ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

ಎಥರ್ ಎನರ್ಜಿ ಕಂಪನಿ ಗ್ರಾಹಕರ ಬೇಡಿಕೆಯೆಂತೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಹೊಸ ವಾಹನ ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡುತ್ತಿದ್ದು, ಇತ್ತೀಚೆಗೆ ಹೊಸದಾಗಿ ತಮಿಳುನಾಡಿನ ಕೊಯಮತ್ತೂರು ಮತ್ತು ತಿರುಚ್ಚಿ ನಗರಗಳಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿತು.

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ದೇಶದ ಪ್ರಮುಖ 11 ಮಾಹಾನಗರಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲವನ್ನು ವಿಸ್ತರಿಸಿರುವ ಎಥರ್ ಕಂಪನಿಯು ಇದೀಗ 2ನೇ ಹಂತದ ವಾಹನ ಮಾರಾಟ ಮಳಿಗೆಗಳ ವಿಸ್ತರಣೆ ಯೋಜನೆ ಅಡಿಯಲ್ಲಿ ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದ್ದು, ಈ ವರ್ಷದ ಅಂತ್ಯಕ್ಕೆ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿದೆ.

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

ಬೆಂಗಳೂರಿನಲ್ಲಿ ಅತಿ ಮಾರಾಟ ಮಳಿಗೆಗಳನ್ನು ಹೊಂದಿರುವ ಎಥರ್ ಕಂಪನಿಯು 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಮೈಸೂರು ಮತ್ತು ಹುಬ್ಬಳ್ಳಿ ನಗರದಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡುವ ಯೋಜನೆಯಲ್ಲಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ನಗರಗಳಲ್ಲಿ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ.

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಾರ್ಷಿಕ 1 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಎಥರ್ ಕಂಪನಿಯು ಗ್ರಾಹಕರ ಸೇವೆಗಳು ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದೆ.

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ. ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ.

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

450ಎಕ್ಸ್ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.60 ಲಕ್ಷ ಮತ್ತು 450 ಪ್ಲಸ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.1.41 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಗ್ರಾಹಕರಲ್ಲಿ ಆಸಕ್ತಿ ಇದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಹಿನ್ನಲೆಯಲ್ಲಿ ಇವಿ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದು, ಈ ವಿಚಾರವಾಗಿ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಇವಿ ವಾಹನಗಳತ್ತ ಸೆಳೆಯಲು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಾ ಗ್ರಾಹಕರನ್ನು ಸೆಳೆಯುತ್ತಿವೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಮತ್ತೆರಡು ಹೊಸ ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿದ ಎಥರ್

ಎಥರ್ ಕಂಪನಿಯು ಕೂಡಾ ತನ್ನ ಗ್ರಾಹಕರಿಗೆ ಗರಿಷ್ಠ ಪ್ರಮಾಣದಲ್ಲಿ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಾಗುವಂತೆ ನಗರದ ಪ್ರಮುಖ ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿರುವುದು ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.

Most Read Articles

Kannada
English summary
Ather Energy has started deliveries of the 450X and the 450 Plus electric scooter in Coimbatore and Trichy. Read in Kannada.
Story first published: Monday, April 19, 2021, 15:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X