ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಬಹುನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಸ್ಕೂಟರ್ ಮಾದರಿಯನ್ನು ಇದೇ ತಿಂಗಳು 15ರಂದು ಬಿಡುಗಡೆಯಾಗುತ್ತಿರುವುದಾಗಿ ಓಲಾ ಸಿಇಓ ಭಾವಿಶ್ ಅಗರ್‌ವಾಲ್ ಖಚಿತಪಡಿಸಿದ್ದಾರೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಹೊಸ ಎಲೆಕ್ಟ್ರಿಕ್ ಬಿಡುಗಡೆಯ ದಿನದಂದೆ ಅಧಿಕೃತ ಹೆಸರು ಮತ್ತು ತಾಂತ್ರಿಕ ಅಂಶಗಳನ್ನು ಅನಾವರಣಗೊಳಿಸಲಿರುವ ಓಲಾ ಕಂಪನಿಯು ಸ್ಕೂಟರ್ ಬಿಡುಗಡೆಯ ನಂತರ ವಿತರಣೆಗೆ ಸಿದ್ದತೆ ನಡೆಸಲಿದ್ದು, ಸ್ಕೂಟರ್ ಬಿಡುಗಡೆಯ ನಂತರ ಅಧಿಕೃತ ಶೋರೂಂಗಳು, ಸರ್ವಿಸ್ ಸೆಂಟರ್‌ಗಳಿಗೆ ಚಾಲನೆ ನೀಡಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಓಲಾ ಎಲೆಕ್ಟ್ರಿಕ್ ಕಂಪನಿಯು ಚಾರ್ಜಿಂಗ್ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಸ್ಕೂಟರ್ ಮಾದರಿಯನ್ನು ಆರಂಭಿಕವಾಗಿ ಕೆಲವೇ ನಗರಗಳಲ್ಲಿ ಬಿಡುಗಡೆ ಮಾಡಬಹುದು ಎನ್ನಲಾಗಿದ್ದು, ಸ್ಕೂಟರ್ ಉತ್ಪಾದನೆ ಹೆಚ್ಚಿದಂತೆ ಮಾರಾಟ ವ್ಯಾಪ್ತಿಯನ್ನು ಹೆಚ್ಚಿಸಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗಾಗಿ ಓಲಾ ಕಂಪನಿಯು ಈಗಾಗಲೇ ರೂ. 499 ಮುಂಗಡದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದ್ದು, ಹೊಸ ಸ್ಕೂಟರ್ ಖರೀದಿಗಾಗಿ ಈಗಾಗಲೇ ಸುಮಾರು 1.50 ಲಕ್ಷಕ್ಕೂ ಹೆಚ್ಚು ಗ್ರಾಹಕರು ಮುಂಗಡ ಪಾವತಿಸಿದ್ದಾರೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಕೋವಿಡ್ ಪರಿಣಾಮ ಓಲಾ ಕಂಪನಿಯು ಆನ್‌ಲೈನ್ ವಾಹನ ಮಾರಾಟ ಮತ್ತು ಅಧಿಕೃತ ಶೋರೂಂ ಎರಡು ಮಾದರಿಯಲ್ಲೂ ವಾಹನ ವಿತರಣೆ ಮಾಡಲಿದ್ದು, ವಿವಿಧ ಬ್ಯಾಂಕ್‌ಗಳ ಜೊತೆಗೂಡ ವಿವಿಧ ಮಾದರಿಯ ಸಾಲಸೌಲಭ್ಯಗಳನ್ನು ಪರಿಚಯಿಸಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಇನ್ನು ಹೊಸ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸುಮಾರು ಹತ್ತು ಹೊಸ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಪ್ಯಾಸ್ಟೆಲ್ ರೆಡ್, ಯೆಲ್ಲೊ, ಬ್ಲ್ಯೂ, ವೈಟ್, ಮೆಟಾಲಿಕ್ ಸಿಲ್ವರ್, ರೋಜ್ ಗೋಲ್ಡ್, ಪಿಂಕ್, ಮ್ಯಾಟೆ ಬ್ಲ್ಯಾಕ್, ಬ್ಲ್ಯೂ ಮತ್ತು ಗ್ರೆ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಹೊಸ ಸ್ಕೂಟರ್‌ನಲ್ಲಿ ಓಲಾ ಕಂಪನಿಯು ಎರಡು ಮಾದರಿಯ ಬ್ಯಾಟರಿ ಪ್ಯಾಕ್ ನೀಡುವ ಸಾಧ್ಯತೆಗಳಿದ್ದು, ಸಿಂಗಲ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ಪ್ರತಿ ಚಾರ್ಜ್‌ಗೆ 140 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ ಡ್ಯುಯಲ್ ಬ್ಯಾಟರಿ ಬ್ಯಾಕ್ಅಪ್ ಹೊಂದಿರುವ ಮಾದರಿಯಿಂದ ಗರಿಷ್ಠ 240 ಕಿ.ಮೀ ಮೈಲೇಜ್ ಪಡೆಯಬಹುದಾಗಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಈ ಮೂಲಕ ಓಲಾ ಹೊಸ ಸ್ಕೂಟರ್ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಾಗಿರುವ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯದ ಮೇಲೆ ವಿಶೇಷ ಆಸಕ್ತಿ ವಹಿಸಿರುವ ಓಲಾ ಕಂಪನಿಯು ದೇಶದ ಪ್ರಮುಖ 400 ನಗರಗಳಲ್ಲಿ 1 ಲಕ್ಷ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಜಾಲವನ್ನು ವಿಸ್ತರಿಸುತ್ತಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಓಲಾ

ಎಲೆಕ್ಟ್ರಿಕ್ ವಾಹನಗಳಿಗೆ ಹೋಂ ಚಾರ್ಜರ್ ಸೌಲಭ್ಯ ಹೊರತುಪಡಿಸಿ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗುತ್ತಿದ್ದು, ಹೈಪರ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಗಂಟೆಗೆ ನೂರಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಒಂದೇ ಅವಧಿಯಲ್ಲೇ ಚಾರ್ಜ್ ಮಾಡಬಹುದಾಗಿದೆ.

Most Read Articles

Kannada
English summary
Ola Electric scooter to be launched on August 15. Read in kannada.
Story first published: Tuesday, August 3, 2021, 12:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X