ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

ಪ್ರಸ್ತುತ ಮಾರುಕಟ್ಟೆ ಸನ್ನಿವೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗುತ್ತಿದ್ದು, ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಕಂಪನಿಯಾಗಿರುವ ಎಥರ್ ಎನರ್ಜಿಯು ಗ್ರಾಹಕರ ಬೇಡಿಕೆಯೆಂತೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ತನ್ನ ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದೆ.

ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಮತ್ತು ಚೆನ್ನೈ ನಂತರ ಎರಡನೇ ಹಂತದಲ್ಲಿ ಮುಂಬೈ, ಅಹಮದಾಬಾದ್‌, ಪುಣೆ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡಾ ಇದೀಗ ಹೊಸ ಮಾರಾಟ ಮಳಿಗೆಗಳಿಗಳಿಗೆ ಚಾಲನೆ ನೀಡಲಾಗಿದೆ. ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ವಿತರಣೆ ಆರಂಭಿಸಿದ ಸಂಭ್ರಮಕ್ಕಾಗಿ ಎಥರ್ ಕಂಪನಿಯು ಷೇರುದಾರರಾಗಿರುವ ಹೀರೋ ಮೋಟೊಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಅವರಿಗೆ ಮೊದಲ ಯುನಿಟ್ ಅನ್ನು ವಿತರಿಸಿದ ನಂತರ ಗ್ರಾಹಕರಿಗೆ ವಿತರಣೆ ಆರಂಭಿಸಲಾಗಿದೆ.

ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಾರ್ಷಿಕ 1 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಎಥರ್ ಕಂಪನಿಯು 2021ರ ಕೊನೆಯಲ್ಲಿ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿದೆ.

ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ. 450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

ಸದ್ಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಗ್ರಾಹಕರಲ್ಲಿ ಆಸಕ್ತಿ ಇದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಹಿನ್ನಲೆಯಲ್ಲಿ ಇವಿ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದು, ಈ ವಿಚಾರವಾಗಿ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಇವಿ ವಾಹನಗಳತ್ತ ಸೆಳೆಯಲು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಾ ಗ್ರಾಹಕರನ್ನು ಸೆಳೆಯುತ್ತಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ದೆಹಲಿಯಲ್ಲಿ ಮೊದಲ ಬಾರಿಗೆ ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಎಥರ್ ಎನರ್ಜಿ

ಎಥರ್ ಕಂಪನಿಯು ಕೂಡಾ ತನ್ನ ಗ್ರಾಹಕರಿಗೆ ಗರಿಷ್ಠ ಪ್ರಮಾಣದಲ್ಲಿ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಾಗುವಂತೆ ನಗರದ ಪ್ರಮುಖ ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿರುವುದು ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.

Most Read Articles

Kannada
English summary
Ather Energy Started 450X, 450 Plus Electric Scooters Delivery In Delhi. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X