Just In
- 1 hr ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 2 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 2 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 3 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- News
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಶಾಸಕಾಂಗ ಸಭೆ ನಿರ್ಣಯಗಳು
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Movies
ಬಿಗ್ಬಾಸ್: ಎರಡನೇ ವಾರಕ್ಕೆ ಐದು ಮಂದಿ ಮೇಲೆ ನಾಮಿನೇಷನ್ ಕತ್ತಿ
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟಿವಿಸಿ ಬಿಡುಗಡೆ
ಪಿಯಾಜಿಯೊ ಕಂಪನಿಯು ತನ್ನ ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಕಳೆದ ವರ್ಷ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಇದನ್ನು ಪ್ರದರ್ಶಿಸಲಾಗಿತ್ತು.

ಆದರೆ ಕರೋನಾ ಆರ್ಭಟದಿಂದ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದರು. ಕೊನೆಗೆ ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಈ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಈ ಎಪ್ರಿಲಿಯಾ ಸ್ಕೂಟರ್ ವಿತರಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇನ್ನು ಈ ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ ಸ್ಕೂಟರ್ ಬೆಲೆಯು ರೂ.1,25,997 ಗಳಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಇಟಲಿಯಲ್ಲಿ ವಿನ್ಯಾಸಗೊಳಿಸಲಾಗಿದೆ.

ಈ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಆಕರ್ಷಕ ಟಿವಿಸಿ ಬಿಡುಗಡೆಯಾಗಿದೆ. ಮ್ಯಾಕ್ಸಿಫೈ ಲೈಫ್ ಎಂಬ ಈ ಟಿವಿಸಿಯಲ್ಲಿ ಸ್ಕೂಟರ್ ಪರ್ಫಾಮೆನ್ಸ್ ಮತ್ತು ಇದನ್ನು ಸುಲಭವಾಗಿ ದೈನಂದಿನವಾಗಿ ಬಳಸಬಹುದು ಎಂಬ ಸಂದೇಶವನ್ನು ತಿಳಿಸಿದೆ.
MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಈ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍ಗಳು ಈ ಸ್ಕೂಟರ್‍ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ-ಸ್ಕೂಟರ್ ಯುರೋಪಿಯನ್ ಮತ್ತು ಆಗ್ನೇಯ ಏಷ್ಯಾದ ಮಾರುಕಟ್ಟೆಗಳಲ್ಲಿ ಜನಪ್ರಿಯ ಮಾದರಿಯಾಗಿದೆ.

ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಕ್ರಾಸ್ಒವರ್ ಸ್ಕೂಟರ್ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಹೆಡ್‌ಲೈಟ್, ಡ್ಯುಯಲ್ ಎಲ್‌ಇಡಿ ಟೇಲ್ ಲೈಟ್ ಕ್ಲಸ್ಟರ್‌ಗಳಿವೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ದೊಡ್ಡ ಗಾತ್ರದ ವಿಂಡ್‌ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್‌ನಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ.

ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟ್‍ಗಳನ್ನು ನೀಡಲಾಗಿದೆ. ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍ಗಳು ಸಹ ಈ ಮ್ಯಾಕ್ಸಿ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ.
MOST READ: ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್
ಈ ಮ್ಯಾಕ್ಸಿ ಸ್ಕೂಟರ್ ನಲ್ಲಿ ಪೂರ್ಣ ಗಾತ್ರದ ಹೆಲ್ಮೆಟ್ ಮತ್ತು 7 ಲೀಟರ್ ಸಾಮರ್ಥ್ಯದ ಇಂಧನ ಟ್ಯಾಂಕ್‌ಗಾಗಿ ಅಂಡರ್-ಸೀಟ್ ಸ್ಟೋರೇಜ್ ಸ್ಪೇಸ್ ಅನ್ನು ನೀಡಿದೆ. ಇನ್ನು ಈ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಗ್ಲೋಸಿ ರೆಡ್, ಮ್ಯಾಟ್ ಬ್ಲೂ, ಗ್ಲೋಸಿ ವೈಟ್ ಮತ್ತು ಮ್ಯಾಟ್ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳಲ್ಲಿ ಲಭ್ಯವಿದೆ.

ಇನ್ನು ಈ ಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ನಲ್ಲಿ 60 ಸಿಸಿ, ಸಿಂಗಲ್ ಸಿಲಿಂಡರ್, 3 ವಾಲ್ವ್, ಏರ್ ಕೂಲ್ಡ್ ಮತ್ತು ಫ್ಯೂಯಲ್ ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7,100 ಆರ್‌ಪಿಎಂನಲ್ಲಿ 10.9 ಬಿಹೆಚ್‍ಪಿ ಪವರ್ ಮತ್ತು 5,750 ಆರ್‌ಪಿಎಂನಲ್ಲಿ 11.6 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.