Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಸ್ಎಕ್ಸ್ಆರ್ 160 ಮ್ಯಾಕ್ಸಿ ಸ್ಕೂಟರ್ ವಿತರಣೆಗೆ ಚಾಲನೆ ನೀಡಿದ ಎಪ್ರಿಲಿಯಾ
ಪಿಯಾಜಿಯೊ ಕಂಪನಿಯು ಎಪ್ರಿಲಿಯಾ ನಿರ್ಮಾಣದ ಹೊಸ ಎಸ್ಎಕ್ಸ್ಆರ್ 160 ಮ್ಯಾಕ್ಸಿ ಸ್ಕೂಟರ್ ಬಿಡುಗಡೆಯ ಮೂಲಕ ಪ್ರೀಮಿಯಂ ಸ್ಕೂಟರ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಂಪನಿಯು ಹೊಸ ಸ್ಕೂಟರ್ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದೆ.

ಕಳೆದ ತಿಂಗಳು ಮಧ್ಯಂತರದಲ್ಲಿ ಬಿಡುಗಡೆಗೊಂಡಿದ್ದ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಮ್ಯಾಕ್ಸಿ ಸ್ಕೂಟರ್ ಮಾದರಿಯನ್ನು ಇದೀಗ ವಿತರಣೆ ಮಾಡುತ್ತಿರುವ ಪಿಯಾಜಿಯೊ ಕಂಪನಿಯು ಹೊಸ ಸ್ಕೂಟರ್ ಮೂಲಕ ಮ್ಯಾಕ್ಸಿ ಸ್ಕೂಟರ್ ಪ್ರಿಯರನ್ನು ಸೆಳೆಯುತ್ತಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಸ್ಕೂಟರ್ ಖರೀದಿಗೆ ಸಾವಿರಾರು ಗ್ರಾಹಕರು ಬುಕ್ಕಿಂಗ್ ಸಲ್ಲಿಸಿಕೆ ಮಾಡಿದ್ದಾರೆ. ಬುಕ್ಕಿಂಗ್ ಪ್ರಕ್ರಿಯೆ ಆಧಾರದ ಮೇಲೆ ಇದೀಗ ವಿತರಣೆ ಮಾಡಲಾಗುತ್ತಿದ್ದು, ಬೆಂಗಳೂರು, ಮುಂಬೈ, ದೆಹಲಿ, ಹೈದ್ರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ ಹೊಸ ಸ್ಕೂಟರ್ ವಿತರಣೆಗೆ ಚಾಲನೆ ನೀಡಲಾಗಿದೆ.

ಹೊಸ ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ಮಾದರಿಯು ಬೆಂಗಳೂರಿನಲ್ಲಿ ಆನ್ ರೋಡ್ ಪ್ರಕಾರ ರೂ. 1.58 ಲಕ್ಷ ಬೆಲೆ ಹೊಂದಿದ್ದು, ಸಾಮಾನ್ಯ ಮಾದರಿಯ ಸ್ಕೂಟರ್ ಮಾದರಿಗಳಿಂತಲೂ ವಿಭಿನ್ನ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದೆ.

ಎಸ್ಎಕ್ಸ್ಆರ್ 160 ಸ್ಕೂಟರ್ ಮಾದರಿಯು ಬೆಲೆ ಆಯ್ಕೆಗೆ ತಕ್ಕಂತೆ ಹಲವಾರು ಪ್ರೀಮಿಯಂ ಫೀಚರ್ಸ್ಗಳಿದ್ದು, ದೊಡ್ಡ ಗಾತ್ರದ ವಿನ್ಯಾಸವು ಇತರೆ ಸ್ಕೂಟರ್ ಮಾದರಿಗಳಿಂತಲೂ ಹೆಚ್ಚು ಭಿನ್ನವಾಗಿ ಕಾಣಲು ಪ್ರಮುಖ ಕಾರಣವಾಗಿದೆ.

ಎಸ್ಎಕ್ಸ್ಆರ್160 ಮ್ಯಾಕ್ಸಿ ಸ್ಕೂಟರ್ ಆವೃತ್ತಿಯು ಸ್ಪೀಟ್ ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಡಿಆರ್ಎಲ್ಎಸ್, ಟರ್ನ್ ಇಂಡಿಕೇಟರ್, ಆಕರ್ಷಕವಾದ ವೀಂಡ್ ಸ್ಕ್ರೀನ್, ಆರಾಮದಾಯಕವಾದ ಸಿಂಗಲ್ ಪೀಸ್ ಸೀಟ್, ಎಲ್ಇಡಿ ಟೈಲ್ ಲೈಟ್ಸ್ ಸೌಲಭ್ಯದೊಂದಿಗೆ ಬಲಿಷ್ಠ ವಿನ್ಯಾಸ ಹೊಂದಿದ್ದು, ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸುವ ಒಂದೇ ಸೂರಿನಡಿ ನಿಯಂತ್ರಿಸುವ ಮಲ್ಟಿ ಫಂಕ್ಷನಲ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

ಮಲ್ಟಿ ಫಂಕ್ಷನಲ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ನಲ್ಲಿ ಮೈಲೇಜ್ ಇಂಡಿಕೇಟರ್, ಆರ್ಪಿಎಂ ಮೀಟರ್, ಅರೇಜ್ ಮತ್ತು ಟಾಪ್ ಸ್ಪೀಡ್ ಮೀಟರ್, ಫ್ಯೂಲ್ ಇಂಡಿಕೇಟರ್ ಜೊತೆ ಕನೆಕ್ಟೆಡ್ ಫೀಚರ್ಸ್ಗಳನ್ನು ಸಹ ಜೋಡಿಸಬಹುದು.

ಎಸ್ಎಕ್ಸ್ಆರ್ 160 ಸ್ಕೂಟರ್ ಮಾದರಿಯಲ್ಲಿ ಕನೆಕ್ಟೆಡ್ ಫೀಚರ್ಸ್ಗಳನ್ನು ಹೆಚ್ಚುವರಿ ಮೊತ್ತಕ್ಕೆ ಅಳವಡಿಸಕೊಳ್ಳಬಹುದಾಗಿದ್ದು, ಕನೆಕ್ಟೆಡ್ ಫೀಚರ್ಸ್ ಇದ್ದಲ್ಲಿ ಸ್ಕೂಟರ್ ಮಾಲೀಕರು ಸ್ಮಾರ್ಟ್ ಫೋನ್ ಮೂಲಕವೇ ಸ್ಕೂಟರಿನ ಪ್ರಮುಖ ತಾಂತ್ರಿಕ ಅಂಶಗಳನ್ನು ಅಪ್ಲೀಕೆಷನ್ನಲ್ಲೇ ನಿಯಂತ್ರಣ ಮಾಡಬಹುದಾಗಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಹೊಸ ಎಸ್ಎಕ್ಸ್ಆರ್ 160 ಸ್ಕೂಟರ್ ಮಾದರಿಯು 160ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 10.5-ಬಿಎಚ್ಪಿ, 11.6-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹೊಸ ಸ್ಕೂಟರ್ ಎಪ್ರಿಲಿಯಾ ಕಂಪನಿಯು ಸಿಂಗಲ್ ಚಾನೆಲ್ ಎಬಿಎಸ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಿದ್ದು, ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದ ಚಕ್ರದಲ್ಲಿ ಡ್ರಮ್ ಬ್ರೇಕ್ ನೀಡಲಾಗಿದೆ.

ಹಾಗೆಯೇ ಹೊಸ ಸ್ಕೂಟರಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋಕ್ಸ್ ಮತ್ತು ಹಿಂಭಾದಲ್ಲಿ ಮೊನೊ ಶಾಕ್ ಸಸ್ಪೆಷನ್ ಜೋಡಿಸಲಾಗಿದೆ. ಗ್ರಾಹಕರು ಹೊಸ ಸ್ಕೂಟರ್ ಅನ್ನು ನಾಲ್ಕು ಬಣ್ಣಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಗ್ಲಾಸಿ ರೆಡ್, ಮ್ಯಾಟೆ ಬ್ಲ್ಯೂ, ಗ್ಲಾಸಿ ವೈಟ್ ಮ್ಯಾಟೆ ಬ್ಲ್ಯಾಕ್ ಬಣ್ಣ ಹೊಂದಿದೆ.

ಸದ್ಯ ಹೊಸ ಸ್ಕೂಟರ್ ಮಾದರಿಗೆ ಮಾರುಕಟ್ಟೆಯಲ್ಲಿ ಯಾವುದೇ ಪ್ರತಿಸ್ಪರ್ಧಿ ಸ್ಕೂಟರ್ ಮಾದರಿಗಳು ಇಲ್ಲವಾದರೂ ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೋಂಡಾ ಫೋರ್ಜಾ ಮ್ಯಾಕ್ಸಿ ಸ್ಕೂಟರ್ ಮಾದರಿಯು ಎಸ್ಎಕ್ಸ್ಆರ್ 160 ಸ್ಕೂಟರ್ಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.