ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಎಪ್ರಿಲಿಯಾ ಕಂಪನಿಯು ತನ್ನ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್ ಅನ್ನು ಕೆಲವು ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್ ಈ ವರ್ಷದ ಹಬ್ಬದ ಸೀಸನ್ ನಲ್ಲಿ ಭಾರತದಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್ ಅನ್ನು ಈ ವರ್ಷ ನವೀಕರಿಸಿದೆ ಎಂದು ಪಿಯಾಜಿಯೊ ಇಂಡಿಯಾದ ಅಧ್ಯಕ್ಷ ಮತ್ತು ಎಂಡಿ ಡಿಯಾಗೋ ಗ್ರಾಫಿ ಹೇಳಿದ್ದಾರೆ ಎಂದು ವರದಿಗಳಾಗಿದೆ. ನವೀಕರಿಸಿದ ಎಸ್‌ಆರ್ 160 ಜೊತೆಗೆ, ಕಂಪನಿಯು ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮತ್ತು ವೆಸ್ಪಾ ಸ್ಪೆಷಲ್ ಎಡಿಷನ್ ಮಾದರಿಯನ್ನು ದೇಶದಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್ ನವೀಕರಿಸಿದ ಹೆಡ್‌ಲ್ಯಾಂಪ್‌ಗಳೊಂದಿಗೆ ಮರುವಿನ್ಯಾಸಗೊಳಿಸಲಾದ ಮುಂಭಾಗದ ಫಾಸಿಕವನ್ನು ಒಳಗೊಒಳಗೊಂಡಿವೆ, ಇದರಲ್ಲಿ ಬ್ಲೂಟೂತ್ ತಂತ್ರಜ್ಞಾನದೊಂದಿಗೆ ಕನೆಕ್ಟ್ ಆಗಿರುವ ಹೊಸ ಕ್ಲಸ್ಟರ್ ಅನ್ನು ಹೊಂದಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಇನ್ನು ಈ ಸ್ಕೂಟರ್ ಹೊಸ ಗ್ರಾಫಿಕ್ಸ್, ಹೊಸ ಬಣ್ಣಗಳ ಆಯ್ಕೆಗಳು ಮತ್ತು ಹೊಸ ಸ್ವಿಚ್‌ಗಿಯರ್‌ಗಳನ್ನು ಸಹ ಪಡೆಯಬಹುದು. ಇನ್ನು ಈ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್‌ನಲ್ಲಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಇಂಧನ-ಇಂಜೆಕ್ಟ್ 160 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಈ ಎಂಜಿನ್ 7600 ಆರ್‌ಪಿಎಂನಲ್ಲಿ 10.8 ಬಿಹೆಚ್‍ಪಿ ಪವರ್ ಮತ್ತು 6000 ಆರ್‌ಪಿಎಂನಲ್ಲಿ 11.6 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ನಲ್ಲಿ ಯಾವುದೇ ನವೀಕರಣವನ್ನು ಮಾಡುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಈ ಹೊಸ ಸ್ಕೂಟರ್ ನಲ್ಲಿ ಟ್ವಿನ್ ಹೆಡ್‌ಲ್ಯಾಂಪ್‌ಗಳ ಸೆಟಪ್ ಅನ್ನು ಅಳವಡಿಸಲಾಗಿದೆ. ಇನ್ನು ಟರ್ನ್-ಸಿಗ್ನಲ್ ಗಳನ್ನು ಹ್ಯಾಂಡಲ್ ಬಾರ್ ಕೌಲ್ ನಲ್ಲಿ ಜೋಡಿಸಲಾಗಿದೆ. ಎಸ್‌ಆರ್ 160 ಯುವ ಪೀಳಿಗೆಯ ಖರೀದಿದಾರರನ್ನು ಆಕರ್ಷಿಸುವಂತೆ ಆಗ್ರೇಸಿವ್ ಮತ್ತು ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಅಳವಡಿಸಕಾಗಿದೆ.

MOST READ: ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಇನ್ನು ಪ್ರಮುಖವಾಗಿ ಸುರಕ್ಷತಾ ದೃಷ್ಠಿಯಿಂದ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರಲ್ಲಿ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಸೆಟಪ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಸೆಟಪ್ ಅನ್ನು ನೀಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಇನ್ನು ಈ ಸ್ಕೂಟರ್ ಕಾಂಬೈಡ್ ಬ್ರೇಕಿಂಗ್ ಸಿಸ್ಟಂ(ಸಿಬಿಎಸ್) ಅನ್ನು ಸಹ ಹೊಂದಿದೆ. ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್ 12-ಇಂಚಿನ ಅಲಾಯ್ ವ್ಹೀಲ್‌ಗಳ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದ್ದು, ಇದು ಸ್ಕೂಟರ್‌ಗೆ ಉತ್ತಮ ನಿರ್ವಹಣಾ ಸಾಮರ್ಥ್ಯವನ್ನು ನೀಡುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್

ಹೊಸ ಎಪ್ರಿಲಿಯಾ ಎಸ್ಆರ್ 160 ಭಾರತೀಯ ಮಾರುಕಟ್ಟೆಯಲ್ಲಿ ಕಂಪನಿಯ ಪ್ರೀಮಿಯಂ ಸ್ಕೂಟರ್ ಆಗಿದೆ. ಈ ಸ್ಕೂಟರ್ ಹೊಸ ನವೀಕರಣಗಳನ್ನು ಪಡೆದುಕೊಂಡಿರುವುದರಿಂದ ಇದರ ಬೆಲೆ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Monday, April 26, 2021, 21:08 [IST]
English summary
2021 Aprilia Planning To Updated Sr 160 Scooter. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+