Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಂಗಳೂರಿನಿಂದ ಸ್ಥಳಾಂತರಗೊಂಡ ನಂತರ ಅತಿದೊಡ್ಡ ಇವಿ ಸ್ಕೂಟರ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ ಎಥರ್
ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಎಥರ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಸ್ಕೂಟರ್ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುತ್ತಿದ್ದು, ಹೊಸ ಯೋಜನೆಯ ಭಾಗವಾಗಿ ಕಂಪನಿಯು ಬೆಂಗಳೂರಿನಲ್ಲಿದ್ದ ಸ್ಕೂಟರ್ ಉತ್ಪಾದನಾ ಘಟಕವನ್ನು ತಮಿಳುನಾಡಿನ ಹೊಸೂರಿಗೆ ಸ್ಥಳಾಂತರಿಸಿದೆ.

2015ರಲ್ಲಿ ಇವಿ ಸ್ಕೂಟರ್ ಉತ್ಪಾದನೆ ಆರಂಭಿಸಿದ್ದ ಸಂದರ್ಭದಲ್ಲಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಹೊಸ ಉತ್ಪಾದನಾ ಘಟಕ ತೆರೆದಿದ್ದ ಎಥರ್ ಎನರ್ಜಿ ಕಂಪನಿಯು ಇದೀಗ ತಮಿಳುನಾಡಿನ ಹೊಸೂರಿನಲ್ಲಿ ವಿಸ್ತರಿತ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ್ದು, ಹೊಸ ಉತ್ಪಾದನಾ ಘಟಕದ ಮೂಲಕ ಗ್ರಾಹಕರ ಬೇಡಿಕೆಯನ್ನು ಅತಿ ಕಡಿಮೆ ಅವಧಿಯಲ್ಲಿ ಪೂರೈಸುವ ಗುರಿಹೊಂದಿದೆ. ಹಳೆಯ ಉತ್ಪಾದನಾ ಘಟಕದಲ್ಲಿ ದಿನಕ್ಕೆ ಗರಿಷ್ಠ 7 ಸ್ಕೂಟರ್‌ಗಳನ್ನು ಉತ್ಪಾದನೆ ಮಾಡುತ್ತಿದ್ದ ಎಥರ್ ಕಂಪನಿಯು ಇದೀಗ ಹೊಸ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1 ಲಕ್ಷ ಸ್ಕೂಟರ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಸ್ಕೂಟರ್ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 2,500 ಯುನಿಟ್ ಮಾತ್ರ ಸಿದ್ದಪಡಿಸುತ್ತಿದ್ದ ಎಥರ್ ಕಂಪನಿಯು ಗ್ರಾಹಕರ ಬೇಡಿಕೆಗಳನ್ನು ನಿಗದಿತ ಅವಧಿಯಲ್ಲಿ ಪೂರೈಕೆ ಮಾಡುವಲ್ಲಿ ಸಾಧ್ಯವಾಗುತ್ತಿರಲಿಲ್ಲ.

ಇದೀಗ ಹೊಸೂರಿನಲ್ಲಿ ನಿರ್ಮಾಣವಾಗಿರುವ ಹೊಸ ಉತ್ಪಾದನಾ ಘಟಕವು 4 ಲಕ್ಷ ಚದುರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದ್ದು, ವೈಟ್‌ಫೀಲ್ಡ್‌ನಲ್ಲಿರುವ ಸ್ಕೂಟರ್ ಉತ್ಪಾದನಾ ಘಟಕದಲ್ಲಿನ ಕಾರ್ಯಾಚರಣೆನ್ನು ಅಧಿಕೃತವಾಗಿ ಬಂದ್ ಮಾಡಿ ಹೊಸ ಘಟಕದಲ್ಲಿ ಸ್ಕೂಟರ್ ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಿದೆ.

ಇನ್ನು ಬೆಂಗಳೂರು ಮತ್ತು ಚೆನ್ನೈ ನಂತರ ದೇಶದ ಪ್ರಮುಖ 11 ಮಾಹಾನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ಹೊಸದಾಗಿ ಆರಂಭಿಸುತ್ತಿರುವ ಎಥರ್ ಎನರ್ಜಿ ಕಂಪನಿಯು ಈ ವರ್ಷದ ಮಾರ್ಚ್ ಅಥವಾ ಎಪ್ರಿಲ್ ಹೊತ್ತಿಗೆ 2ನೇ ಹಂತದಲ್ಲಿ ಹೊಸದಾಗಿ 16 ನಗರಗಳಲ್ಲಿ ವಾಹನ ಮಾರಾಟ ಮಳಿಗೆಗಳ ವಿಸ್ತರಣೆ ಮಾಡುವ ಯೋಜನೆ ಹಮ್ಮಿಕೊಂಡಿದೆ. ಹೀಗಾಗಿ ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಿದ್ದು, ಎಥರ್ ಹೊಸ ಯೋಜನೆಯಲ್ಲಿ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ ಸಚಿನ್ ಬನ್ಸಾಲ್ ಹಾಗೂ ಹೀರೋ ಮೋಟೊಕಾರ್ಪ್ ಕಂಪನಿಯ ಅಧ್ಯಕ್ಷ ಪವನ್ ಮುಂಜಾಲ್ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದಾರೆ.

2021ರ ಕೊನೆಯಲ್ಲಿ ಒಟ್ಟು 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿರುವ ಎಥರ್ ಕಂಪನಿಯು 450 ಸರಣಿ ಎಲೆಕ್ಟ್ರಿಕ್ ಸ್ಕೂಟರ್ ನಂತರ ಮತ್ತಷ್ಟು ಹೊಸ ಇವಿ ಮಾದರಿಗಳನ್ನು ಬಿಡುಗಡೆಯ ಯೋಜನೆಯಲ್ಲಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450ಎಕ್ಸ್ ಮತ್ತು 450ಎಕ್ಸ್ ಸೀರಿಸ್ 1 ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು ಈ ಹಿಂದಿನ 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ಸದ್ಯ ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಸ್ಟ್ಯಾಂಡರ್ಡ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.