Just In
- 1 hr ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 2 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 3 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 3 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ
ಪ್ರಸ್ತುತ ಮಾರುಕಟ್ಟೆ ಸನ್ನಿವೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗುತ್ತಿದ್ದು, ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಕಂಪನಿಯಾಗಿರುವ ಎಥರ್ ಎನರ್ಜಿಯು ಗ್ರಾಹಕರ ಬೇಡಿಕೆಯೆಂತೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ತನ್ನ ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದೆ.
ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಮತ್ತು ಚೆನ್ನೈ ನಂತರ ಎರಡನೇ ಹಂತದಲ್ಲಿ ಮುಂಬೈ, ಅಹಮದಾಬಾದ್, ಪುಣೆ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡಾ ಇದೀಗ ಹೊಸ ಮಾರಾಟ ಮಳಿಗೆಗಳಿಗಳಿಗೆ ಚಾಲನೆ ನೀಡಲಾಗಿದೆ. ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ವಿತರಣೆ ಆರಂಭಿಸಿದ ಸಂಭ್ರಮಕ್ಕಾಗಿ ಎಥರ್ ಕಂಪನಿಯು ಷೇರುದಾರರಾಗಿರುವ ಹೀರೋ ಮೋಟೊಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಅವರಿಗೆ ಮೊದಲ ಯುನಿಟ್ ಅನ್ನು ವಿತರಿಸಿದ ನಂತರ ಗ್ರಾಹಕರಿಗೆ ವಿತರಣೆ ಆರಂಭಿಸಲಾಗಿದೆ.
ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಾರ್ಷಿಕ 1 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಎಥರ್ ಕಂಪನಿಯು 2021ರ ಕೊನೆಯಲ್ಲಿ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿದೆ.
ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.
ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ. 450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.
ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
ಸದ್ಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಗ್ರಾಹಕರಲ್ಲಿ ಆಸಕ್ತಿ ಇದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಹಿನ್ನಲೆಯಲ್ಲಿ ಇವಿ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದು, ಈ ವಿಚಾರವಾಗಿ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಇವಿ ವಾಹನಗಳತ್ತ ಸೆಳೆಯಲು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಾ ಗ್ರಾಹಕರನ್ನು ಸೆಳೆಯುತ್ತಿವೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!
ಎಥರ್ ಕಂಪನಿಯು ಕೂಡಾ ತನ್ನ ಗ್ರಾಹಕರಿಗೆ ಗರಿಷ್ಠ ಪ್ರಮಾಣದಲ್ಲಿ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಾಗುವಂತೆ ನಗರದ ಪ್ರಮುಖ ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿರುವುದು ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.