ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಎಥರ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮಾರಾಟ ಮಳಿಗೆಗಳನ್ನು ವಿಸ್ತರಿಸುತ್ತಿದ್ದು, ನಮ್ಮ ಬೆಂಗಳೂರಿನಲ್ಲಿ ಇಂದು ಎರಡನೇ ಮಾರಾಟ ಮಳಿಗೆಗೆ ಅಧಿಕೃತವಾಗಿ ಚಾಲನೆ ನೀಡಿತು.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

ನಮ್ಮ ಬೆಂಗಳೂರಿನಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಳಿಗೆಯನ್ನು ಇಂದಿರಾನಗರದಲ್ಲಿ ತೆರೆದಿದ್ದ ಎಥರ್ ಎನರ್ಜಿ ಕಂಪನಿಯು ಇದೀಗ ಎರಡನೇ ಮಾರಾಟ ಮಳಿಗೆಯನ್ನು ಜೆಪಿ ನಗರದ 5ನೇ ಹಂತದಲ್ಲಿ ಆರಂಭಿಸಿದೆ. ಜೆಪಿ ನಗರದ 5ನೇ ಹಂತದಲ್ಲಿ ಔಟರ್ ರಿಂಗ್ ರೋಡ್ ಸನಿಹದಲ್ಲಿ ಹೊಸ ಶೋಂ ಆರಂಭವಾಗಿದ್ದು, ವಾಹನ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಬಿಐಎ ವೆಂಚರ್ ಜೊತೆಗೂಡಿ ಹೊಸ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರಿನ ನಂತರ ಮೈಸೂರು ಮತ್ತು ಹುಬ್ಬಳ್ಳಿಯಲ್ಲೂ ಕೂಡಾ ಹೊಸ ಮಾರಾಟ ಮಳಿಗೆಗಳನ್ನು ತೆರೆಯುತ್ತಿರುವ ಎಥರ್ ಕಂಪನಿಯು ಶೀಘ್ರದಲ್ಲೇ ಹೊಸ ಶೋರೂಂಗಳಿಗೆ ಚಾಲನೆ ನೀಡುವ ಯೋಜನೆಯಲ್ಲಿದ್ದು, ಈ ವರ್ಷಾಂತ್ಯಕ್ಕೆ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿದೆ.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಾರ್ಷಿಕ 1 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಎಥರ್ ಕಂಪನಿಯು ಗ್ರಾಹಕರ ಸೇವೆಗಳು ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಇತ್ತೀಚೆಗೆ ಘೋಷಣೆಯಾದ ಕೇಂದ್ರ ಸರ್ಕಾರದ ಹೊಸ ಸಬ್ಸಡಿ ಯೋಜನೆಯಂತೆ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಕಡಿತಗೊಳಿಸಿ ಗ್ರಾಹಕರ ಸೆಳೆಯುತ್ತಿದೆ.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

ಸ್ಟ್ಯಾಂಡರ್ಡ್ 450ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಹೊಸ ಸಬ್ಸಡಿ ನಂತರ 450ಎಕ್ಸ್ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ. 1.44 ಲಕ್ಷಕ್ಕೆ ಮತ್ತು 450 ಪ್ಲಸ್ ಬೆಲೆಯನ್ನು ರೂ. 1.25 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

ಎಥರ್ ಕಂಪನಿಯು ತನ್ನ ಎರಡೂ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲೂ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸುತ್ತಿದ್ದು, ಬಳಕೆದಾರರ ಸ್ನೇಹಿಯಾಗಿರುವ ಹೊಸ ಸ್ಕೂಟರ್‌ಗಳು ಹೊಸ ಮಾರಾಟ ಮಳಿಗೆಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿವೆ.

ನಮ್ಮ ಬೆಂಗಳೂರಿನಲ್ಲಿ 2ನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಚಾಲನೆ ನೀಡಿದ ಎಥರ್ ಎನರ್ಜಿ

ಎಥರ್ ಕಂಪನಿಯು ತನ್ನ ಗ್ರಾಹಕರಿಗೆ ಗರಿಷ್ಠ ಪ್ರಮಾಣದಲ್ಲಿ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಾಗುವಂತೆ ನಗರದ ಪ್ರಮುಖ ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಸಹ ಹೆಚ್ಚಿಸುತ್ತಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಹೆಚ್ಚಿದಂತೆ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.

Most Read Articles

Kannada
English summary
Ather Energy opens its 2nd Experience Centre in Bengaluru. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X