Just In
- 58 min ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 1 hr ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 2 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 4 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- News ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಉಳುವಿಗಾಗಿ ಸೆಣಸಾಟ: ಕಾಂಗ್ರೆಸ್ ಅವಕಾಶಕ್ಕಾಗಿ ಹೋರಾಟ
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಬ್ಬಳ್ಳಿಯಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಎಥರ್ ಎನರ್ಜಿ
ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯು ಹೆಚ್ಚುತ್ತಿದ್ದು, ಪ್ರೀಮಿಯಂ ಸ್ಕೂಟರ್ ತಯಾರಕ ಕಂಪನಿಯಾಗಿರುವ ಎಥರ್ ಎನರ್ಜಿ(Ather Energy) ತನ್ನ ಮಾರಾಟ ಮಳಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.
ಅತ್ಯುತ್ತಮ ಫೀಚರ್ಸ್ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಎಥರ್ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಕಳೆದ ಒಂದು ತಿಂಗಳ ಅವಧಿಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ 12ಕ್ಕೂ ಹೆಚ್ಚು ಹೊಸ ಶೋರೂಂಗಳಿಗೆ ಚಾಲನೆ ನೀಡಿದೆ. ಇತ್ತೀಚೆಗೆ ಕಂಪನಿಯು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ಶೋರೂಂ ಆರಂಭಿಸಿದ ನಂತರ ಇದೀಗ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಮೊದಲ ಶೋರೂಂಗೆ ಚಾಲನೆ ನೀಡಿದೆ.
ಉತ್ತರ ಕರ್ನಾಟಕದಲ್ಲಿ ಅತ್ಯುತ್ತಮ ವಾಹನ ಮಾರಾಟ ಜಾಲವನ್ನು ಹೊಂದಿರುವ ಬೆಲ್ಲದ್ ಗ್ರೂಪ್ ಜೊತೆಗೂಡಿ ಹೊಸ ಶೋರೂಂ ಆರಂಭಿಸಿರುವ ಎಥರ್ ಕಂಪನಿಯು ಉತ್ತಮ ಬೇಡಿಕೆಯ ನೀರಿಕ್ಷೆಯಲ್ಲಿದ್ದು, ನಗರದ ಪ್ರಮುಖ ನಾಲ್ಕು ಕಡೆಗಳಲ್ಲಿ ಸಾರ್ವಜನಿಕವಾಗಿ ಬಳಕೆ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಿದೆ.
ಹುಬ್ಬಳ್ಳಿ ಮತ್ತು ಧಾರವಾಡದ ನಡುವಿನ ಬೈರಿದೇವರಕೊಪ್ಪದಲ್ಲಿ ಹೊಸ ಎಥರ್ ಶೋರೂಂ ಆರಂಭಗೊಂಡಿದ್ದು, ಕಂಪನಿಯ 450 ಪ್ಲಸ್ ಮತ್ತು 450ಎಕ್ಸ್ ಎರಡು ಸ್ಕೂಟರ್ ಮಾದರಿಗಳು ಇಲ್ಲಿ ಖರೀದಿಗೆ ಲಭ್ಯವಿವೆ.
ಎಥರ್ ಕಂಪನಿಯು ಇದುವರೆಗೆ ಸುಮಾರು 23 ಹೊಸ ಶೋರೂಂಗಳಿಗೆ ಚಾಲನೆ ನೀಡಿದ್ದು, ಕಂಪನಿಯು ಈ ವರ್ಷಾಂತ್ಯಕ್ಕೆ ಒಟ್ಟು 15 ರಾಜ್ಯಗಳ ಪ್ರಮುಖ 27 ನಗರಗಳಲ್ಲಿ ಮಾರಾಟ ಸೌಲಭ್ಯವನ್ನು ತೆರೆಯುವ ಗುರಿಹೊಂದಿದೆ.
ಕರ್ನಾಟಕದಲ್ಲಿ ಇದುವರೆಗೆ ಎಥರ್ ಎನರ್ಜಿ ಕಂಪನಿಯು ನಾಲ್ಕು ಮಾರಾಟ ಮಳಿಗೆಗಳನ್ನು ಹೊಂದಿದಂತಾಗಿದ್ದು, ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಮಂಗಳೂರು, ದಾವಣಗೆರೆ ಸೇರಿದಂತೆ ಪ್ರಮುಖ ನಗರಗಳಲ್ಲಿ ಶೋರೂಂ ತೆರೆಯುವ ಸಿದ್ದತೆಯಲ್ಲಿದೆ.
ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.
ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು ಸದ್ಯ 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಹೊಸ ಸಬ್ಸಡಿ ನಂತರ 450ಎಕ್ಸ್ ಬೆಲೆಯು ಹುಬ್ಬಳ್ಳಿಯಲ್ಲಿ ಎಕ್ಸ್ಶೋರೂಂ ಪ್ರಕಾರ ರೂ. 1,45,129ಕ್ಕೆ ಮತ್ತು 450 ಪ್ಲಸ್ ಬೆಲೆಯನ್ನು ರೂ. 1,26,199ಕ್ಕೆ ನಿಗದಿಪಡಿಸಲಾಗಿದೆ.
2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
450 ಪ್ಲಸ್ ಮಾದರಿಯು ಪ್ರತಿ ಚಾರ್ಜ್ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಕೆಗಾಗಿ ಪ್ರೀಮಿಯಂ ಜೊತೆಗೆ ಬಜೆಟ್ ಬೆಲೆಯ ಸ್ಕೂಟರ್ಗಳನ್ನು ಸಹ ಪರಿಚಯಸಲು ಸಿದ್ದವಾಗಿರುವ ಎಥರ್ ಕಂಪನಿಯು ಹೊಸ ಹೊಸ ಸ್ಕೂಟರ್ ಮಾದರಿಯನ್ನು ಶೀಘ್ರದಲ್ಲೇ ಮಾರುಕಟ್ಟೆಗೆ ಪರಿಚಯಿಸುವ ಯೋಜನೆಯಲ್ಲಿದೆ.
ಹೊಸ ಎಥರ್ ಸ್ಕೂಟರ್ ಮಾದರಿಯು ಶೀಘ್ರದಲ್ಲೇ ಉತ್ಪಾದನಾ ಮಾದರಿಯನ್ನು ಪಡೆದುಕೊಳ್ಳಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆ ಪೂರೈಕೆಯೆಂತೆ ಹೊಸ ಸ್ಕೂಟರ್ ಮಾದರಿಯನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.
ಕಳೆದ ಒಂದು ವರ್ಷದ ಅವಧಿಯ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳು ವಿವಿಧ ಮಾದರಿಯ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಬಿಡುಗಡೆ ಮಾಡಿದ್ದು, ಪೆಟ್ರೋಲ್ ಬೆಲೆ ಏರಿಕೆ ಪರಿಣಾಮ ಹೊಸ ಇವಿ ಸ್ಕೂಟರ್ಗಳು ಉತ್ತಮ ಬೇಡಿಕೆ ಪಡೆದುಕೊಂಡಿವೆ.
ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ಗಳಿಂತಲೂ ಹೆಚ್ಚು ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಸ್ಕೂಟರ್ಗಳ ಗ್ರಾಹಕರು ಆಸಕ್ತಿ ತೋರುತ್ತಿದ್ದು, ಆರಂಭದಲ್ಲಿ ಪ್ರೀಮಿಯಂ ಇವಿ ಸ್ಕೂಟರ್ಗಳನ್ನು ಮಾತ್ರ ಅಭಿವೃದ್ದಿ ಮಾಡಲು ನಿರ್ಧರಿಸಿದ್ದ ಎಥರ್ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಬಜೆಟ್ ಮಾದರಿಗಳನ್ನು ಸಹ ಉತ್ಪಾದನೆ ಮಾಡುವ ಆಸಕ್ತಿ ತೋರಿದೆ.
ಹೊಸ ಎಥರ್ ಸ್ಕೂಟರ್ ಮಾದರಿಯು ರೂ. 1 ಲಕ್ಷ ಬೆಲೆಯೊಳಗೆ ಬಿಡುಗಡೆಯಾಗಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಅನುಗುಣವಾಗಿ ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಅಳವಡಿಸುವ ಸಾಧ್ಯತೆಗಳಿವೆ.