Just In
- 11 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 13 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 15 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 1 day ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಯಾಯ್ತು 2021ರ ಯಮಹಾ ಎಂಟಿ-15 ಬೈಕ್
ಜಪಾನಿನ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಯಮಹಾ ತನ್ನ 2021ರ ಎಂಟಿ -15 ನೇಕೆಡ್ ಸ್ಟ್ರೀಟ್‌ಫೈಟರ್ ಬೈಕನ್ನು ಥೈಲ್ಯಾಂಡ್‌ನಲ್ಲಿ ಬಿಡುಗಡೆಗೊಳಿಸಿದೆ. ಈ 2021ರ ಯಮಹಾ ಎಂಟಿ -15 ಬೈಕ್ ಹೊಸ ಬಣ್ನಗಳ ಆಯ್ಕೆಗಳೊಂದಿಗೆ ಬರುತ್ತದೆ.

2021ರ ಯಮಹಾ ಎಂಟಿ -15 ಬೈಕ್ ರೇಸಿಂಗ್ ಬ್ಲೂ, ಮೆಟಾಲಿಕ್ ಬ್ಲ್ಯಾಕ್ ಮತ್ತು ಮೆಟಾಲಿಕ್ ಗ್ರೇ ಎಂಬ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ. ಯಮಹಾ ಎಂಟಿ -15 ಬೈಕ್ ಬ್ಲೂ ಬಣ್ಣದ ಫ್ಯೂಯಲ್ ಟ್ಯಾಂಕ್ ಮತ್ತು ವ್ಹೀಲ್ ಗಳ ಮೇಲೆ ಬ್ಲೂ ಬಣ್ಣವನ್ನು ಹೊಂದಿದೆ. ಇನ್ನು ಈ ಯಮಹಾ ಎಂಟಿ-15 ಬೈಕ್ ರೆಡ್ ಮತ್ತು ಬ್ಲೂ ಬಣ್ಣಗಳ ಹೊಸ ಗ್ರಾಫಿಕ್ಸ್ ಅನ್ನು ಒಳಗೊಂಡಿದೆ.

2021ರ ಯಮಹಾ ಎಂಟಿ-15 ಬೈಕಿನಲ್ಲಿ 155 ಸಿಸಿ ಲಿಕ್ವಿಡ್ ಕೂಲಿಂಗ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 18.5 ಬಿಹೆಚ್‍ಪಿ ಪವರ್ ಮತ್ತು 14.7 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ಪರ್ ಮತ್ತು ಅಸಿಸ್ಟ್ ಕ್ಲಚ್‌ನೊಂದಿಗೆ ಜೋಡಿಸಲಾಗಿದೆ. ಇನ್ನು ಇದರಲ್ಲಿ ರೇಡಿಯೇಟರ್ ಗಾರ್ಡ್‌ಗಳೊಂದಿಗೆ ಮಸ್ಕಲರ್ ಫ್ಯೂಯಲ್ ಟ್ಯಾಂಕ್ ಮತ್ತು ಆಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಒಳಗೊಂಡಿದೆ.

ಹೊಸ ಬೈಕಿನ ತೂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹೊಸ ಯಮಹಾ ಎಂಟಿ-15 ಬೈಕ್ 138 ಕೆಜಿ ತೂಕವನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ರೇಡಿಯಲ್ ಟಯರ್ ಅನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

2021ರ ಯಮಹಾ ಎಂಟಿ-15 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಗೋಲ್ಡನ್ ಬಣ್ಣಗಳ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಅಲ್ಯೂಮಿನಿಯಂ ಸ್ವಿಂಗಾರ್ಮ್ ಅನ್ನು ಅಳವಡಿಸಲಾಗಿದೆ.

ಇನ್ನು ಸುರಕ್ಷತೆಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಹೊಸ ಯಮಹಾ ಎಂಟಿ-15 ಬೈಕಿನಲ್ಲಿ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಎ ಸಿಂಗಲ್ ಚಾನೆಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ನೀಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಯಮಹಾ ಕಂಪನಿಯು ತನ್ನ 2021ರ ಎಂಟಿ-25 ಬೈಕನ್ನು ಇಂಡೋನೇಷ್ಯಾದ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಯಮಹಾ ಎಂಟಿ-25 ಸ್ಟ್ರೀಟ್‌ಫೈಟರ್ ಬೈಕನ್ನು ನವೀಕರಿಸಿದ ಬಾಡಿವರ್ಕ್ ಅನ್ನು ಪಡೆದುಕೊಂಡಿದೆ. 2021ರ ಯಮಹಾ ಎಂಟಿ-25 ಬೈಕಿನಲ್ಲಿ ಎಂಟಿ ಗ್ರಾಫಿಕ್ಸ್, ಹೊಸ ಟ್ಯಾಂಕ್ ಕವರ್ ಮತ್ತು ಎರಡೂ ಬದಿಗಳಲ್ಲಿ ಏರ್ ಸ್ಕೂಪ್‌ಗಳನ್ನು ಒಳಗೊಂಡಿದೆ.

2021ರ ಯಮಹಾ ಎಂಟಿ-15 ಬೈಕ್ ಡೆಲ್ಟಾಬಾಕ್ಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಇನ್ನು ಈ ಬೈಕ್ ಬಾಕ್ಸ್ ಮಾದರಿಯ ಸ್ವಿಂಗಾರ್ಮ್ ಅನ್ನು ಒಳಗೊಂಡಿದೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಂಟಿ -09-ಪ್ರೇರಿತ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ.