ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಇಂಧನಗಳ ಬೆಲೆ ಹೆಚ್ಚಳದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ಹೆಚ್ಚುತ್ತಿದ್ದು, ವಿವಿಧ ಎಲೆಕ್ಟ್ರಿಕ್ ವಾಹನಗಳ ಮಾದರಿಗಳಿಗೆ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಹರಿದುಬರುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಎಲೆಕ್ಟ್ರಿಕ್ ವಾಹನಗಳ ಮಾರಾಟವು 2020ರಿಂದ ಉತ್ತಮ ಬೆಳವಣಿಗೆ ಕಾಣುತ್ತಿದ್ದು, ಇವಿ ವಾಹನ ಮಾರಾಟ ಕಂಪನಿಗಳು ಉತ್ತಮ ಬೇಡಿಕೆ ದಾಖಲಿಸಿವೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಆರಂಭಿಸಿ ಸುಮಾರು 13 ವರ್ಷಗಳ ಅನುಭವ ಹೊಂದಿರುವ ಆಂಪಿಯರ್ ಎಲೆಕ್ಟ್ರಿಕ್ ಕಂಪನಿಯು ಕೂಡಾ ಸುಧೀರ್ಘ ಅವಧಿಯ ಪ್ರಯಾಣದಲ್ಲಿ ಹಲವಾರು ಬದಲಾವಣೆಗಳಿಗೆ ಕಾರಣವಾಗಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ತನ್ನ ವಾಹನ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಪ್ರಸ್ತುತ ಮಾರುಕಟ್ಟೆಯಲ್ಲಿ 190 ನಗರಗಳಲ್ಲಿ ತನ್ನ ಮಾರಾಟ ಜಾಲ ಹೊಂದಿರುವ ಆಂಪಿಯರ್ ಕಂಪನಿಯು ಬರೋಬ್ಬರಿ 500 ಮಾರಾಟ ಮಳಿಗೆಗಳ ಮೂಲಕ ಗ್ರಾಹಕರ ತಲುಪಲು ಯಶಸ್ವಿಯಾಗಿರುವ ಕಂಪನಿಯು ಇದುವರೆಗೆ 1 ಲಕ್ಷ ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದೊಂದಿಗೆ ಹೊಸ ಗುರಿಸಾಧನೆಗೆ ಪಾತ್ರವಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಕಳೆದ 13 ವರ್ಷಗಳಲ್ಲಿ ಮೊದಲ ಬಾರಿಗೆ ಕಳೆದ ಎರಡು ವರ್ಷಗಳಿಂದ ಇವಿ ವಾಹನಗಳ ಮಾರಾಟ ಹೆಚ್ಚಳವಾಗಿದ್ದರೂ ಪೆಟ್ರೋಲ್ ವಾಹನಗಳ ಅಬ್ಬರದ ನಡುವೆಯು ಪರಿಸರ ಸ್ನೇಹಿ ಮಾರಾಟದಲ್ಲಿ ಬದ್ದತೆ ಪ್ರದರ್ಶಿಸುವ ಮೂಲಕ ಹೊಸ ಸಾಧನೆಯತ್ತ ಮುನ್ನುಗ್ಗುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಆಂಪಿಯರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಹೊಸದಾಗಿ ಬಿಡುಗಡೆ ಮಾಡಿರುವ ಹೊಸ ವೆರಿಯೆಂಟ್‌ಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಗ್ರಾಹಕರ ಬೇಡಿಕೆಯೆಂತೆ ಹೊಸ ಸ್ಕೂಟರ್‌ಗಳಲ್ಲಿ ಹೆಚ್ಚಿನ ಮಟ್ಟದ ಮೈಲೇಜ್ ಪ್ರೇರಿತ ಬ್ಯಾಟರಿ ಸೌಲಭ್ಯ, ಹೆಚ್ಚಿನ ಮಟ್ಟದ ಲೋಡಿಂಗ್ ಸಾಮಾರ್ಥ್ಯವನ್ನು ನೀಡಲಾಗಿದ್ದು, ಹೊಸ ವೆರಿಯೆಂಟ್‌ಗಳನ್ನು ರಿಯೋ, ವಿ48, ಮ್ಯಾಗ್ನಸ್ 60 ಮತ್ತು ಜೀಲ್ ಮಾದರಿಗಳಲ್ಲಿ ಪರಿಚಯಿಸಲಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ರಿಯೋ ಪ್ಲಸ್, ರಿಯೋ ಎಲೈಟ್, ವಿ48 ಪ್ಲಸ್, ಮ್ಯಾಗ್ನಸ್ 60 ಸ್ಲೋ ಸ್ಪೀಡ್ ಮತ್ತು ಜೀಲ್ ಇಎಕ್ಸ್ ಮಾದರಿಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಇವಿ ಸ್ಕೂಟರ್ ವೆರಿಯೆಂಟ್‌ಗಳಲ್ಲಿ ಮೈಲೇಜ್ ಹೆಚ್ಚಳಕ್ಕಾಗಿ ಲೀಥಿಯಂ ಮತ್ತು ಲೀಡ್ ಆ್ಯಸಿಡ್ ಬ್ಯಾಟರಿ ಮಾದರಿಗಳ ಆಯ್ಕೆ ನೀಡಲಾಗಿದೆ. ಪ್ರತಿ ಚಾರ್ಜ್‌ಗೆ ವಿವಿಧ ಸ್ಕೂಟರ್‌ಗಳು ಬ್ಯಾಟರಿ ಆಯ್ಕೆಯ ಆಧಾರದ ಮೇಲೆ ಕನಿಷ್ಠ 65 ಕಿ.ಮೀ ನಿಂದ 90 ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಂಡಿವೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಆಂಪಿಯರ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರಮುಖವಾಗಿ ಪರ್ಫಾಮೆನ್ಸ್ ಮತ್ತು ಎಕಾನಮಿ ಮಾದರಿಗಳಾಗಿ ಮಾರಾಟಗೊಳ್ಳುತ್ತಿದ್ದು, ಆರಂಭಿಕ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 35 ಸಾವಿರದಿಂದ ಟಾಪ್ ಎಂಡ್ ಮಾದರಿಯು ರೂ. 75 ಸಾವಿರ ಬೆಲೆ ಹೊಂದಿವೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಅಪ್‌ಗ್ರೇಡ್ ಮಾದರಿಗಳಲ್ಲಿ ಶೇ.10 ಮೈಲೇಜ್ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಗ್ರಾಹಕರ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಸ ಮಾದರಿಗಳಲ್ಲಿ ಜೋಡಣೆ ಮಾಡಲಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಇನ್ನು ಕೋವಿಡ್ ಪರಿಣಾಮ ಹೊಸ ವಾಹನಗಳ ಖರೀದಿ ಭರಾಟೆ ಜೋರಾಗಿದ್ದು, ವೈರಸ್ ಭೀತಿಯಿಂದ ಬಹುತೇಕರು ಸ್ವಂತ ವಾಹನ ಖರೀದಿಗೆ ಮುಂದಾಗುತ್ತಿದ್ದಾರೆ. ಆದರೆ ಹೊಸ ವಾಹನ ಖರೀದಿಯು ಎಲ್ಲರಿಗೂ ಕಷ್ಟಸಾಧ್ಯ. ಹೀಗಾಗಿ ಪರಿಸ್ಥಿತಿಗೆ ಅನುಗುಣವಾಗಿ ನಿಗದಿತ ಅವಧಿಗಾಗಿ ರೆಂಟಲ್ ವಾಹನಗಳ ಮೂಲಕ ಇಂತಿಷ್ಟು ಅವಧಿಗೆ ಮಾಲೀಕತ್ವ ಪಡೆದುಕೊಳ್ಳುವ ಪ್ರಕ್ರಿಯೆ ಹೆಚ್ಚುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಸೆಲ್ಫ್ ಡ್ರೈವ್ ಮತ್ತು ಸೆಲ್ಫ್ ರೈಡ್ ವಾಹನಗಳಿಗೆ ಮಹಾನಗರಗಳಲ್ಲಿ ಹೆಚ್ಚಿನ ಬೇಡಿಕೆ ಉಂಟಾಗುತ್ತಿದ್ದು, ಇಬೈಕ್‌ಗೊ ಎನ್ನುವ ಕಂಪನಿಯು ಕೂಡಾ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮೂಲಕ ರೆಂಟಲ್ ಪ್ರಕ್ರಿಯೆಯನ್ನು ಹೆಚ್ಚಿಸುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಇದಕ್ಕಾಗಿ ಆಂಪಿಯರ್ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿ ಜೊತೆಗೂಡಿರುವ ಇಬೈಕ್‌ಗೊ ಕಂಪನಿಯು ಸುಮಾರು 2 ಸಾವಿರ ಹೈ ರೆಂಜ್ ಮೈಲೇಜ್ ಹೊಂದಿರುವ ಆಂಪಿಯೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ರೆಂಟಲ್ ಮಾದರಿಯಾಗಿ ಬಳಕೆ ಮಾಡುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಇದಲ್ಲದೇ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯು ಪ್ರಮುಖ ಪ್ರಕಟಣೆಯನ್ನು ಹೊರಡಿಸಿದ್ದು, ಇದರನ್ವಯ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಎಲೆಕ್ಟ್ರಿಕ್ ವಾಹನಗಳ ದಾಖಲೆಯನ್ನು ನವೀಕರಿಸಲು ಸಹ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಇದಕ್ಕೂ ವಿನಾಯಿತಿ ನೀಡಲಾಗಿದೆ. ಆಗಸ್ಟ್ 2 ರಂದು ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂ ನೋಂದಣಿ ನವೀಕರಣ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಆಂಪಿಯರ್

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಈ ಘೋಷಣೆ ಮಾಡಲಾಗಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಹೇಳಿದೆ. ಈ ಘೋಷಣೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗಿರುವವರಲ್ಲಿ ಉತ್ಸಾಹವನ್ನು ಉಂಟು ಮಾಡಿದೆ.

Most Read Articles

Kannada
English summary
Ampere electric achieves 1 lakh units sales milestone details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X