ಎರಡನೇ ಹಂತದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಎಥರ್ ಎನರ್ಜಿ(Ather Energy) ಕಂಪನಿಯು ದೇಶಾದ್ಯಂತ ತನ್ನ ಚಾರ್ಜಿಂಗ್ ನೆಟ್‌ವರ್ಕ್ ವಿಸ್ತರಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಯೋಜನೆ ಅಡಿ ಎಥರ್ ಗ್ರಿಡ್ 2.0 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಹೊಸ ಎಥರ್ ಗ್ರಿಡ್ 2.0 ಶೀಘ್ರದಲ್ಲೇ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಲಭ್ಯವಿರಲಿದ್ದು, ಹೊಸ ಯೋಜನೆಗಾಗಿ ಕಂಪನಿಯು ಬೆಂಗಳೂರು ಮತ್ತು ಚೆನ್ನೈನಲ್ಲಿ ಮೊದಲ ಹಂತದ ಯೋಜನೆಗೆ ಚಾಲನೆ ನೀಡಿದೆ. ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳ ವಿಸ್ತರಣಾ ಯೋಜನೆಯಲ್ಲಿ 500ಕ್ಕೂ ಹೆಚ್ಚು ನಗರಗಳಲ್ಲಿ ಆರಂಭಗೊಳ್ಳುತ್ತಿದ್ದು, ಹೊಸ ಫಾಸ್ಟ್ ಚಾರ್ಜಿಂಗ್‌ಗಳು ಪ್ರಸ್ತುತ ಕಾರ್ಯನಿರ್ವಹಣೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳಿಂತಲೂ ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಜೊತೆಗೆ ಹೊಸ ಎಥರ್ ಗ್ರಿಡ್ 2.0 ಸೌಲಭ್ಯವು ಹೆಚ್ಚು ಗುಣಮಟ್ಟದಿಂದ ಕೂಡಿದ್ದು, ಹೊಸ ನೆಟ್‌ವರ್ಕ್ ಅನ್ನು ಅತಿಯಾದ ಮಳೆ, ಬಿಸಿಲಿನ ಪರಿಸ್ಥಿತಿಗಳನ್ನು ಒಡ್ಡಿಕೊಳ್ಳುವ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಮಾಡ್ಯುಲರ್ ವಿನ್ಯಾಸದೊಂದಿಗೆ ರಿಮೋಟ್ ಡಯಾಗ್ನೋಸ್ಟಿಕ್ಸ್‌ ಜೋಡಿಸಲಾಗಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಹೀಗಾಗಿ ಇವಿ ವಾಹನ ಮಾಲೀಕರಿಗೆ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ, ಚಾರ್ಜಿಂಗ್ ಸೌಲಭ್ಯದ ಲಭ್ಯತೆಯ ನಿಖರ ಮಾಹಿತಿ ದೊರೆಯಲಿದ್ದು, ಎರಡನೇ ಹಂತದಲ್ಲಿ ಒಟ್ಟು 500 ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಎಥರ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ ಈಗಾಗಲೇ 200 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದಿದ್ದು, 2022ರ ಹಣಕಾಸು ವರ್ಷದ ಕೊನೆಯಲ್ಲಿ ಹೊಸದಾಗಿ 500 ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಉದ್ದೇಶಿಸಲಾಗಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಇನ್ನು ಮಾರುಕಟ್ಟೆಯಲ್ಲಿ ಇಂಧನಗಳ ಬೆಲೆ ದಿನಂಪ್ರತಿ ಹೆಚ್ಚುತ್ತಿರುವ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚುತ್ತಿದ್ದು, ಪ್ರೀಮಿಯಂ ಸ್ಕೂಟರ್ ತಯಾರಕ ಕಂಪನಿಯಾಗಿರುವ ಎಥರ್ ಎನರ್ಜಿ ತನ್ನ ಮಾರಾಟ ಮಳಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಎಥರ್ ಸ್ಕೂಟರ್ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಕಳೆದ ಒಂದು ತಿಂಗಳ ಅವಧಿಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಹೊಸ ಶೋರೂಂಗಳಿಗೆ ಚಾಲನೆ ನೀಡಿದೆ. ಇತ್ತೀಚೆಗೆ ಕಂಪನಿಯು ಮೈಸೂರಿನಲ್ಲೂ ಹೊಸ ಶೋರೂಂ ಆರಂಭಿಸಿದ್ದು, ಶೀಘ್ರದಲ್ಲೇ ಹುಬ್ಬಳ್ಳಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಎಥರ್ ಹೊಸ ಶೋರೂಂ ಆರಂಭಗೊಳ್ಳಲಿವೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಎಥರ್ ಕಂಪನಿಯು ಇದುವರೆ ಸುಮಾರು 22 ಹೊಸ ಶೋರೂಂಗಳಿಗೆ ಚಾಲನೆ ನೀಡಿದ್ದು, ಕಂಪನಿಯು ಈ ವರ್ಷಾಂತ್ಯಕ್ಕೆ ಒಟ್ಟು 15 ರಾಜ್ಯಗಳ ಪ್ರಮುಖ 27 ನಗರಗಳಲ್ಲಿ ಮಾರಾಟ ಸೌಲಭ್ಯವನ್ನು ತೆರೆಯುವ ಗುರಿಹೊಂದಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಕರ್ನಾಟಕದಲ್ಲಿ ಇದುವರೆಗೆ ಕಂಪನಿಯು ಮೂರು ಮಾರಾಟ ಮಳಿಗೆಗಳನ್ನು ಹೊಂದಿದಂತಾಗಿದ್ದು, ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಹುಬ್ಬಳ್ಳಿಯಲ್ಲೂ ಕೂಡಾ ಶೋರೂಂ ತೆರೆಯುವ ಸುಳಿವು ನೀಡಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಸದ್ಯ ಕಂಪನಿಯು 2ನೇ ಹಂತದಲ್ಲಿ ತನ್ನ ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡುತ್ತಿದ್ದು, 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆ ನಂತರ ಮತ್ತೆ ಹೊಸ ಯೋಜನೆಯಡಿಯಲ್ಲಿ ಟೈರ್ 1 ಮತ್ತು ಟೈರ್ 2 ನಗರಗಳನ್ನು ಗುರುತಿಸಿ ಮಾರಾಟ ಮಳಿಗೆಗಳನ್ನು ತೆರೆಯುವ ಸಿದ್ದತೆಯಲ್ಲಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯು ಚುರುಕುಗೊಂಡಿರುವುದರಿಂದ ವಿವಿಧ ನಗರಗಳಲ್ಲಿ ಮತ್ತಷ್ಟು ಹೊಸ ಶೋರೂಂಗಳನ್ನು ತೆರೆಯುವ ಸಿದ್ದತೆಯಲ್ಲಿರುವ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಳೊಂದಿಗೆ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

ಸ್ಟ್ಯಾಂಡರ್ಡ್ 450ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಹೊಸ ಸಬ್ಸಡಿ ನಂತರ 450ಎಕ್ಸ್ ಬೆಲೆಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1,44,500 ಮತ್ತು 450 ಪ್ಲಸ್ ಬೆಲೆಯನ್ನು ರೂ. 1,25,490 ನಿಗದಿಪಡಿಸಲಾಗಿದೆ.

ಎರಡನೇ ಹಂತದ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಬೃಹತ್ ಯೋಜನೆಗೆ ಚಾಲನೆ ನೀಡಿದ ಎಥರ್

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

Most Read Articles

Kannada
English summary
Ather energy launched grid 2 0 ev charging infrastructure across india
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X