ಕರೋನಾ ಸಂಕಷ್ಟದ ನಡುವೆಯೂ ಒಂದು ಗಂಟೆಯಲ್ಲಿ ಸೋಲ್ಡ್ ಔಟ್ ಆದ ರೂ.16.4 ಲಕ್ಷದ ಹಯಾಬುಸಾ ಬೈಕ್
ಕರೋನಾ ಸಂಕಷ್ಟದ ನಡುವೆಯೂ ಭಾರತದಲ್ಲಿ ಐಷಾರಾಮಿ 2021ರ ಸುಜುಕಿ ಹಯಾಬುಸಾ ಬೈಕಿಗೆ ಸಖತ್ ಡಿಮ್ಯಾಂಡ್ ಪಡೆದುಕೊಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸೂಪರ್ ಬೈಕ್ ವಿಭಾಗದಲ್ಲಿ ಸುಜುಕಿ ಹಯಾಬುಸಾ ಮಾದರಿಯು ಹೊಸ ಸಂಚಲನವನ್ನು ಸೃಷ್ಟಿಸಿದೆ.

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್ ತನ್ನ ಹೊಸ ಹಯಾಬುಸಾ ಬೈಕನ್ನು ಭಾರತದಲ್ಲಿ ಈ ವರ್ಷದ ಏಪ್ರಿಲ್ 26ಕ್ಕೆ ಬಿಡುಗಡೆಗೊಳಿಸಿತ್ತು. ಸುಜುಕಿ ಕಂಪನಿಯು ಹೊಸ ಹಯಾಬುಸಾದ ಬೈಕಿನ ಮೊದಲ ಬ್ಯಾಚ್ ಆಗಿ 101 ಯುನಿಟ್ ಗಳನ್ನು ಬಿಡುಗಡೆಗೊಳಿಸಿತ್ತು. ಈ ಎಲ್ಲಾ ಯುನಿಟ್‌ಗಳು ಒಂದೆರಡು ದಿನಗಳಲ್ಲಿ ಮಾರಾಟವಾದವು. ನಂತರ ಸುಜುಕಿ ಹಯಾಬುಸಾ ಬೈಕಿನ ಎರಡನೇ ಬ್ಯಾಚ್ ಅನ್ನು ಜುಲೈ 1 ರಿಂದ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದರು.

ಎರಡನೇ ಬ್ಯಾಚ್ನಲ್ಲಿ ಹಯಾಬುಸಾ ಬೈಕಿನ 100 ಯುನಿಟ್ ಗಳಿತ್ತು. ಈ ಎಲ್ಲಾ ಯುನಿಟ್ ಗಳು ಕೇವಲ ಒಂದು ಗಂಟೆಯಲ್ಲಿ ಮಾರಾಟ ಮಾಡಲಾಯಿತು. ನಿಸ್ಸಂಶಯವಾಗಿ ಹೇಳಬಹುದು, ಭಾರತದ ಅತ್ಯಂತ ಜನಪ್ರಿಯ ಸೂಪರ್‌ಬೈಕ್‌ಗಳಲ್ಲಿ ಒಂದಾಗಿದೆ. ಈ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟದಲ್ಲಿ ಜೈತ್ರಯಾತ್ರೆಯನ್ನು ಮುಂದುವರಿಸಿದೆ.

2021ರ ಸುಜುಕಿ ಹಯಾಬುಸಾ ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ಅಗ್ರೇಸಿವ್ ಲೈನ್ ಗಳು ಮತ್ತು ಹೊಸ ಫಾಸಿಕದೊಂದಿಗೆ ಆಕರ್ಷಕವಾಗಿದೆ.

ಹಯಾಬುಸಾ ಸೂಪರ್ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ, ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗುತ್ತದೆ. ಸೂಪರ್‌ಬೈಕ್‌ನ 2021 ಆವೃತ್ತಿಯು ದೊಡ್ಡ ಡ್ಯುಯಲ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಪೈಪ್ಸ್ ಅನ್ನು ಹೊಂದಿದೆ.

ಈ ಸೂಪರ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದ್ದು, ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನಲ್ಲಿ ಹೊಸ ಟಿಎಫ್‌ಟಿ ಡಿಸ್ ಪ್ಲೇಯನ್ನು ಕೂಡ ನೀಡಲಾಗಿದೆ.

ಇದು ಹೊಸ ಸ್ವಿಚ್‌ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ಹೊಂದಿದ್ದು, ಇನ್ನು ಹೊಸ ಸುಜುಕಿ ಹಯಾಬುಸಾದಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್‌ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಕೂಡ ಹೊಂದಿವೆ.

ಇದರೊಂದಿಗೆ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಆಕ್ಟಿವ್ ಸ್ಪೀಡ್ ಲಿಮಿಟರ್, ಲೋ ಆರ್ಪಿಎಂ ಅಸಿಸ್ಟ್, ಕಂಬೈನ್ಡ್ ಬ್ರೇಕ್ ಸಿಸ್ಟಂ, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, 10 ಹಂತದ ಹೊಂದಾಣಿಕೆ ಹೊಂದಿರುವ ಮತ್ತು ಸ್ವಿಚ್ ಮಾಡಬಹುದಾದ ಟ್ರ್ಯಾಕ್ಷನ್ ಕಂಟ್ರೋಲ್ ನಂತ ವಿವಿಧ ಫೀಚರ್ಸ್ ಗಳನ್ನು ಒಳಗೊಂಡಿದೆ.

ಈ ಹೊಸ ಸುಜುಕಿ ಹಯಾಬುಸಾ ಬೈಕ್ ಗ್ಲೋಸ್ ಸ್ಪಾರ್ಕ್ಲಿ ಬ್ಲ್ಯಾಕ್/ಕ್ಯಾಂಡಿ ಬರ್ನ್ಟ್ ಗೋಲ್ಡ್, ಮೆಟಾಲಿಕ್ ಮ್ಯಾಟ್ ಸ್ವೋರ್ಡ್ ಸಿಲ್ವರ್/ಕ್ಯಾಂಡಿ ಡೇರಿಂಗ್ ರೆಡ್ ಮತ್ತು ಪರ್ಲ್ ಬ್ರಿಲಿಯಂಟ್ ವೈಟ್/ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ ಎಂಬ ಬಣ್ಣಗಳ ಆಯ್ಕೆಯನ್ನು ಹೊಂದಿವೆ.

2021ರ ಸುಜುಕಿ ಹಯಾಬುಸಾ ಬೈಕಿನಲ್ಲಿ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 187.7 ಬಿಹೆಚ್‌ಪಿ ಪವರ್ ಮತ್ತು 7,000 ಆರ್‌ಪಿಎಂನಲ್ಲಿ 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್ ಮತ್ತು ಬೈ-ಡೈರಕ್ಷನಲ್ ಕ್ವಿಕ್‌ಶಿಫ್ಟರ್‌ನೊಂದಿಗೆ ಜೋಡಿಸಲಾಗಿದೆ.

ಕಂಪನಿಯ ಪ್ರಕಾರ, ಈ ಹೊಸ ಹಯಾಬುಸಾ ಸೂಪರ್‌ಬೈಕ್ ಕೇವಲ 3.2 ಸೆಕೆಂಡುಗಳಲ್ಲಿ 0 ದಿಂದ 100 ಕಿ,ವೀ ವೇಗವನ್ನು ಪಡೆದುಕೊಳ್ಳುತ್ತದೆ ಮತ್ತು 299 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಈ 2021ರ ಸುಜುಕಿ ಹಯಾಬುಸಾ ಬೈಕ್ 265 ಕೆಜಿ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 20-ಲೀಟರ್ ಫ್ಯೂಯಲ್ ಟ್ಯಾಂಕ್ ಸಾಮರ್ಥ್ಯವನ್ನು ಹೊಂದಿದೆ.


Click it and Unblock the Notifications








