Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ 2021ರ ಯಮಹಾ ಆರ್15 ವಿ3 ಬೈಕ್
ಯಮಮಹಾ ಇಂಡಿಯಾ ಕಂಪನಿಯ ಸರಣಿಯಲ್ಲಿ ವೈಝಡ್ಎಫ್ ಆರ್15 ವಿ3 ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಈ ಯಮಹಾ ವೈಝಡ್ಎಫ್ ಆರ್15 ವಿ3 ಬೈಕ್ ದೇಶಿಯ ಮಾರುಕಟ್ಟೆಯಲ್ಲಿ 2018ರ ಆರಂಭದಿಂದಲೂ ಮಾರಾಟದಲ್ಲಿದೆ.

ಮೂರನೇ ತಲೆಮಾರಿನ ಕೈಗೆಟುಕುವ ಸೂಪರ್‌ಸ್ಪೋರ್ಟ್ ಯಮಹಾ ವೈಝಡ್ಎಫ್ ಆರ್15 ವಿ3 ಬೈಕ್ ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಯಾವುದೇ ಪ್ರಮುಖ ನವೀಕರಣಗಳನ್ನು ಸ್ವೀಕರಿಸಿಲ್ಲ. ಆದರೆ ಆನ್‌ಲೈನ್‌ನಲ್ಲಿ ಸೋರಿಕೆಯಾದ ಮಾಹಿತಿಯ ಪ್ರಕಾರ ಯಮಹಾ ಆರ್15 ವಿ3 ಬೈಕ್ ಹೊಸ ರೆಡ್ ಬಣ್ಣದ ಆಯ್ಕೆಯನ್ನು ಪಡೆಯಲಿದೆ. ಇನ್ನು ಸದ್ಯ ಇರುವ ಥಂಡರ್ ಗ್ರೇ, ಡಾರ್ಕ್ ನೈಟ್ ಮತ್ತು ರೇಸಿಂಗ್ ಬ್ಲೂ ಬಣ್ಣಗಳಲ್ಲಿ ಲಭ್ಯವಿರುತ್ತದೆ.

ಇನ್ನು 2021ರ ಯಮಹಾ ಆರ್15 ವಿ3 ಬೈಕಿನ ಫ್ಯೂಯಲ್ ಟ್ಯಾಂಕ್, ಫೇರಿಂಗ್ ಮತ್ತು ಸೈಡ್ ಪ್ಯಾನೆಲ್‌ಗಳಿಗೆ ಈ ಹೊಸ ಬಣ್ಣದ ಅಯ್ಕೆಯನ್ನು ಪಡೆಯುತ್ತದೆ. ಆದರೆ ಟ್ವಿನ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳ ಮೇಲಿರುವ ಕೌಲ್ ಗ್ರೇ ಬಣ್ಣದಲ್ಲಿರುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

2021ರ ಯಮಹಾ ಆರ್15 ವಿ3 ಬೈಕ್ ಫ್ರಂಟ್ ಫೆಂಡರ್, ರಿಯರ್ ಟೈರ್ ಹಗ್ಗರ್, ಅಲಾಯ್ ವ್ಹೀಲ್ಸ್, ಎಕ್ಸಾಸ್ಟ್, ಸ್ಟೆಪ್ ಅಪ್ ಸೀಟುಗಳು ಮತ್ತು ಎಂಜಿನ್ ಭಾಗಗಳು ಬ್ಲ್ಯಾಕ್ ಬಣ್ಣದಲ್ಲಿರುತ್ತದೆ. ಇನ್ನು 2021ರ ಯಮಹಾ ಆರ್15 ವಿ3 ಬೈಕ್ ಹೊಸ ಬಣ್ಣದ ಆಯ್ಕೆಯಲ್ಲಿ ಚಿತ್ರದಲ್ಲಿ ಆಕರ್ಷಕ ಬಣ್ಣದಲ್ಲಿದೆ.

ಇನ್ನು 2021ರ ಯಮಹಾ ಆರ್15 ವಿ3 ಬೈಕ್ 1,990 ಎಂಎಂ ಉದ್ದ, 725 ಎಂಎಂ ಅಗಲ ಮತ್ತು 1,135 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಹೊಸ ಬೈಕ್ 1,325 ಎಂಎಂ ಉದ್ದದ ವ್ಹೀಲ್ ಬೇಸ್ ಅನ್ನು ಹೊಂದಿದೆ. ಇನ್ನು ಇದರ ಸೀಟ್ ಎತ್ತರವು 815 ಎಂಎಂ ಆಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬೈಕಿನ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, ಈ 2021ರ ಯಮಹಾ ಆರ್15 ವಿ3 ಸೂಪರ್‌ಸ್ಪೋರ್ಟ್ ಬೈಕಿನಲ್ಲಿ ಎಂಜಿನ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದರಲ್ಲಿದೆ ಅದೇ 155 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಎಂಜಿನ್ ಅನ್ನು ಹೊಂದಿದೆ.

ಈ ಎಂಜಿನ್ 18.3 ಬಿಹೆಚ್‍ಪಿ ಪವರ್ ಮತ್ತು 14.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು ಸ್ಲಿಪ್ಪರ್ ಅಸಿಸ್ಟೆಡ್ ಕ್ಲಚ್ನೊಂದಿಗೆ ಸ್ಟ್ಯಾಂಡರ್ಡ್ ಸಿಕ್ಸ್-ಸ್ಪೀಡ್ ಗೇರ್ ಬಾಕ್ಸ್ ಜೋಡಿಸಲಾಗಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಯಮಹಾ ಆರ್15 ವಿ3 ಬೈಕಿನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಟೈಲ್-ಲ್ಯಾಂಪ್, ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಸಂಪೂರ್ಣ ಡಿಜಿಟಲ್ ಎಲ್‌ಸಿಡಿ, ಮತ್ತು ಸ್ಪ್ಲಿಟ್-ಸ್ಟೈಲ್ ಸ್ಟೆಪ್-ಅಪ್ ಸೀಟ್ ಅನ್ನು ಹೊಂದಿದೆ. ಇನ್ನು ಈ ಹೊಸ ಮಾದರಿಯಲ್ಲಿ ರೇಡಿಯಲ್ ಟಯರ್, ಡ್ಯುಯಲ್ ಡ್ಯುಯಲ್-ಹಾರ್ನ್ ಮತ್ತು ಸೈಡ್-ಸ್ಟ್ಯಾಂಡ್ ಆಕ್ಟಿವೇಟೆಡ್ ಎಂಜಿನ್ ಕಟ್-ಆಫ್ ಫೀಚರ್ ಗಳನ್ನು ಒಳಗೊಂಡಿವೆ.

ಈ ಯಮಹಾ ಆರ್15 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ.

ಇನ್ನು ಈ ಯಮಹಾ ಆರ್15 ವಿ3 ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 282 ಎಂಎಂ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

2021ರ ಯಮಹಾ ಆರ್15 ವಿ3 ಬೈಕ್ ಬೈಕ್ ಅಗ್ರೇಸಿವ್ ಮತ್ತು ಆಕರ್ಷಕ ಲುಕ್ ಅನ್ನು ಹೊಂದಿದೆ. ಯಮಹಾ ಆರ್15 ವಿ3 ಮಾದರಿ ದೇಶಿಯ ಮಾರುಕಟ್ಟೆಯಲ್ಲಿ ಕೆಟಿಎಂ ಆರ್‌ಸಿ 200 ಮತ್ತು ಸುಜುಕಿ ಜಿಕ್ಸರ್ ಎಸ್‌ಎಫ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ.

ಯಮಹಾ ಆರ್15 ವಿ3 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಉತ್ತಮ ಸ್ಪೋರ್ಟ್ಸ್ ಬೈಕ್‌ಗಳಲ್ಲಿ ಒಂದಾಗಿದೆ. ಹೊಸ ಬಣ್ಣದೊಂದಿಗೆ ಈ ಯಮಹಾ ಆರ್15 ವಿ3 ಬೈಕ್ ಶೀಘ್ರದಲ್ಲೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.