Just In
- 1 hr ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 2 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 2 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 3 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಯಲ್ಲಾಪುರ ಭೂಕುಸಿತ: ಯುವತಿಯ ಮದುವೆ ಕನಸು "ಮಣ್ಣು'ಪಾಲು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Movies
ಬಿಗ್ಬಾಸ್: ಎರಡನೇ ವಾರಕ್ಕೆ ಐದು ಮಂದಿ ಮೇಲೆ ನಾಮಿನೇಷನ್ ಕತ್ತಿ
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇವಿ ಸ್ಕೂಟರ್ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಆಂಪಿಯರ್
ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಆರಂಭಿಸಿ ಸುಮಾರು 13 ವರ್ಷಗಳ ಅನುಭವ ಹೊಂದಿರುವ ಆಂಪಿಯರ್ ಎಲೆಕ್ಟ್ರಿಕ್ ಕಂಪನಿಯು ಸುಧೀರ್ಘ ಅವಧಿಯ ಪ್ರಯಾಣದಲ್ಲಿ ಹಲವಾರು ಬದಲಾವಣೆಗಳಿಗೆ ಕಾರಣವಾಗಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ತನ್ನ ವಾಹನ ಮಾರಾಟದಲ್ಲಿ ಹಲವು ಹೊಸ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದು, ಎಲೆಕ್ಟ್ರಿಕ್ ವಾಹನ ಮಾರಾಟಗಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಮಟ್ಟದ ಬೇಡಿಕೆ ಹರಿದುಬಂದಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಇವಿ ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗಿರುವ ಆಂಪಿಯರ್ ಕಂಪನಿಯು ಉತ್ಪಾದನಾ ಘಟಕದ ವಿಸ್ತರಣೆಗೆ ಸಿದ್ದತೆ ನಡೆಸಿದೆ.

ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿರುವ ಆಂಪಿಯರ್ ಕಂಪನಿಯು ತಮಿಳುನಾಡಿನ ರಾಣಿಪೇಟೆ ಜಿಲ್ಲೆಯಲ್ಲಿ ಹೊಸ ವಾಹನ ಉತ್ಪಾದನಾ ಘಟಕ ತೆರೆಯುವ ಸಿದ್ದತೆಯಲ್ಲಿದ್ದು, ಹೊಸ ಘಟಕದ ನಿರ್ಮಾಣ ಮತ್ತು ಆಧುನಿಕ ವಾಹನ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸುಮಾರು ರೂ. 700 ಕೋಟಿ ಹೂಡಿಕೆಗೆ ಸಿದ್ದವಾಗಿದೆ.

ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳೊಂದಿಗೆ ಈಗಾಗಲೇ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಆಂಪಿಯರ್ ಕಂಪನಿಯು ಹೊಸ ಯೋಜನೆ ಅಡಿ ಮತ್ತಷ್ಟು ಹೊಸ ಮಾದರಿಯ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಪರಿಚಯಿಸುತ್ತಿದ್ದು, 10.40 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಆಂಪಿಯೆರ್ ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವು ಇದೇ ವರ್ಷಾಂತ್ಯಕ್ಕೆ ಆರಂಭವಾಗುವ ಸಿದ್ದತೆಯಲ್ಲಿದೆ.

ಇನ್ನು ಆಂಪಿಯರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಆರು ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಹೊಸದಾಗಿ ಬಿಡುಗಡೆ ಮಾಡಿರುವ ಹೊಸ ವೆರಿಯೆಂಟ್‌ಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಸ್ಕೂಟರ್‌ಗಳಲ್ಲಿ ಹೆಚ್ಚಿನ ಮಟ್ಟದ ಮೈಲೇಜ್ ಪ್ರೇರಿತ ಬ್ಯಾಟರಿ ಸೌಲಭ್ಯ, ಹೆಚ್ಚಿನ ಮಟ್ಟದ ಲೋಡಿಂಗ್ ಸಾಮಾರ್ಥ್ಯವನ್ನು ನೀಡಲಾಗಿದ್ದು, ಹೊಸ ವೆರಿಯೆಂಟ್‌ಗಳನ್ನು ರಿಯೋ, ವಿ48, ಮ್ಯಾಗ್ನಸ್ 60 ಮತ್ತು ಜೀಲ್ ಮಾದರಿಗಳಲ್ಲಿ ಪರಿಚಯಿಸಲಾಗಿದೆ.

ರಿಯೋ ಪ್ಲಸ್, ರಿಯೋ ಎಲೈಟ್, ವಿ48 ಪ್ಲಸ್, ಮ್ಯಾಗ್ನಸ್ 60 ಸ್ಲೋ ಸ್ಪೀಡ್ ಮತ್ತು ಜೀಲ್ ಇಎಕ್ಸ್ ಮಾದರಿಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಇವಿ ಸ್ಕೂಟರ್ ವೆರಿಯೆಂಟ್‌ಗಳಲ್ಲಿ ಮೈಲೇಜ್ ಹೆಚ್ಚಳಕ್ಕಾಗಿ ಲೀಥಿಯಂ ಮತ್ತು ಲೀಡ್ ಆ್ಯಸಿಡ್ ಬ್ಯಾಟರಿ ಮಾದರಿಗಳ ಆಯ್ಕೆ ನೀಡಲಾಗಿದೆ.

ಪ್ರತಿ ಚಾರ್ಜ್‌ಗೆ ವಿವಿಧ ಸ್ಕೂಟರ್‌ಗಳು ಬ್ಯಾಟರಿ ಆಯ್ಕೆಯ ಆಧಾರದ ಮೇಲೆ ಕನಿಷ್ಠ 65 ಕಿ.ಮೀ ನಿಂದ 90 ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಂಡಿರಲಿದ್ದು, ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಪಡೆದುಕೊಳ್ಳಲಿವೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಆಂಪಿಯರ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರಮುಖವಾಗಿ ಪರ್ಫಾಮೆನ್ಸ್ ಮತ್ತು ಎಕಾನಮಿ ಮಾದರಿಗಳಾಗಿ ಮಾರಾಟಗೊಳ್ಳುತ್ತಿದ್ದು, ಆರಂಭಿಕ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 34 ಸಾವಿರದಿಂದ ಟಾಪ್ ಎಂಡ್ ಮಾದರಿಯು ರೂ. 74 ಸಾವಿರ ಬೆಲೆ ಹೊಂದಿವೆ.

ಅಪ್‌ಗ್ರೇಡ್ ಮಾದರಿಗಳಲ್ಲಿ ಶೇ.10 ಮೈಲೇಜ್ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಗ್ರಾಹಕರ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಸ ಮಾದರಿಗಳಲ್ಲಿ ಜೋಡಣೆ ಮಾಡಲಾಗಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಆಂಪಿಯರ್ ಕಂಪನಿಯು ಸದ್ಯ 190 ನಗರಗಳಲ್ಲಿ ತನ್ನ ಮಾರಾಟ ಜಾಲ ಹೊಂದಿದ್ದು, ಬರೋಬ್ಬರಿ 300 ಮಾರಾಟ ಮಳಿಗೆಗಳ ಮೂಲಕ ಗ್ರಾಹಕರ ತಲುಪಲು ಯಶಸ್ವಿಯಾಗಿರುವ ಕಂಪನಿಯು ಇದುವರೆಗೆ 75 ಸಾವಿರ ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದೊಂದಿಗೆ ಹೊಸ ಗುರಿಸಾಧನೆಗೆ ಪಾತ್ರವಾಗಿದೆ. ಕಳೆದ 13 ವರ್ಷಗಳಲ್ಲಿ ಮೊದಲ ಬಾರಿಗೆ ಕಳೆದ ಎರಡು ವರ್ಷಗಳಿಂದ ಇವಿ ವಾಹನಗಳ ಮಾರಾಟ ಹೆಚ್ಚಳವಾಗಿದ್ದರೂ ಪೆಟ್ರೋಲ್ ವಾಹನಗಳ ಅಬ್ಬರದ ನಡುವೆಯು ಪರಿಸರ ಸ್ನೇಹಿ ಮಾರಾಟದಲ್ಲಿ ಬದ್ದತೆ ಪ್ರದರ್ಶಿಸುವ ಮೂಲಕ ಹೊಸ ಸಾಧನೆಯತ್ತ ಮುನ್ನುಗ್ಗುತ್ತಿದೆ.