2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

ಎಥರ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ತನ್ನ ಮಾರಾಟ ಮಳಿಗೆಗಳ ವಿಸ್ತರಣೆಗೆ ಚಾಲನೆ ನೀಡಿದ್ದು, ಹೊಸ ಯೋಜನೆಯ ಭಾಗವಾಗಿ ಕಂಪನಿಯು ಪಿಂಕ್ ಸಿಟಿ ಜೈಪುರ್‌ದಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಸಿದ್ದತೆ ನಡೆಸಿದೆ.

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದ ಆರಂಭದಲ್ಲಿ ಬೆಂಗಳೂರು ನಂತರ ಚೆನ್ನೈನಲ್ಲಿ ಮಾರಾಟ ಆರಂಭಿಸಿದ್ದ ಎಥರ್ ಕಂಪನಿಯು ಕಳೆದ ವರ್ಷದ ದೇಶದ ಪ್ರಮುಖ 11 ಮಾಹಾನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲವನ್ನು ವಿಸ್ತರಿಸುವ ಯೋಜನೆಗೆ ಚಾಲನೆ ನೀಡಿತು. ಕಂಪನಿಯು ಈಗಾಗಲೇ 2ನೇ ಹಂತದ ವಾಹನ ಮಾರಾಟ ಮಳಿಗೆಗಳ ವಿಸ್ತರಣೆ ಯೋಜನೆ ಅಡಿಯಲ್ಲಿ ಮುಂಬೈ, ಅಹಮದಾಬಾದ್‌, ದೆಹಲಿ, ಹೈದ್ರಾಬಾದ್, ಕೋಲ್ಕತ್ತಾ, ಪುಣೆ, ಕೊಯಮತ್ತೂರು, ಕೊಚ್ಚಿ ನಗರಗಳಲ್ಲಿ ಮಾರಾಟ ಆರಂಭಿಸಿದ್ದು, ಇದೀಗ ಪಿಂಕ್ ಸಿಟಿ ಜೈಪುರ್‌ನಲ್ಲೂ ಕೂಡಾ ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದತೆ ನಡೆಸಿದೆ.

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎಥರ್ ಕಂಪನಿಯು ಹೊಸ ವಾಹನಗಳ ಉತ್ಪಾದನಾ ಪ್ರಮಾಣವನ್ನು ಸಸ ಹೆಚ್ಚಿಸಲಾಗಿದ್ದು, ಪಿಂಕ್ ಸಿಟಿ ಜೈಪುರ್‌ನಲ್ಲಿ ಶೀಘ್ರದಲ್ಲೇ ಹೊಸ ಸ್ಕೂಟರ್ ವಿತರಣೆಗೆ ಸಿದ್ದವಾಗುತ್ತಿದೆ.

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಾರ್ಷಿಕ 1 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಎಥರ್ ಕಂಪನಿಯು 2021ರ ಕೊನೆಯಲ್ಲಿ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿದೆ.

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ. ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ.

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಗ್ರಾಹಕರಲ್ಲಿ ಆಸಕ್ತಿ ಇದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಹಿನ್ನಲೆಯಲ್ಲಿ ಇವಿ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದು, ಈ ವಿಚಾರವಾಗಿ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಇವಿ ವಾಹನಗಳತ್ತ ಸೆಳೆಯಲು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಾ ಗ್ರಾಹಕರನ್ನು ಸೆಳೆಯುತ್ತಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

 2ನೇ ಹಂತದ ಮಾರಾಟ ಮಳಿಗೆಗಳ ವಿಸ್ತರಣೆಯಲ್ಲಿ ಜೈಪುರ್ ಪ್ರವೇಶಿಸಿದ ಎಥರ್ ಎನರ್ಜಿ

ಎಥರ್ ಕಂಪನಿಯು ಕೂಡಾ ತನ್ನ ಗ್ರಾಹಕರಿಗೆ ಗರಿಷ್ಠ ಪ್ರಮಾಣದಲ್ಲಿ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಾಗುವಂತೆ ನಗರದ ಪ್ರಮುಖ ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿರುವುದು ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.

More from DriveSpark

Article Published On: Monday, March 22, 2021, 22:52 [IST]
English summary
Ather Energy to open dealership in Jaipur soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+