ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಬೈಕನ್ನು ಹೊಸ ನವೀಕರಣದೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕುಗಳು ಬಿಡುಗಡೆಗೆ ಮುನ್ನ ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

2021ರ ಹಿಮಾಲಯನ್ ಬೈಕ್ ಹೊಸ ಬಣ್ಣಗಳ ಆಯ್ಕೆ ಮತ್ತು ಫೀಚರ್ ಗಳನ್ನು ಪಡೆಯಲಿದೆ. ಡೀಲರ್ ಬಲಿ ತಲುಪಿದ 2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಗ್ರಿನ್ ಶೇಡ್ ಅನ್ನು ಒಳಗೊಂಡಿದೆ. 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ವಿನ್ಯಾಸದ ವಿಷಯದಲ್ಲಿ ಇದು ಮೊದಲಿನಂತೆಯೇ ಇರುತ್ತದೆ. ಆದರೆ ಪೈನ್ ಗ್ರೀನ್, ಮಿರಾಜ್ ಸಿಲ್ವರ್ ಮತ್ತು ಗ್ರಾನೈಟ್ ಬ್ಲ್ಯಾಕ್ ಎಂಬ ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ.

ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

ಈ ಹೊಸ ಹಿಮಾಲಯನ್ ಬೈಕ್ ಮತ್ತೊಂದು ಅಪ್‌ಡೇಟ್‌ ಎಂದರೆ ಎತ್ತರದ ವಿಂಡ್‌ಶೀಲ್ಡ್, ಇದು ಗಾಳಿಯ ವಿರುದ್ಧ ಸುಧಾರಿತ ರಕ್ಷಣೆ ನೀಡುತ್ತದೆ. ಇನ್ನು ರೌಂಡ್ ಹೆಡ್‌ಲ್ಯಾಂಪ್ ಮತ್ತು ರಿಯರ್ ವ್ಯೂ ಮಿರರ್‌ಗಳು, ಮಸ್ಕಲರ್ ಫ್ಯೂಯಲ್ ಟ್ಯಾಂಕ್, ನಯವಾದ ಟರ್ನ್ ಇಂಡಿಕೇಟರ್, ಅಪ್‌ಸ್ವೆಪ್ಟ್ ಎಕ್ಸಾಸ್ಟ್ ತ್ತು ಸ್ಲಿಮ್ ಟೈಲ್ ವಿಭಾಗದಂತಹ ಇತರ ವಿನ್ಯಾಸ ಅಂಶಗಳು ಮೊದಲಿನಂತೆಯೇ ಇರುತ್ತವೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

ನವೀಕರಿಸಿದ ಹಿಮಾಲಯನ್ ಬೈಕ್ ಟಿಪ್ಪರ್ ನ್ಯಾವಿಗೇಷನ್ ಸಿಸ್ಟಮ್ ಎಂಬ ಗೂಗಲ್-ಚಾಲಿತ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸಿಸ್ಟಂನೊಂದಿಗೆ ಬರಲಿದೆ. ಇತ್ತೀಚೆಗೆ ಬಿಡುಗಡೆಗೊಂಡ ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350 ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಮೊದಲು ಪರಿಚಯಿಸಿದ್ದರು.

ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

ಈ ಹೊಸ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಬೈಕ್ ರೈಡಿಂಗ್ ವೇಳೆ ಸಾಕಷ್ಟು ಸಹಕಾರಿಯಾಗಿರಲಿದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಒದಗಿಸಲಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

ಇನ್ನು ಮಿಟಿಯೊರ್ 350 ಮಾದರಿಯಲ್ಲಿರುವಂತಹ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನಲ್ಲಿ ಹೆಚ್ಚುವರಿ ಪಾಡ್ ನೊಂದಿಗೆ ಹಿಮಾಲಯನ್ ಬೈಕಿನಲ್ಲಿ ಅಳವಡಿಸಲಾಗುತ್ತದೆ. ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳುನ್ನು ಹೊಂದಿಲ್ಲ.

ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

2021ರ ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 23.9 ಬಿ‍‍ಹೆಚ್‍‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹಿಮಾಲಯನ್ ಬೈಕಿನಲ್ಲಿ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍‍ಗಳನ್ನು ಹೊಂದಿದೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈ‍‍‍ಟ್‍ಗಳನ್ನು ಹೊಂದಿವೆ. ಈ ಫೀಚರ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಆಫ್ ರೋಡ್ ಪ್ರಿಯರನ್ನು ಸೆಳೆದಿದೆ.

ಡೀಲರ್ ಬಳಿ ಕಾಣಿಸಿಕೊಂಡ 2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್

2021ರ ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿರುವುದರಿಂದ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿ‍ಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2021 Royal Enfield Himalayan New Green Colour Spotted At Dealer Yard. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X