ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಪೂರಕವಾಗಿ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತಿದ್ದು, ಎಲೆಕ್ಟ್ರಿಕ್ ಸ್ಕೂಟರ್ ತಯಾರಿಕಾ ಕಂಪನಿ ಎಥರ್ ಎನರ್ಜಿ ಕಂಪನಿಯು ಸಹ ಇವಿ ವಾಹನಗಳನ್ನು ಪೋತ್ಸಾಹಿಸಲು ಅಗತ್ಯ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳ ನಿರ್ಮಾಣದ ವಿಶೇಷ ಆಸಕ್ತಿ ತೋರುತ್ತಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಹೋಂ ಚಾರ್ಜಿಂಗ್ ಸೌಲಭ್ಯಗಳನ್ನು ಹೊರತುಪಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯ ಉತ್ತೇಜನಕ್ಕೆ ಸಾಕಷ್ಟು ಸಹಕಾರಿಯಾಗಲಿದ್ದು, ಎಥರ್ ಕಂಪನಿಯು ಇತ್ತೀಚೆಗೆ ಮುಂಬೈನಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಆರಂಭದೊಂದಿಗೆ ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಗ್ರಾಹಕರ ಬೇಡಿಕೆ ಆಧಾರದ ಮೇಲೆ ಆರಂಭಿಸಿತು. ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಇವಿ ಸ್ಕೂಟರ್‌ಗಳನ್ನು ಚಾರ್ಜಿಂಗ್ ಮಾಡಬಹುದಾಗಿದ್ದು, ಹೊಸ ಚಾರ್ಜಿಂಗ್ ನಿಲ್ದಾಣಗಳಲ್ಲಿ ಎಥರ್ ಮಾದರಿಗಳಿಗೆ ಮಾತ್ರವಲ್ಲ ಎಲ್ಲಾ ಮಾದರಿಯ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯವನ್ನು ಬಳಕೆ ಮಾಡಬಹುದಾಗಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ದೇಶಾದ್ಯಂತ ಹೆಚ್ಚುತ್ತಿರುವ ಇಂಧನಗಳ ಪರಿಣಾಮ ವರವಾಗಿ ಪರಿಣಮಿಸಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ವಾಹನ ಸವಾರರು ಹೆಚ್ಚಿನ ಮಟ್ಟದ ಆಸಕ್ತಿ ತೋರುತ್ತಿದ್ದು, ಪ್ರೀಮಿಯಂ ಸ್ಕೂಟರ್ ವಿಭಾಗದಲ್ಲಿ ಮುಂಚೂಣಿಯಲ್ಲಿರುವ ಎಥರ್ ಕಂಪನಿಯು ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದ ಪರಿಣಾಮ ಇವಿ ವಾಹನಗಳ ಉತ್ಪಾದನಾ ಪ್ರಮಾಣವು ಕೂಡಾ ತೀವ್ರಗೊಳ್ಳುತ್ತಿದ್ದು, ಎಥರ್ ಎನರ್ಜಿ ಕಂಪನಿಯು ಸಹ ತನ್ನ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ನಿರ್ಧರಿಸಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಸದ್ಯ ವಾರ್ಷಿಕವಾಗಿ 1 ಲಕ್ಷದಿಂದ 1.20 ಲಕ್ಷ ಸ್ಕೂಟರ್ ಉತ್ಪಾದನಾ ಸೌಲಭ್ಯ ಹೊಂದಿರುವ ಎಥರ್ ಕಂಪನಿಯು ಲಭ್ಯವಿರುವ ಸ್ಥಳಾವಕಾಶವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುವ ಯೋಜನೆಯಲ್ಲಿದೆ. ಉತ್ಪಾದನಾ ಪ್ರಮಾಣವನ್ನು 2022ರ ವೇಳೆಗೆ ಹಂತ-ಹಂತವಾಗಿ 3 ಲಕ್ಷ ಯುನಿಟ್‌ಗೆ ಹೆಚ್ಚಿಸುವ ಗುರಿಹೊಂದಿದ್ದು, ಹೊಸ ಯೋಜನೆಗಾಗಿ ಮತ್ತಷ್ಟು ಬಂಡವಾಳ ಹೂಡಿಕೆಗೆ ಈ ಸಿದ್ದತೆ ನಡೆಸಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಹೊಸ ಉತ್ಪಾದನಾ ಘಟಕದಲ್ಲಿ ಇವಿ ಸ್ಕೂಟರ್ ಉತ್ಪಾದನೆಗೆ ಈಗಾಗಲೇ ಚಾಲನೆ ನೀಡಿರುವ ಎಥರ್ ಕಂಪನಿಯು ವಾರ್ಷಿಕವಾಗಿ ಗರಿಷ್ಠ 1.20 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ 1.23 ಲಕ್ಷ ಚದುರ ಅಡಿ ವಿಸ್ತೀರ್ಣವನ್ನು ಬಳಕೆ ಮಾಡಿಕೊಳ್ಳುತ್ತಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಎಥರ್ ಕಂಪನಿಯು ಬೆಂಗಳೂರು ಮತ್ತು ಚೆನ್ನೈ ನಂತರ ಮುಂಬೈ, ಅಹಮದಾಬಾದ್‌, ಪುಣೆ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡಾ ಹೊಸ ಮಾರಾಟ ಮಳಿಗೆಗಳಿಗಳಿಗೆ ಚಾಲನೆ ನೀಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಸ್ಕೂಟರ್‌ಗೆ ಭಾರೀ ಪ್ರಮಾಣದ ಬೇಡಿಕೆ ಹರಿದುಬರುತ್ತಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಹೊಸ ಬಂಡವಾಳದೊಂದಿಗೆ ಉತ್ಪಾದನೆ ಹೆಚ್ಚಿಸಿರುವ ಎಥರ್ ಕಂಪನಿಯು 2021ರ ಕೊನೆಯಲ್ಲಿ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದುವ ಗುರಿಹೊಂದಿದ್ದು, ಹೊಸ ವಾಹನಗಳಿಗೆ ಭಾರೀ ಬೇಡಿಕೆ ಹರಿದುಬರುತ್ತಿರುವುದು ಇವಿ ಕಂಪನಿಗಳ ಹೊಸ ಯೋಜನೆಗಳಿಗೆ ಮತ್ತಷ್ಟು ಬಲಬಂದಂತಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಮಾರುಕಟ್ಟೆ ವಿಸ್ತರಿಸುತ್ತಿರುವ ಎಥರ್ ಕಂಪನಿಯು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಸಹ ಹೆಚ್ಚಿಸುತ್ತಿದ್ದು, ಶಾಂಪಿಂಗ್ ಮಾಲ್ಸ್, ಬಸ್ ಮತ್ತು ರೈಲು ನಿಲ್ದಾಣಗಳ ಪಾರ್ಕಿಂಗ್ ಸ್ಥಳಗಳಲ್ಲಿ ಮತ್ತು ಪಾರ್ಕಿಂಗ್ ಸೌಲಭ್ಯ ಹೊಂದಿರುವ ಸಾರ್ವಜನಿಕ ಸ್ಥಳಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲಾಗುತ್ತಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

ಇನ್ನು ಎಥರ್ ಕಂಪನಿಯು ಸದ್ಯಕ್ಕೆ ಮಾರುಕಟ್ಟೆಯಲ್ಲಿ 450ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450 ಪ್ಲಸ್ ಮಾದರಿಯು ರೂ.1.40 ಲಕ್ಷ ಬೆಲೆ ಹೊಂದಿದ್ದರೆ 450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದ್ದು, ವಿವಿಧ ಬಣ್ಣದ ಆಯ್ಕೆ ಮತ್ತು ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450 ಪ್ಲಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಹತ್ತು ಹೊಸ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳಿಗೆ ಚಾಲನೆ ನೀಡಿದ ಎಥರ್ ಎನರ್ಜಿ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

Most Read Articles

Kannada
English summary
Ather Energy Opens 10 Charging Station In Mumbai. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X