Just In
Don't Miss!
- Lifestyle
ರಾತ್ರಿ ವೇಳೆ ಬೇಳೆಕಾಳು ತಿನ್ನಬೇಕೋ ಬೇಡವೋ, ಆಯುರ್ವೇದ ಏನು ಹೇಳುತ್ತದೆ?
- Finance
ಮಾರ್ಚ್ 04ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ
- Sports
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್, Live ಸ್ಕೋರ್, ಪ್ಲೇಯಿಂಗ್ XI
- News
ಮಗಳ ಶಿರಚ್ಛೇದ ಮಾಡಿ, ರುಂಡದೊಂದಿಗೆ ಪೊಲೀಸರಿಗೆ ಶರಣಾದ ತಂದೆ
- Movies
ಮೊದಲ ವಾರವೇ ಹೊರಹೋಗ್ತಾರಾ ಶುಭಾ ಪೂಂಜಾ: ನಾಮಿನೇಟ್ ಆಗಿದ್ದು ಹೇಗೆ?
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಂಡ 2021ರ ಯಮಹಾ ಆರ್15 ವಿ3 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಯಮಹಾ ತನ್ನ ಹೊಸ 2021ರ ಆರ್15 ವಿ3 ಬೈಕನ್ನು ಇಂಡೋನೇಷ್ಯಾದಲ್ಲಿ ಬಿಡುಗಡೆಗೊಳಿಸಿದೆ. ಈ 2021ರ ಯಮಹಾ ಆರ್15 ವಿ3 ಬೈಕ್ ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ.

2021ರ ಯಮಹಾ ಆರ್15 ವಿ3 ಬೈಕ್ ಬ್ಲೂ ಮತ್ತು ಗ್ರೇ ಬಣ್ಣದೊಂದಿಗೆ ಹೊಸದಾಗಿ ಮ್ಯಾಟಲಿಕ್ ಬ್ಲೂ ಬಣ್ಣವನ್ನು ಪಡೆದುಕೊಂಡಿದೆ. ಈ ಹೊಸ ಯಮಹಾ ಬೈಕಿನ ಫೇರಿಂಗ್‌ನಲ್ಲಿ ಬಿಳಿ ಗ್ರಾಫಿಕ್ಸ್ ಅನ್ನು ಒಳಗೊಂಡಿದೆ. ಇದು ಇಂಡಿಯಾ-ಸ್ಪೆಕ್ ಆರ್15 ನಲ್ಲಿ ಲಭ್ಯವಿರುವ ಡಾರ್ಕ್ ನೈಟ್ ಬಣ್ಣಕ್ಕೆ ಸ್ವಲ್ಪಮಟ್ಟಿಗೆ ಹೋಲುತ್ತದೆ. 2021ರ ಯಮಹಾ ಆರ್15 ವಿ3 ಬೈಕ್ ಮ್ಯಾಟ್ ಸಿಲ್ವರ್ ಬಣ್ಣದ ಆಯ್ಕೆಯಲ್ಲಿಯು ಲಭ್ಯವಿರಲಿದೆ.

2021ರ ಯಮಹಾ ಆರ್15 ವಿ3 ಬೈಕ್ ಸ್ಪೋರ್ಟಿ ಪ್ರೊಫೈಲ್ ಅನ್ನು ಹೊಂದಿದ್ದು, ಹೆಡ್‌ಲ್ಯಾಂಪ್ ಕೌಲ್, ಫ್ಯೂಯಲ್ ಟ್ಯಾಂಕ್, ಫೇರಿಂಗ್ ಮತ್ತು ಅಲಾಯ್ ವ್ಹೀಲ್ ಗಳು ಬ್ಲೂ ಶೇಡ್ ಅನ್ನು ಒಳಗೊಂಡಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

2021ರ ಯಮಹಾ ಆರ್15 ವಿ3 ಬೈಕನ್ನು ಹೊಸ ಬಣ್ಣದಲ್ಲಿ ಬಿಡುಗಡೆಗೊಳಿಸಲಾಗಿದೆ. ಇದನ್ನು ಹೊರತುಪಡೆಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇನ್ನು ಹೊಸ ಬಣ್ಣದ ಆಯ್ಕೆಯಲ್ಲಿ ಆರ್15 ವಿ3 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

2021ರ ಯಮಹಾ ಆರ್15 ವಿ3 ಬೈಕಿನಲ್ಲಿ ಅದೇ 155 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 19.3 ಬಿಹೆಚ್‍ಪಿ ಪವರ್ ಮತ್ತು 14.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇನ್ನು ಈ ಹೊಸ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಆರ್15 ನಲ್ಲಿರುವಂತ ಗೋಲ್ಡನ್-ಫಿನಿಶಿಂಗ್ ಅನ್ನು ಹೊಂದಿರುವ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಹೊಂದಿದೆ.

ಯಮಹಾ ಆರ್15 ವಿ3 ಬೈಕಿನ ಹಿಂದಿನ ಮಾದರಿಯಲ್ಲಿರುವಂತೆ, ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಟೈಲ್-ಲ್ಯಾಂಪ್, ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಸಂಪೂರ್ಣ ಡಿಜಿಟಲ್ ಎಲ್‌ಸಿಡಿ ಡಿಸ್ ಪ್ಲೇ ಮತ್ತು ಸ್ಪ್ಲಿಟ್-ಸ್ಟೈಲ್ ಸ್ಟೆಪ್-ಅಪ್ ಸೀಟ್ ಅನ್ನು ಹೊಂದಿದೆ. ಇದರೊಂದಿಗೆ ರೇಡಿಯಲ್ ಟಯರ್, ಡ್ಯುಯಲ್ ಡ್ಯುಯಲ್-ಹಾರ್ನ್ ಮತ್ತು ಸೈಡ್-ಸ್ಟ್ಯಾಂಡ್ ಆಕ್ಟಿವೇಟೆಡ್ ಎಂಜಿನ್ ಕಟ್-ಆಫ್ ಫೀಚರುಗಳನ್ನು ಒಳಗೊಂಡಿವೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ, ಮುಂಭಾಗದಲ್ಲಿ 282 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

2021ರ ಯಮಹಾ ಆರ್15 ವಿ3 ಬೈಕ್ ಮಾರುಕಟ್ಟೆಯಲ್ಲಿ ಕೆಟಿಎಂ ಆರ್‌ಸಿ 200 ಮತ್ತು ಸುಜುಕಿ ಜಿಕ್ಸರ್ ಎಸ್‌ಎಫ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಭಾರತೀಯ ಮಾರುಕಟ್ಟೆಯಲ್ಲಿರುವ ಯಮಹಾ ಆರ್15 ಬೈಕ್ ಕೂಡ ಹೊಸ ಬಣ್ನದ ಆಯ್ಕೆಯನ್ನು ಪಡೆಯಬಹುದು.