ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್‌ ತನ್ನ ಹೊಸ ಹಯಾಬುಸಾ ಸೂಪರ್ ಬೈಕನ್ನು ಜಾಗತಿಕವಾಗಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಈ 2021ರ ಸುಜುಕಿ ಹಯಾಬುಸಾ ಕಾಸ್ಮೆಟಿಕ್ ಬದಲಾವಣೆಗಳ ಜೊತೆಗೆ ಕೆಲವು ಹೊಸ ಫೀಚರ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

2021ರ ಸುಜುಕಿ ಹಯಾಬುಸಾ ಸೂಪರ್ ಬೈಕ್ ಇದೇ ತಿಂಗಳು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಸುಜುಕಿ ಮೋಟಾರ್‌ಸೈಕಲ್‌ ಕಂಪನಿಯು ಖಚಿತಪಡಿಸಿದೆ. ಇದರ ಬಿಡುಗಡೆ ದಿನಾಂಕ ಮತ್ತು ಇತರ ಬುಕ್ಕಿಂಗ್ ವಿವರಗಳನ್ನು ಬಹಿರಂಗಪಡಿಸಿಲ್ಲ. ವರದಿಗಳ ಪ್ರಕಾರ, 2021ರ ಸುಜುಕಿ ಹಯಾಬುಸಾ ಬೈಕಿನ ಖರೀದಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಡೀಲರುಗಳು ಪ್ರಾರಂಭಿಸಲಾಗಿದೆ. ಬುಕ್ಕಿಂಗ್ ಮಾಡಲು ಟೋಕನ್ ಮೊತ್ತ ರೂ.2 ಲಕ್ಷವನ್ನು ನಿಗಧಿಪಡಿಸಿದ್ದಾರೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

ಹೊಸ ಸುಜುಕಿ ಹಯಾಬುಸಾ ಬೈಕಿನ ಬಗ್ಗೆ ಹೇಳುವುದಾದರೆ, ಇದರ ವಿನ್ಯಾಸವನ್ನು ನವೀಕರಿಸಲಾಗಿದೆ, ಆದರೆ ಸೂಪರ್ ಬೈಕಿನ ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ತೀಕ್ಷ್ಣವಾದ ಲೈನ್ ಗಳು ಮತ್ತು ಹೊಸ ಫಾಸಿಕವನ್ನು ಹೊಂದಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

2021ರ ಹಯಾಬುಸಾ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿರುವ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ, ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

ಹೊಸ ಹಯಾಬುಸಾದಲ್ಲಿ ಬೈಕಿನಲ್ಲಿ ಅಗ್ರೇಸಿವ್ ಬಾಡಿ ಲೈನ್ ಗಳನ್ನು ನೀಡಲಾಗಿದ್ದು, ಇದು ಹೆಚ್ಚು ಸ್ಪೋರ್ಟಿ ಮತ್ತು ಆಕರ್ಷಕವಾಗಿದೆ. ಸೂಪರ್‌ಬೈಕ್‌ನ 2021 ಆವೃತ್ತಿಯು ದೊಡ್ಡ ಡ್ಯುಯಲ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಪೈಪ್ಸ್ ಅನ್ನು ಹೊಂದಿದೆ. ಇದು ಹಯಾಬುಸಾದ ಕಮಾಂಡಿಂಗ್ ಸ್ವರೂಪವನ್ನು ಹೆಚ್ಚಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

ಇನ್ನು ಈ ಸೂಪರ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವಾರು ಉಪಕರಣಗಳು ಮತ್ತು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನಲ್ಲಿ ಹೊಸ ಟಿಎಫ್‌ಟಿ ಡಿಸ್ ಪ್ಲೇಯನ್ನು ನೀಡಲಾಗಿದೆ

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

ಹೊಸ ಸ್ವಿಚ್‌ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ನೀಡಿದೆ. ಇನ್ನು 2021ರ ಸುಜುಕಿ ಹಯಾಬುಸಾದಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್‌ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

ಇದರೊಂದಿಗೆ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, ಟ್ರ್ಯಾಕ್ಷನ್ ಕಂಟ್ರೋಲ್ ಆಂಟಿ ವ್ಹೀಲಿ ಕಂಟ್ರೋಲ್ ಹತ್ತು ಹಂತಗಳನ್ನು ಹೊಂದಿದೆ. ಹಯಾಬುಸಾ ಬ್ರ್ಯಾಂಡ್‌ನ ಎಸ್,ಐ,ಆರ್,ಎಸ್ ತಂತ್ರಜ್ಞಾನವನ್ನು (ಸುಜುಕಿ ಇಂಟೆಲಿಜೆಂಟ್ ರೈಡ್ ಸಿಸ್ಟಂ) ಸಹ ಹೊಂದಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

2021ರ ಸುಜುಕಿ ಹಯಾಬುಸಾ ಅದೇ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಇದರಲ್ಲಿ ಅಳವಡಿಸಲಾಗಿದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

ಈ ಎಂಜಿನ್ ಅನ್ನು ಆರು-ವೇಗದ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಬೈ-ಡೈರಕ್ಷನಲ್ ಕ್ವಿಕ್-ಶಿಫ್ಟರ್ ಮತ್ತು ರೈಡ್-ಬೈ-ವೈರ್ ತಂತ್ರಜ್ಞಾನಗಳೊಂದಿಗೆ ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ 2021ರ ಸುಜುಕಿ ಹಯಾಬುಸಾ ಬೈಕ್

2021ರ ಸುಜುಕಿ ಹಯಾಬುಸಾ ಬೈಕ್ 265 ಕೆಕೆ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 20-ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೋಂದಿದೆ. ಇನ್ನು ಈ ಬೈಕ್ 125 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಸುಜುಕಿ ಹಯಾಬುಸಾ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಅತ್ಯಂತ ಜನಪ್ರಿಯ ಸೂಪರ್‌ಬೈಕ್‌ಗಳಲ್ಲಿ ಒಂದಾಗಿದೆ. 2021ರ ಸುಜುಕಿ ಹಯಾಬುಸಾ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸೂಪರ್ ಬೈಕ್ ಗಳಲ್ಲಿ ಒಂದಾಗಿದೆ

Most Read Articles

Kannada
English summary
2021 Suzuki Hayabusa India Launch Confirmed For April. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X