Just In
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪುಣೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದ ಎಥರ್
ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗುತ್ತಿದ್ದು, ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಕಂಪನಿಯಾಗಿರುವ ಎಥರ್ ಎನರ್ಜಿಯು ಗ್ರಾಹಕರ ಬೇಡಿಕೆಯೆಂತೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ತನ್ನ ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದೆ.

ಬೆಂಗಳೂರು ಮತ್ತು ಚೆನ್ನೈ ನಂತರ ದೇಶದ ಪ್ರಮುಖ 11 ಮಾಹಾನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಜಾಲವನ್ನು ವಿಸ್ತರಿಸುತ್ತಿರುವ ಎಥರ್ ಎನರ್ಜಿ ಕಂಪನಿಯು 2ನೇ ಹಂತದ ವಾಹನ ಮಾರಾಟ ಮಳಿಗೆಗಳ ವಿಸ್ತರಣೆ ಯೋಜನೆಯಲ್ಲಿ ಮುಂಬೈ ನಂತರ ಅಹಮದಾಬಾದ್ ಮತ್ತು ಪುಣೆಯಲ್ಲಿ ಕೂಡಾ ಹೊಸ ಮಾರಾಟ ಮಳಿಗೆಗಳಿಗಳಿಗೆ ಚಾಲನೆ ನೀಡಲಾಗಿದೆ. ಶೀಘ್ರದಲ್ಲೇ ದೆಹಲಿ, ಹೈದ್ರಾಬಾದ್, ಕೋಲ್ಕತ್ತಾ, ಕೊಚ್ಚಿ ಸೇರಿ ಪ್ರಮುಖ ಮಾಹಾನಗರಗಳಲ್ಲಿ ಹೊಸ ಮಾರಾಟ ಮಳಿಗೆಗಳು ಆರಂಭಗೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎಥರ್ ಕಂಪನಿಯು ಹೊಸ ವಾಹನಗಳ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಿದೆ.

ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣವಾಗಿರುವ ಹೊಸ ಉತ್ಪಾದನಾ ಘಟಕದಲ್ಲಿ ಇವಿ ಸ್ಕೂಟರ್ ಉತ್ಪಾದನೆ ಚಾಲನೆ ನೀಡಿರುವ ಎಥರ್ ಕಂಪನಿಯು ವಾರ್ಷಿಕ 1 ಲಕ್ಷ ಸ್ಕೂಟರ್ ನಿರ್ಮಾಣ ಗುರಿಯೊಂದಿಗೆ 1.23 ಲಕ್ಷ ಚದುರ ಅಡಿ ವಿಸ್ತೀರ್ಣದಲ್ಲಿ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದೆ.

2021ರ ಕೊನೆಯಲ್ಲಿ ಒಟ್ಟು 15 ರಾಜ್ಯಗಳ 27 ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವುದಾಗಿ ಭರವಸೆ ನೀಡಿರುವ ಎಥರ್ ಕಂಪನಿಯು ಹೊಸ ಉತ್ಪಾದನಾ ಘಟಕದೊಂದಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ. ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450ಎಕ್ಸ್ ಸೀರಿಸ್ 1 ಸ್ಕೂಟರ್ ಮಾದರಿಯು ಸ್ಪೆಷಲ್ ಎಡಿಷನ್ ಆಗಿ ಮಾರಾಟಗೊಳ್ಳುತ್ತಿದೆ.

450ಎಕ್ಸ್ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.59 ಲಕ್ಷ ಬೆಲೆ ಹೊಂದಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಾದ 450ಎಕ್ಸ್ ಮಾದರಿಯಲ್ಲೇ ಸ್ಪೆಷಲ್ ಎಡಿಷನ್ ಕೂಡಾ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಸ್ಟ್ಯಾಂಡರ್ಡ್ 450 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ಲಸ್ ಮತ್ತು ಪ್ರೊ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರೇ, ವೈಟ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಗ್ರಾಹಕರಲ್ಲಿ ಆಸಕ್ತಿ ಇದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಹಿನ್ನಲೆಯಲ್ಲಿ ಇವಿ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದು, ಈ ವಿಚಾರವಾಗಿ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಇವಿ ವಾಹನಗಳತ್ತ ಸೆಳೆಯಲು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಾ ಗ್ರಾಹಕರನ್ನು ಸೆಳೆಯುತ್ತಿವೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಎಥರ್ ಕಂಪನಿಯು ಕೂಡಾ ತನ್ನ ಗ್ರಾಹಕರಿಗೆ ಗರಿಷ್ಠ ಪ್ರಮಾಣದಲ್ಲಿ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಾಗುವಂತೆ ನಗರದ ಪ್ರಮುಖ ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿರುವುದು ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.