ಕೇರಳದಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಳಿಗೆ ತೆರೆಯಲಿದೆ ಎಥರ್ ಎನರ್ಜಿ
ಎಥರ್ ಎನರ್ಜಿ ಕಂಪನಿಯು ತನ್ನ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ದಾಖಲೆಗಳೊಂದಿಗೆ ಮುಂಚೂಣಿ ಸಾಧಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಳದ ಆಧಾರದ ಮೇಲೆ ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ಇತ್ತೀಚೆಗೆ ಜೆಪಿ ನಗರದ 5ನೇ ಹಂತದಲ್ಲಿ ಎರಡನೇ ಸ್ಕೂಟರ್ ಮಾರಾಟ ಮಳಿಗೆಗೆ ಚಾಲನೆ ನೀಡಿದ್ದ ಎಥರ್ ಎನರ್ಜಿ ಕಂಪನಿಯು ಇದೀಗ ಕೇರಳದ ಕೋಝಿಕೊಡ್‌ನಲ್ಲಿ ಹೊಸ ಶೋರೂಂ ಆರಂಭಿಸುತ್ತಿದೆ. ಈ ಮೊದಲು ಕೊಚ್ಚಿಯಲ್ಲಿ ಶೋರೂಂ ಆರಂಭಿಸಿದ್ದ ಎಥರ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕೋಝಿಕೊಡ್‌ನಲ್ಲಿ ಹೊಸ ಶೋರಂಗೆ ಅಧಿಕೃತ ಚಾಲನೆ ನೀಡುತ್ತಿದ್ದು, ಆಸಕ್ತ ಗ್ರಾಹಕರಿಂದ ಬುಕ್ಕಿಂಗ್ ಸ್ವಿಕರಿಸುತ್ತಿದೆ.

ಎಥರ್ ಕಂಪನಿಯು ಶೀಘ್ರದಲ್ಲೇ ಮೈಸೂರು ಮತ್ತು ಹುಬ್ಬಳ್ಳಿಯಲ್ಲೂ ಕೂಡಾ ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದ್ದು, ಈ ವರ್ಷಾಂತ್ಯಕ್ಕೆ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿದೆ.

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಾರ್ಷಿಕ 1 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಎಥರ್ ಕಂಪನಿಯು ಗ್ರಾಹಕರ ಸೇವೆಗಳು ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಇತ್ತೀಚೆಗೆ ಘೋಷಣೆಯಾದ ಕೇಂದ್ರ ಸರ್ಕಾರದ ಹೊಸ ಸಬ್ಸಡಿ ಯೋಜನೆಯಂತೆ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಕಡಿತಗೊಳಿಸಿ ಗ್ರಾಹಕರ ಸೆಳೆಯುತ್ತಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ಸ್ಟ್ಯಾಂಡರ್ಡ್ 450ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಹೊಸ ಸಬ್ಸಡಿ ನಂತರ 450ಎಕ್ಸ್ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ. 1.44 ಲಕ್ಷಕ್ಕೆ ಮತ್ತು 450 ಪ್ಲಸ್ ಬೆಲೆಯನ್ನು ರೂ. 1.25 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಎಥರ್ ಕಂಪನಿಯು ತನ್ನ ಎರಡೂ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲೂ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸುತ್ತಿದ್ದು, ಬಳಕೆದಾರರ ಸ್ನೇಹಿಯಾಗಿರುವ ಹೊಸ ಸ್ಕೂಟರ್‌ಗಳು ಹೊಸ ಮಾರಾಟ ಮಳಿಗೆಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿವೆ.

ಎಥರ್ ಕಂಪನಿಯು ತನ್ನ ಗ್ರಾಹಕರಿಗೆ ಗರಿಷ್ಠ ಪ್ರಮಾಣದಲ್ಲಿ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಾಗುವಂತೆ ನಗರದ ಪ್ರಮುಖ ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಸಹ ಹೆಚ್ಚಿಸುತ್ತಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಹೆಚ್ಚಿದಂತೆ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬರುತ್ತಿದೆ.


Click it and Unblock the Notifications








