Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ- ಉತ್ಪಾದನೆ ದ್ವಿಗುಣಗೊಳಿಸಲು ನಿರ್ಧರಿಸಿದ ಎಥರ್
ದೇಶಾದ್ಯಂತ ಹೆಚ್ಚುತ್ತಿರುವ ಇಂಧನಗಳ ಪರಿಣಾಮ ವರವಾಗಿ ಪರಿಣಮಿಸಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ವಾಹನ ಸವಾರರು ಹೆಚ್ಚಿನ ಆಸಕ್ತಿ ತೋರುತ್ತಿದ್ದು, ಪ್ರೀಮಿಯಂ ಸ್ಕೂಟರ್ ವಿಭಾಗದಲ್ಲಿ ಮುಂಚೂಣಿಯಲ್ಲಿರುವ ಎಥರ್ ಕಂಪನಿಯು ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದ ಪರಿಣಾಮ ಇವಿ ವಾಹನಗಳ ಉತ್ಪಾದನಾ ಪ್ರಮಾಣವು ಕೂಡಾ ತೀವ್ರಗೊಳ್ಳುತ್ತಿದ್ದು, ಎಥರ್ ಎನರ್ಜಿ ಕಂಪನಿಯು ಸಹ ತನ್ನ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ನಿರ್ಧರಿಸಿದೆ. ಸದ್ಯ ವಾರ್ಷಿಕವಾಗಿ 1 ಲಕ್ಷದಿಂದ 1.20 ಲಕ್ಷ ಸ್ಕೂಟರ್ ಉತ್ಪಾದನಾ ಸೌಲಭ್ಯ ಹೊಂದಿರುವ ಎಥರ್ ಕಂಪನಿಯು ಲಭ್ಯವಿರುವ ಸ್ಥಳಾವಕಾಶವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುವ ಯೋಜನೆಯಲ್ಲಿದೆ.

ಉತ್ಪಾದನಾ ಪ್ರಮಾಣವನ್ನು 2022ರ ವೇಳೆಗೆ ಹಂತ-ಹಂತವಾಗಿ 3 ಲಕ್ಷ ಯುನಿಟ್‌ಗೆ ಹೆಚ್ಚಿಸುವ ಗುರಿಹೊಂದಿದ್ದು, ಹೊಸ ಯೋಜನೆಗಾಗಿ ಮತ್ತಷ್ಟು ಬಂಡವಾಳ ಹೂಡಿಕೆಗೆ ಈ ಸಿದ್ದತೆ ನಡೆಸಿದೆ.

ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣವಾಗಿರುವ ಹೊಸ ಉತ್ಪಾದನಾ ಘಟಕದಲ್ಲಿ ಇವಿ ಸ್ಕೂಟರ್ ಉತ್ಪಾದನೆ ಚಾಲನೆ ನೀಡಿರುವ ಎಥರ್ ಕಂಪನಿಯು ವಾರ್ಷಿಕವಾಗಿ ಗರಿಷ್ಠ 1.20 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ 1.23 ಲಕ್ಷ ಚದುರ ಅಡಿ ವಿಸ್ತೀರ್ಣವನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಬರೋಬ್ಬರಿ 4 ಲಕ್ಷ ಚದುರ ಅಡಿ ವಿಸ್ತೀರ್ಣದಲ್ಲಿರುವ ಹೊಸ ಘಟಕದಲ್ಲಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.

ಎಥರ್ ಕಂಪನಿಯು ಬೆಂಗಳೂರು ಮತ್ತು ಚೆನ್ನೈ ನಂತರ ಮುಂಬೈ, ಅಹಮದಾಬಾದ್, ಪುಣೆ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡಾ ಹೊಸ ಮಾರಾಟ ಮಳಿಗೆಗಳಿಗಳಿಗೆ ಚಾಲನೆ ನೀಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಸ್ಕೂಟರ್‌ಗೆ ಭಾರೀ ಪ್ರಮಾಣದ ಬೇಡಿಕೆ ಹರಿದುಬರುತ್ತಿದೆ. ಹೊಸ ಬಂಡವಾಳದೊಂದಿಗೆ ಉತ್ಪಾದನೆ ಹೆಚ್ಚಿಸಿರುವ ಎಥರ್ ಕಂಪನಿಯು 2021ರ ಕೊನೆಯಲ್ಲಿ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದುವ ಗುರಿಹೊಂದಿದ್ದು, ಹೊಸ ವಾಹನಗಳಿಗೆ ಭಾರೀ ಬೇಡಿಕೆ ಹರಿದುಬರುತ್ತಿರುವುದು ಇವಿ ಕಂಪನಿಗಳ ಹೊಸ ಯೋಜನೆಗಳಿಗೆ ಮತ್ತಷ್ಟು ಬಲಬಂದಂತಾಗಿದೆ.

ಎಥರ್ ಕಂಪನಿಯು ಸದ್ಯಕ್ಕೆ ಮಾರುಕಟ್ಟೆಯಲ್ಲಿ 450ಪ್ಲಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಸೀಮಿತ ಅವಧಿಗಾಗಿ ಬಿಡುಗಡೆಯಾಗಿದ್ದ 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450 ಪ್ಲಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.