ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ. ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗುತ್ತಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಪರಿಸರ ಸ್ನೇಹಿ ವಾಹನಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೆ ಎಲೆಕ್ಟ್ರಿಕ್ ವಾಹನ ನೀತಿ ಅಳವಡಿಸಿಕೊಳ್ಳುತ್ತಿದ್ದು, ಇವಿ ವಾಹನಗಳಿಗಾಗಿ ಆಂಧ್ರಪ್ರದೇಶ ಸರ್ಕಾರವು ಮಹತ್ವದ ಯೋಜನೆಯೊಂದನ್ನು ಜಾರಿಗೆ ತರುತ್ತಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಪೌರ ಕಾರ್ಮಿಕರ ಮೂಲಕ ಜನರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಅರಿವು ಮೂಡಿಸಲು ಮುಂದಾಗಿರುವ ಆಂಧ್ರ ಸರ್ಕಾರವು ಬರೋಬ್ಬರಿ 25 ಸಾವಿರ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಖರೀದಿ ಮಾಡುತ್ತಿದ್ದು, ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪೌರ ಕಾರ್ಮಿಕರಿಗೆ ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ನಿರ್ಧರಿಸಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ನಿಗದಿತ ಅವಧಿ ನಂತರ ಪೌರಕಾರ್ಮಿಕರು ಸರ್ಕಾರದಿಂದ ಗುತ್ತಿಗೆ ಪಡೆದ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಸ್ವಂತಕ್ಕೆ ಖರೀದಿ ಮಾಡಬಹುದಾಗಿದ್ದು, ಹೊಸ ವಾಹನ ಖರೀದಿಗಾಗಿ ಸರ್ಕಾರವೇ ಹಣಕಾಸಿನ ಸಹಾಯ ಮಾಡಲಿದೆ. ಮಾಸಿಕ ಕಂತುಗಳಲ್ಲಿ ಹೊಸ ವಾಹನ ಖರೀದಿಸಲು ನೆರವು ನೀಡಲಿದ್ದು, ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬಳಕೆಯಿಂದ ಆಗುತ್ತಿರುವ ಅತ್ಯಧಿಕ ನಿರ್ವಹಣಾ ವೆಚ್ಚ ಮತ್ತು ಮಾಲಿನ್ಯ ತಡೆಗಾಗಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಹೆಚ್ಚಿಸಲು ಈ ಅಭಿಯಾನ ನಡೆಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಅಭಿಯಾನ ಅವಧಿಯಲ್ಲಿ ಪೌರ ಕಾರ್ಮಿಕರು ಇವಿ ವಾಹನಗಳ ಕಾರ್ಯನಿರ್ವಹಣೆ, ನಿರ್ವಹಣಾ ವೆಚ್ಚ ಮತ್ತು ಪರಿಸರಕ್ಕೆ ಹೇಗೆ ಪೂರಕ ಎಂಬುವುದನ್ನು ಸಾರ್ವಜನಿಕರಲ್ಲಿ ಅಭಿಯಾನ ಮೂಡಿಸಬೇಕಿದ್ದು, ಅಭಿಯಾನ ವೇಳೆ ಸರ್ಕಾರವೇ ಇವಿ ವಾಹನಗಳ ನಿರ್ವಹಣಾ ವೆಚ್ಚವನ್ನು ಭರಿಸಲಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಇನ್ನು ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಯನ್ನು ತಗ್ಗಿಸಲು ತುರ್ತಾಗಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಗೆ ಕೆಲವು ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಸಬ್ಸಡಿ ಪ್ರಮಾಣವನ್ನು ಚಾಲ್ತಿಯಲ್ಲಿರುವ ಪ್ರಮಾಣಕ್ಕಿಂತ ಶೇ.50 ರಷ್ಟು ಹೆಚ್ಚಳ ಮಾಡಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಹೊಸ ತಿದ್ದುಪಡಿಯ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸಬ್ಸಿಡಿ ಪ್ರಮಾಣವನ್ನು ಬ್ಯಾಟರಿ ಪ್ಯಾಕ್ ಆಧರಿಸಿ ಪ್ರತಿ ಕಿಲೋವ್ಯಾಟ್‌ಗೆ ರೂ. 15 ಸಾವಿರ ಏರಿಕೆ ಮಾಡಲಾಗಿದ್ದು, ಹೊಸ ತಿದ್ದುಪಡಿಯ ನಂತರ ಪ್ರತಿ ಇವಿ ಸ್ಕೂಟರ್ ಖರೀದಿ ಮೇಲೆ ಗ್ರಾಹಕರು ರೂ. 10 ಸಾವಿರ ರೂ.15 ಸಾವಿರದಷ್ಟು ಉಳಿತಾಯ ಮಾಡಬಹುದಾಗಿದೆ.

ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಬೃಹತ್ ಯೋಜನೆ ರೂಪಿಸಿದ ಆಂಧ್ರ ಸರ್ಕಾರ

ಹಾಗೆಯೇ ಹೊಸ ತಿದ್ದುಪಡಿಯ ಮೂಲಕ ಎಲೆಕ್ಟ್ರಿಕ್ ತ್ರಿಚಕ್ರ ಮಾರಾಟ ಪ್ರಮಾಣವನ್ನು ಇಇಎಸ್ಎಲ್ ಮೂಲಕ 3 ಲಕ್ಷ ಯುನಿಟ್‌ಗಳಿಗೆ ಏರಿಕೆ ಮಾಡಲಾಗಿದ್ದು, ಇದು ಗರಿಷ್ಠ ಸಬ್ಸಡಿಯೊಂದಿಗೆ ಇವಿ ವಾಹನ ಅಳವಡಿಸಿಕೊಳ್ಳುವ ಪ್ರಮುಖ ಸಂಸ್ಥೆಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಲಿದೆ.

Most Read Articles

Kannada
English summary
Andhra Pradesh to acquire 25,000 electric two-wheelers. Read in Kannada.
Story first published: Tuesday, July 13, 2021, 21:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X