಕೆ ಮತ್ತು ಫೀಚರ್ ಗಳನ್ನು ಪಡೆಯಲಿದೆ. 2021 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ವಿನ್ಯಾಸದ ವಿಷಯದಲ್ಲಿ ಇದು ಮೊದಲಿನಂತೆಯೇ ಇರುತ್ತದೆ.

ಆದರೆ ಪೈನ್ ಗ್ರೀನ್, ಮಿರಾಜ್ ಸಿಲ್ವರ್ ಮತ್ತು ಗ್ರಾನೈಟ್ ಬ್ಲ್ಯಾಕ್ ಎಂಬ ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ. ಈ ಹೊಸ ಹಿಮಾಲಯನ್ ಬೈಕ್ ಮತ್ತೊಂದು ಅಪ್‌ಡೇಟ್ ಎಂದರೆ ಎತ್ತರದ ವಿಂಡ್‌ಶೀಲ್ಡ್, ಇದು ಗಾಳಿಯ ವಿರುದ್ಧ ಸುಧಾರಿತ ರಕ್ಷಣೆ ನೀಡುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇನ್ನು ರೌಂಡ್ ಹೆಡ್‌ಲ್ಯಾಂಪ್ ಮತ್ತು ರಿಯರ್ ವ್ಯೂ ಮಿರರ್‌ಗಳು, ಮಸ್ಕಲರ್ ಫ್ಯೂಯಲ್ ಟ್ಯಾಂಕ್, ನಯವಾದ ಟರ್ನ್ ಇಂಡಿಕೇಟರ್, ಅಪ್‌ಸ್ವೆಪ್ಟ್ ಎಕ್ಸಾಸ್ಟ್ ತ್ತು ಸ್ಲಿಮ್ ಟೈಲ್ ವಿಭಾಗದಂತಹ ಇತರ ವಿನ್ಯಾಸ ಅಂಶಗಳು ಮೊದಲಿನಂತೆಯೇ ಇರುತ್ತವೆ.

2021ರ ಹಿಮಾಲಯನ್ ಬೈಕ್ ಟಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಎಂಬ ಗೂಗಲ್-ಚಾಲಿತ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸಿಸ್ಟಂನೊಂದಿಗೆ ಬರಲಿದೆ. ಇತ್ತೀಚೆಗೆ ಬಿಡುಗಡೆಗೊಂಡ ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350 ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಅನ್ನು ಮೊದಲು ಪರಿಚಯಿಸಿದ್ದರು.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಈ ಹೊಸ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಬೈಕ್ ರೈಡಿಂಗ್ ವೇಳೆ ಸವಾರನಿಗೆ ಸಾಕಷ್ಟು ಸಹಕಾರಿಯಾಗಿರಲಿದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಒದಗಿಸಲಿದೆ.

ಇನ್ನು ಮಿಟಿಯೊರ್ 350 ಮಾದರಿಯಲ್ಲಿರುವಂತಹ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನಲ್ಲಿ ಹೆಚ್ಚುವರಿ ಪಾಡ್ ನೊಂದಿಗೆ ಹಿಮಾಲಯನ್ ಬೈಕಿನಲ್ಲಿ ಅಳವಡಿಸಲಾಗುತ್ತದೆ. ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳುನ್ನು ಮಾಡಲಾಗಿಲ್ಲ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 23.9 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹಿಮಾಲಯನ್ ಬೈಕಿನಲ್ಲಿ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍ಗಳನ್ನು ಹೊಂದಿದೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈಟ್‍ಗಳನ್ನು ಹೊಂದಿವೆ. ಈ ಫೀಚರ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಆಫ್ ರೋಡ್ ಪ್ರಿಯರನ್ನು ಸೆಳೆದಿದೆ.

ಬಹುನಿರೀಕ್ಷಿತ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ನಾಳೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.
Image Courtesy: @Bijit_Bk