ಹೊಸ ಬಣ್ಣಗಳ ಆಯ್ಕೆಯಲ್ಲಿ ಅನಾವರಣಗೊಂಡ 2022ರ ಕವಾಸಕಿ ವಲ್ಕನ್ ಎಸ್ ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಕವಾಸಕಿ ತನ್ನ 2022ರ ವಲ್ಕನ್ ಎಸ್ ಬೈಕನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಈ 2022ರ ಕವಾಸಕಿ ವಲ್ಕನ್ ಎಸ್ ಬೈಕ್ ಎರಡು ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ.

2022ರ ಕವಾಸಕಿ ವಲ್ಕನ್ ಎಸ್ ಬೈಕ್ ಮೊದಲನೆಯದು ಮೆಟಾಲಿಕ್ ಮ್ಯಾಟ್ ಗ್ರ್ಯಾಫೀನ್ ಸ್ಟೀಲ್ ಗ್ರೇ ವಿತ್ ಮ್ಯಾಟ್ ಗ್ರ್ಯಾಫೈಟ್ ಗ್ರೇ ಬಣ್ಣವಾಗಿದೆ. ಇದು ಗ್ರೇ ಶೇಡ್ ಗಳೊಂದಿಗೆ ಸಂಯೋಜಿಸುತ್ತದೆ ಮತ್ತು ಟ್ಯಾಂಕ್ ಮತ್ತು ರಿಮ್ ಟೇಪ್‌ಗಳಲ್ಲಿ ಗ್ರೀನ್ ಮುಖ್ಯಾಂಶಗಳನ್ನು ಸಂಯೋಜಿಸುತ್ತದೆ. ಇನ್ನು ಎರಡನೆಯನ್ನು ಪರ್ಲ್ ರೊಬೊಟಿಕ್ ವೈಟ್ ಎಂಬ ಬಣ್ಣವಾಗಿದೆ. ರೇಡಿಯೇಟರ್ ಗಾರ್ಡ್ ಮತ್ತು ಇಂಧನ ಟ್ಯಾಂಕ್ ಗ್ರಾಫಿಕ್ಸ್‌ನಲ್ಲಿ ನೀಲಿ ಗ್ರೇಡಿಯಂಟ್ ಅಸ್ಸೆಂಟ್ ಗಳನ್ನು ಹೊಂದಿದೆ.

ಈ ಬೈಕಿನ ಇಂಧನ ಟ್ಯಾಂಕ್ ನಲ್ಲಿ ಎಸ್' ಗ್ರಾಫಿಕ್ ಅನ್ನು ಸಹ ಹೊಂದಿದೆ. ಹೊಸ ಬಣ್ಣಗಳ ಪರಿಚಯದ ಹೊರತಾಗಿ ಈ ಬೈಕಿನಲ್ಲಿ ಉಳಿದ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಭಾರತದಲ್ಲಿ ಮಾರಾಟವಾಗುವ ಮಾದರಿಯಂತೆಯೇ ಉಳಿದಿದೆ.

ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ 649ಸಿಸಿ ಪ್ಯಾರೆಲಲ್ ಲಿಕ್ವಿಡ್-ಟ್ವಿನ್ ಎಂಜಿನ್ ಹೊಂದಿದೆ. ಈ ಎಂಜಿನ್ 7500 ಆರ್‌ಪಿಎಂನಲ್ಲಿ 60 ಬಿಹೆಚ್‍ಪಿ ಪವರ್ ಮತ್ತು 7000 ಆರ್‌ಪಿಎಂನಲ್ಲಿ 62.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಇನ್ನು ಕವಾಸಕಿ ಝಡ್650 ಮತ್ತು ನಿಂಝಾ 650 ಬೈಕಿನಲ್ಲಿರುವಂತಹ ಅದೇ ಮಾದರಿಯ ಫೀಚರ್ ಗಳನ್ನು ಹೊಸ ವಲ್ಕನ್ ಬೈಕಿನಲ್ಲಿ ಲಭ್ಯವಿದೆ. ಆದರೆ ಬ್ಲೂಟೂತ್ ಕನೆಕ್ಟಿವಿಟಿ ಹೊಂದಿರುವ ಇನ್ಸ್ ಟ್ರೂಮೆಂಟ್ ಕನ್ಸೋಲ್ ಫೀಚರ್ ಈ ವಲ್ಕನ್ ಬೈಕಿನಲ್ಲಿ ನೀಡಲಾಗಿಲ್ಲ.

2022ರ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ ರೆಟ್ರೋ ವಿನ್ಯಾಸದ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ಇದರೊಂದಿಗೆ ಬ್ಲ್ಯಾಕ್ ಕೌಲ್, ಎರಡು ಕಡೆಗಳಲ್ಲಿ ದುಂಡಗಿನ ಆಕಾರದ ಫೆಂಡರ್‌ಗಳು ಮತ್ತು ಹಿಂಭಾಗದಲ್ಲಿ ಸೆಟ್ ಟರ್ನ್ ಸಿಗ್ನಲ್ ಇಂಡಿಕೇಟರ್ ಗಳನ್ನು ಹೊಂದಿದೆ.

ಹೊಸ ಕವಾಸಕಿ ವಲ್ಕನ್ ಎಸ್ ಬೈಕ್ 1575 ಎಂಎಂ ಉದ್ದದ ವ್ಹೀಲ್ ಬೇಸ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ 130 ಎಂಎಂ ಪ್ರಿ-ಲೋಡ್ ಆಫ್-ಸೆಟ್ ಮಾದರಿಯ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಡ್ಯುಯಲ್ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ 250 ಎಂಎಂ ಯುನಿಟ್ ಅನ್ನು ನೀಡಲಾಗಿದೆ. ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಹೊಂದಿದೆ.

ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ 14-ಲೀಟರ್ ಫೇರ್ಡ್ ಫ್ಯೂಯಲ್ ಟ್ಯಾಂಕ್, ಅಪ್-ರೈಟ್ ಹ್ಯಾಂಡಲ್‌ಬಾರ್ ಮತ್ತು ಫಾರ್ವರ್ಡ್-ಸೆಟ್ ಫುಟ್‌ಪೆಗ್‌ಗಳನ್ನು ಹೊಂದಿವೆ. ಇನ್ನು ಈ ಬೈಕಿನಲ್ಲಿ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಹೊಂದಿದೆ. ಕವಾಸಕಿ ವಲ್ಕನ್ ಎಸ್ ಬೈಕ್ ಮಾರುಕಟ್ಟೆಯಲ್ಲಿ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ


Click it and Unblock the Notifications








