ಜುಲೈ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಬಹನೀರಿಕ್ಷಿತ ಓಲಾ ಎಲೆಕ್ಟ್ರಿಕ್ ಸ್ಕೂಟರ್
ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಎಲಕ್ಟ್ರಿಕ್ ಮಾದರಿಯಾಗಿ ಆ್ಯಪ್ ಇವಿ ಮಾದರಿಯನ್ನು ಬಿಡುಗಡೆ ಮಾಡುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಸ್ಕೂಟರ್ ಮುಂಬರುವ ಜುಲೈ ಅಂತ್ಯಕ್ಕೆ ಮಾರುಕಟ್ಟೆ ಪ್ರವೇಶಿಸಲಿದೆ ಎನ್ನಲಾಗಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲಿ ಹಲವಾರು ಸ್ಟಾಟ್ ಅಪ್ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮುಂಚೂಣಿ ಸಾಧಿಸುತ್ತಿದ್ದು, ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳೊಂದಿಗೆ ಗ್ರಾಹಕರ ಸೆಳೆಯುವಲ್ಲಿ ಯಶಸ್ವಿಯಾಗುತ್ತಿವೆ. ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಆಟೋ ಉತ್ಪಾದನಾ ಕ್ಷೇತ್ರಕ್ಕೆ ಅಧಿಕೃತವಾಗಿ ಪ್ರವೇಶಿಸಿರುವ ಕ್ಯಾಬ್ ಸೇವಾ ಕಂಪನಿ ಓಲಾ ಅಂಗಸಂಸ್ಥೆಯಾದ ಓಲಾ ಎಲೆಕ್ಟ್ರಿಕ್ ಸಹ ಮೊದಲ ಬಾರಿಗೆ ವಾಹನಗಳ ಉತ್ಪಾದನೆದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದೆ.

ಭಾರತದಲ್ಲೇ ಪೂರ್ಣ ಪ್ರಮಾಣದ ವಾಹನ ಉತ್ಪಾದನೆಯ ಗುರಿಹೊಂದಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಭಾರತದಿಂದಲೇ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ಇವಿ ವಾಹನಗಳನ್ನು ರಫ್ತು ಮಾಡಲು ಸಿದ್ದವಾಗಿದೆ.

ಈ ವರ್ಷಾಂತ್ಯಕ್ಕೆ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿರುವ ಓಲಾ ಕಂಪನಿಯು ತಮಿಳುನಾಡಿನ ಹೊಸೂರಿನಲ್ಲಿ ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಮೊದಲ ಹಂತದ ನಿರ್ಮಾಣ ಪ್ರಕ್ರಿಯೆಗಳನ್ನು ಆರಂಭಿಸಿದೆ.

ಹೊಸ ಸ್ಕೂಟರಿನ ಅಧಿಕೃತ ಚಿತ್ರಗಳನ್ನು ಈಗಾಗಲೇ ಬಹಿರಂಗಪಡಿಸಿರುವ ಓಲಾ ಕಂಪನಿಯು ಹೊಸ ಸ್ಕೂಟರ್‌ನಲ್ಲಿ ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾದ ಬ್ಯಾಟರಿ ಜೋಡಣೆ ಮಾಡಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಹೊಸ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ಮಾದರಿಗಳಿಗೆ ಬೆಲೆ ವಿಚಾರದಲ್ಲಿ ಮೈಲೇಜ್ ವಿಚಾರದಲ್ಲಿ ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಬೃಹತ್ ಪ್ರಮಾಣದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿಸಿರುವ ಓಲಾ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಹೊಸ ಇವಿ ವಾಹನಗಳನ್ನು ರಫ್ತು ಮಾಡುವ ಬೃಹತ್ ಯೋಜನೆ ಹೊಂದಿದೆ.

ಓಲಾ ಕಂಪನಿಯು ಹೊಸ ವಾಹನ ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ನಿರ್ಮಾಣ ಮಾಡಲಾಗುತ್ತಿದ್ದು, ಈ ಮೂಲಕ ಹೊಸ ಘಟಕವು ದೇಶದ ಅತ್ಯಾಧುನಿಕ ವಾಹನ ಉತ್ಪಾದನಾ ಘಟಕಗಳಲ್ಲಿ ಒಂದಾಗಲಿದೆ. ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಿವಿಧ ಕಾರ್ಯಗಳಿಗಾಗಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲು ನಿರ್ಧರಿಸಲಾಗುತ್ತಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿರುವ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳ ನಿರ್ಮಾಣದ ಗುರಿ ಹೊಂದಲಾಗಿದ್ದು, ಪ್ರತಿ 2 ಸೆಕೆಂಡುಗಳಲ್ಲಿ 1 ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಗೊಳ್ಳಲಿದೆ.

ವಿವಿಧ ಉತ್ಪಾದನಾ ಹಂತಗಳಲ್ಲಿ ಒಂದೇ ಬಾರಿಗೆ ನೂರಾರು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅಸೆಂಬ್ಲಿ ಮಾಡುವ ರೋಬೋಟ್‌ಗಳು ಅಂತಿಮವಾಗಿ ಪ್ರತಿ ಸೆಕೆಂಡುಗಳಲ್ಲಿ ಒಂದು ಉತ್ಪಾದನಾ ಮಾದರಿಯನ್ನು ಮಾರಾಟಕ್ಕೆ ಸಿದ್ದಗೊಳಿಸಲಿವೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ಯೋಜನೆಗಾಗಿ ಓಲಾ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಸದ್ಯ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಇವಿ ವಾಹನಗಳನ್ನು ಅಭಿವೃದ್ದಿಪಡಿಸಲಿದೆ.


Click it and Unblock the Notifications








