ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಎರಡನೇ ಉತ್ಪಾದನಾ ಘಟಕ ತೆರೆಯಲಿದೆ ಎಥರ್ ಎನರ್ಜಿ..
ಇಂಧನಗಳ ಬೆಲೆ ಹೆಚ್ಚಳ ಪರಿಣಾಮ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಪ್ರೀಮಿಯಂ ಸ್ಕೂಟರ್ ತಯಾರಕ ಕಂಪನಿಯಾಗಿರುವ ಎಥರ್ ಎನರ್ಜಿ(Ather Energy) ತನ್ನ ಮಾರಾಟ ಮಳಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಎಥರ್ ಸ್ಕೂಟರ್ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಕಳೆದ ಒಂದು ತಿಂಗಳ ಅವಧಿಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಹೊಸ ಶೋರೂಂಗಳಿಗೆ ಚಾಲನೆ ನೀಡಿದೆ. ಎಥರ್ ಕಂಪನಿಯು ಇದುವರೆ ಸುಮಾರು 24 ಹೊಸ ಶೋರೂಂಗಳಿಗೆ ಚಾಲನೆ ನೀಡಿದ್ದು, ಕಂಪನಿಯು ಈ ವರ್ಷಾಂತ್ಯಕ್ಕೆ ಒಟ್ಟು 15 ರಾಜ್ಯಗಳ ಪ್ರಮುಖ 27 ನಗರಗಳಲ್ಲಿ ಮಾರಾಟ ಸೌಲಭ್ಯವನ್ನು ತೆರೆಯುವ ಗುರಿಹೊಂದಿದೆ.

ಕರ್ನಾಟಕದಲ್ಲಿ ಇದುವರೆಗೆ ಕಂಪನಿಯು ನಾಲ್ಕು ಮಾರಾಟ ಮಳಿಗೆಗಳನ್ನು ಹೊಂದಿದಂತಾಗಿದ್ದು, ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಳೊಂದಿಗೆ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಯೋಜನೆಗೆ ಪೂರಕವಾಗಿ ಕಂಪನಿಯು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ನಿರ್ಧರಿಸಿದ್ದು, ಇದಕ್ಕಾಗಿ ಕಂಪನಿಯು ಎರಡನೇ ಉತ್ಪಾದನಾ ಘಟಕ ತೆರೆಯುತ್ತಿರುವ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಎಥರ್ ಕಂಪನಿಯು ಸದ್ಯ ತಮಿಳುನಾಡಿನ ಹೊಸೂರಿನಲ್ಲಿ ವಾರ್ಷಿಕವಾಗಿ 1.20 ಲಕ್ಷ ಸ್ಕೂಟರ್‌ಗಳ ಉತ್ಪಾದನೆ ಮಾಡಬಹುದಾದ ಸಾಮರ್ಥ್ಯದ ಇವಿ ಘಟಕವನ್ನು ಹೊಂದಿದ್ದು, ಇದೀಗ ಕಂಪನಿಯು ಎರಡನೇ ಘಟಕವನ್ನು ಸಹ ಹೊಸೂರಿನಲ್ಲಿಯೇ ತೆರೆಯಲು ನಿರ್ಧರಿಸಿದೆ.

ಎರಡನೇ ಘಟಕ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಮುಂದಿನ ವರ್ಷದಿಂದ ಕಾರ್ಯಾರಂಭ ನಡೆಸಲಿರುವ ಹೊಸ ಘಟಕವು ವಾರ್ಷಿಕವಾಗಿ 2.80 ಲಕ್ಷ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿರಲಿದೆ ಎನ್ನಲಾಗಿದೆ. ಎಥರ್ ಕಂಪನಿಯು ಎರಡು ಘಟಕಗಳ ಮೂಲಕ ವಾರ್ಷಿಕವಾಗಿ 4 ಲಕ್ಷ ಯುನಿಟ್ ಇವಿ ಸ್ಕೂಟರ್ ಉತ್ಪಾದನಾ ಗುರಿಹೊಂದಿದ್ದು, ಹೊಸ ಯೋಜನೆಗಳಿಗಾಗಿ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ರೂ. 650 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ.

ಇನ್ನು ದುಬಾರಿ ಬೆಲೆ ನಡುವೆಯೂ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ಪಡೆದುಕೊಳ್ಳುತ್ತಿರುವ ಎಥರ್ ಎನರ್ಜಿ ಕಂಪನಿಯು ಮುಂಬರುವ ಕೆಲ ತಿಂಗಳಿನಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಕಂಪನಿಯು ಇದುವರೆಗೂ ರೂ. 650 ಕೋಟಿ ಮೌಲ್ಯದ ಇವಿ ಸ್ಕೂಟರ್ ಉದ್ಯಮ ವ್ಯವಹಾರ ಕೈಗೊಂಡಿದೆ.

ಎಥರ್ ಸ್ಕೂಟರ್‌ಗಳು ಇತ್ತೀಚೆಗೆ ಬಿಡುಗಡೆಯಾಗಿರುವ ಇವಿ ಸ್ಕೂಟರ್‌ಗಳಿಂತಲೂ ತುಸು ಕಡಿಮೆ ಮೈಲೇಜ್ ಹೊರತುಪಡಿಸಿ ಪ್ರೀಮಿಯಂ ಫೀಚರ್ಸ್ ಮತ್ತು ಅತ್ಯುತ್ತಮ ಎಲೆಕ್ಟ್ರಿಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ತಾಂತ್ರಿಕ ಸೇವೆಗಳ ವಿಚಾರವಾಗಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಹೊಂದಿದೆ.

ಹೀಗಾಗಿ ಅತಿ ಹೆಚ್ಚು ಮೈಲೇಜ್ ನೀಡುವ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಎಥರ್ ಕಂಪನಿಯು ಕಳೆದ ವರ್ಷಕ್ಕಿಂತ 2021ರಲ್ಲಿ 12 ಪಟ್ಟು ಹೆಚ್ಚು ಬೆಳವಣಿಗೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಇನ್ನು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳಿಂತಲೂ ಹೆಚ್ಚು ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಸ್ಕೂಟರ್‌ಗಳ ಗ್ರಾಹಕರು ಆಸಕ್ತಿ ತೋರುತ್ತಿದ್ದು, ಆರಂಭದಲ್ಲಿ ಪ್ರೀಮಿಯಂ ಇವಿ ಸ್ಕೂಟರ್‌ಗಳನ್ನು ಮಾತ್ರ ಅಭಿವೃದ್ದಿ ಮಾಡಲು ನಿರ್ಧರಿಸಿದ್ದ ಎಥರ್ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಬಜೆಟ್ ಮಾದರಿಗಳನ್ನು ಸಹ ಉತ್ಪಾದನೆ ಮಾಡುವ ಆಸಕ್ತಿ ತೋರಿದೆ.

ಎಥರ್ ಮುಂಬರುವ ಸ್ಕೂಟರ್ ಮಾದರಿಯು ರೂ. 1 ಲಕ್ಷ ಬೆಲೆಯೊಳಗೆ ಬಿಡುಗಡೆಯಾಗಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಅನುಗುಣವಾಗಿ ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಅಳವಡಿಸಲಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ಸ್ಟ್ಯಾಂಡರ್ಡ್ 450ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಹೊಸ ಸಬ್ಸಡಿ ನಂತರ 450ಎಕ್ಸ್ ಬೆಲೆಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1,44,500 ಮತ್ತು 450 ಪ್ಲಸ್ ಬೆಲೆಯನ್ನು ರೂ. 1,25,490 ನಿಗದಿಪಡಿಸಲಾಗಿದೆ.

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.


Click it and Unblock the Notifications








