ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯ ತಿದ್ದುಪಡಿಯ ಮೂಲಕ ಇವಿ ದ್ವಿಚಕ್ರ ವಾಹನಗಳಿಗೆ ಭರ್ಜರಿ ಸಬ್ಸಡಿ ನೀಡುತ್ತಿದ್ದು, ಕೇಂದ್ರ ಸರ್ಕಾರದ ಹೊಸ ಸಬ್ಸಡಿ ಯೋಜನೆ ಘೋಷಣೆಯ ನಂತರ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಸಾಕಷ್ಟು ಏರಿಕೆಯಾಗಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಇಂಧನಗಳ ಬೆಲೆ ಏರಿಕೆ ಮತ್ತು ಮಾಲಿನ್ಯ ಹೆಚ್ಚಳದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರವು ಸಬ್ಸಡಿ ಯೋಜನೆಯೊಂದಿಗೆ ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ಕೇಂದ್ರ ಸರ್ಕಾರ ಜೊತೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ಲಭ್ಯವಾಗಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಇವಿ ಮಾರಾಟ ಪ್ರಮಾಣವು ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಇವಿ ವಾಹನ ಬಳಕೆಯನ್ನು ಹೆಚ್ಚಿಸಲು ಮತ್ತಷ್ಟು ಪ್ರೊತ್ಸಾಹ ಕ್ರಮಗಳನ್ನು ಪ್ರಕಟಿಸುತ್ತಿರುವ ಎಥರ್ ಎನರ್ಜಿ ಕಂಪನಿಯು ತನ್ನ ಇವಿ ಸ್ಕೂಟರ್ ಮಾಲೀಕರಿಗೆ ವಿಶೇಷ ಆಫರ್ ಘೋಷಣೆ ಮಾಡಿದೆ. ನಗರದ ಯಾವುದೇ ಭಾಗದಲ್ಲೂ ಮಕ್ತವಾಗಿ ಸಂಚರಿಸಲು ಹೆಚ್ಚಿನ ಸಂಖ್ಯೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದ್ದು, ಇಲ್ಲಿ ಎಥರ್ ಗ್ರಾಹಕರಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯ ಒದಗಿಸಲು ನಿರ್ಧರಿಸಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಈಗಾಗಲೇ ಆಯ್ದ ನಗರಗಳಲ್ಲಿ ಎಥರ್ ಗ್ರಾಹಕರಿಗಾಗಿ ಕಂಪನಿಯು ಉಚಿತ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುತ್ತಿದ್ದು, ಇದೀಗ ಮಾರಾಟ ಲಭ್ಯವಿರುವ ಎಲ್ಲಾ ನಗರಗಳಲ್ಲೂ ಉಚಿತ ಫಾಸ್ಟ್ ಚಾರ್ಜಿಂಗ್ ಸೇವೆಗಳನ್ನು ಡಿಸೆಂಬರ್ ಕೊನೆಯ ತನಕ ಅನ್ವಯವಾಗುವಂತೆ ಘೋಷಣೆ ಮಾಡಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಎಥರ್ ಕಂಪನಿಯು ಈಗಾಗಲೇ ದೇಶದ ಪ್ರಮುಖ ನಗರಗಳಲ್ಲಿ 200ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಗ್ರಿಡ್‌ಗಳನ್ನು ಹೊಂದಿದ್ದು, ಮಾಲ್, ಶಾಪಿಂಗ್ ಕಾಂಪ್ಲೆಕ್ಸ್, ರೆಸ್ಟೊರೆಂಟ್‌ಗಳು ಮತ್ತು ಕಾಫಿ ಡೇ ಮಗಳಿಗಳ ಪಾರ್ಕಿಂಗ್ ಸ್ಥಳಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನ ಸ್ಥಾಪಿಸುತ್ತಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

2022ರ ವೇಳೆ ಒಟ್ಟು 400 ಫಾಸ್ಟ್ ಚಾರ್ಜಿಂಗ್ ಗ್ರಿಡ್‌ಗಳನ್ನು ಹೊಂದಿರುವುದಾಗಿ ಭರವಸೆ ನೀಡಿರುವ ಎಥರ್ ಕಂಪನಿಯು ಡಿಸೆಂಬರ್ ಕೊನೆಯ ತನಕ ಗ್ರಾಹಕರು ಅಸ್ತಿತ್ವದಲ್ಲಿ ಯಾವುದೇ ಚಾರ್ಜಿಂಗ್ ನಿಲ್ದಾಣ ಅನಿಯಮಿತವಾಗಿ ಚಾರ್ಜಿಂಗ್ ಮಾಡಿಕೊಳ್ಳಲು ಅವಕಾಶ ನೀಡಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಇವಿ ವಾಹನಗಳ ಹೆಚ್ಚಳಕ್ಕೆ ಇದೊಂದು ಉಪಕ್ರಮವೆಂದು ಭಾವಿಸಿರುವ ಎಥರ್ ಎನರ್ಜಿ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ನಗರಗಳಲ್ಲಿ ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದು, ಪೆಟ್ರೋಲ್ ಬೆಲೆ ಏರಿಕೆ ಪರಿಣಾಮ ಹೊಸ ಇವಿ ಸ್ಕೂಟರ್‌ಗಳು ಉತ್ತಮ ಬೇಡಿಕೆ ಪಡದುಕೊಳ್ಳುತ್ತಿವೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳಿಂತಲೂ ಹೆಚ್ಚು ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಸ್ಕೂಟರ್‌ಗಳ ಗ್ರಾಹಕರು ಆಸಕ್ತಿ ತೋರುತ್ತಿದ್ದು, ಆರಂಭದಲ್ಲಿ ಪ್ರೀಮಿಯಂ ಇವಿ ಸ್ಕೂಟರ್‌ಗಳನ್ನು ಮಾತ್ರ ಅಭಿವೃದ್ದಿ ಮಾಡಲು ನಿರ್ಧರಿಸಿದ್ದ ಎಥರ್ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಬಜೆಟ್ ಮಾದರಿಗಳನ್ನು ಸಹ ಉತ್ಪಾದನೆ ಮಾಡುವ ಆಸಕ್ತಿ ತೋರಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

450 ಪ್ಲಸ್ ಮತ್ತು 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಗಳನ್ನು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರಾಟ ಮಾಡಲಿರುವ ಎಥರ್ ಕಂಪನಿಯು ಬಜೆಟ್ ಬೆಲೆಯ ಇವಿ ಸ್ಕೂಟರ್‌ಗಳನ್ನು ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್‌ಗಳೊಂದಿಗೆ ಉತ್ತಮ ಮೈಲೇಜ್ ಹೊಂದಿರುವ ಇವಿ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಎಥರ್ ಮುಂಬರುವ ಸ್ಕೂಟರ್ ಮಾದರಿಯು ರೂ. 1 ಲಕ್ಷ ಬೆಲೆಯೊಳಗೆ ಬಿಡುಗಡೆಯಾಗಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಅನುಗುಣವಾಗಿ ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಅಳವಡಿಸಲಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಇತ್ತೀಚೆಗೆ ಬಿಡುಗಡೆಯಾಗಿರುವ ಓಲಾ ಮತ್ತು ಸಿಂಪಲ್ ಎನರ್ಜಿ ಕಂಪನಿಗಳು ಎಥರ್ ಕಂಪನಿಗೆ ಪೈಪೋಟಿಯಾಗಿ ಆಕರ್ಷಕ ಬೆಲೆಯೊಂದಿಗೆ ಪ್ರತಿ ಚಾರ್ಜ್‌ಗೆ 120 ಕಿ.ಮೀ 230 ಕಿ.ಮೀ ಮೈಲೇಜ್ ಪ್ರೇರಿತ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಎಥರ್ ಕಂಪನಿಯು ಸಹ ಪ್ರತಿ ಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹೊಸ ಸ್ಕೂಟರ್ ಬಿಡುಗಡೆ ಮಾಡಲಿದೆ.

ಇವಿ ಸ್ಕೂಟರ್ ಬಳಕೆಯನ್ನು ಉತ್ತೇಜಿಸಲು ಹೊಸ ಆಫರ್ ಘೋಷಣೆ ಮಾಡಿದ Ather Energy

ಮುಂಬರುವ ಎಲೆಕ್ಟ್ರಿಕ್ ಸ್ಕೂಟರ್‌ ಹೊಸ ವೈಶಿಷ್ಟ್ಯತೆಗಳೊಂದಿಗೆ ಅತ್ಯಧಿಕ ಮೈಲೇಜ್ ಮತ್ತು ಬಜೆಟ್ ಬೆಲೆಯಲ್ಲಿ ಅಳವಡಿಸಿಕೊಳ್ಳಬಹುದಾದ ಫೀಚರ್ಸ್‌ಗಳೊಂದಿಗೆ ಹೊಸ ಇವಿ ಸ್ಕೂಟರ್ ಉತ್ಪನ್ನಗಳನ್ನು ಸಿದ್ದಪಡಿಸುತ್ತಿದ್ದು, ಎಥರ್ ಹೊಸ ಇವಿ ಉತ್ಪನ್ನಗಳಲ್ಲಿ ಇವಿ ಬೈಕ್, ಇವಿ ಮ್ಯಾಕ್ಸಿ ಸ್ಕೂಟರ್‌ಗಳನ್ನು ನೀರಿಕ್ಷೆ ಮಾಡಲಾಗಿದೆ.

Most Read Articles

Kannada
English summary
Ather energy company announced free charging extends
Story first published: Friday, October 1, 2021, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X