ಪ್ರವಾಸಿ ಸ್ಥಳಗಳಲ್ಲಿ ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿವೆ. ಇದಕ್ಕೆ ಪೂರಕವಾಗಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನಗಳಿಗೆ ಪೂರಕವಾದ ಯೋಜನೆಗಳಿಗೆ ಚಾಲನೆ ನೀಡುತ್ತಿವೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣವು ಕೂಡಾ ಪ್ರಮುಖವಾಗಿದ್ದು, ಈ ನಿಟ್ಟಿನಲ್ಲಿ ದೇಶದ ಮುಂಚೂಣಿ ಇವಿ ಸ್ಕೂಟರ್ ಉತ್ಪಾದನಾ ಕಂಪನಿಯಾಗಿರುವ Ather Energy ಕಂಪನಿಯು ನಗರ ಪ್ರದೇಶಗಳಲ್ಲಿ ಮಾತ್ರ ಪ್ರವಾಸಿ ಸ್ಥಳಗಳಲ್ಲೂ ಇವಿ ವಾಹನ ಬಳಕೆ ಹೆಚ್ಚಿಸಲು ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ದೇಶಾದ್ಯಂತ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಇವಿ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ಎಲೆಕ್ಟ್ರಿಕ್ ವಾಹನಗಳನ್ನು ಬಾಡಿಗೆ ನೀಡುವ BLive E-Bike Tour ಕಂಪನಿ ಜೊತೆಗೂಡಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದ್ದು, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಎಲೆಕ್ಟ್ರಿಕ್ ವಾಹನ ಮಾಲೀಕರಿಗೆ ಇದು ಸಹಕಾರಿಯಾಗಲಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಪ್ರವಾಸಿ ಸ್ಥಳಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳು ಇಲ್ಲದಿರುವ ಕಾರಣ ಇವಿ ವಾಹನ ಮಾಲೀಕರು ಅಂತಹ ಸ್ಥಳಗಳಲ್ಲಿ ಇವಿ ವಾಹನಗಳಲ್ಲಿ ಪ್ರಯಾಣಿಸಲು ಹಿಂದೇಟು ಹಾಕಬಹುದು. ಇದಕ್ಕಾಗಿ ಇವಿ ವಾಹನ ಮಾಲೀಕರಿಗೆ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಿಸುವ ಮೂಲಕ ಪ್ರವಾಸಿ ಸ್ಥಳಗಳಿಗೂ ಪರಿಸರ ಸ್ನೇಹಿ ವಾಹನಗಳ ಓಡಾಟವು ಉತ್ತೇಜಿಸುವ ಗುರಿಹೊಂದಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

BLive E-Bike Tour ಕಂಪನಿಯು ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಹಿಮಾಚಲಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಕಾರ್ಯನಿರ್ವಹಣೆ ಹೊಂದಿದ್ದು, ಬಾಡಿಗೆ ವಾಹನಗಳಿಗಾಗಿ Ather ನಿರ್ಮಾಣದ ಇವಿ ಸ್ಕೂಟರ್‌ಗಳನ್ನು ಸಹ ಬಳಕೆ ಮಾಡಿಕೊಳ್ಳಲಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಇನ್ನು ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಸಂಚಾರರವನ್ನು ಅಂತರ್‌ ಜಿಲ್ಲೆ ಹಾಗೂ ಅಂತರ್‌ರಾಜ್ಯಗಳ ನಡುವೆಯೂ ಪ್ರಯಾಣಿಸಲು ಸಹಕಾರಿಯಾಗುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಬೃಹತ್ ಯೋಜನೆ ರೂಪಿಸಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಎಲೆಕ್ಟ್ರಿಕ್ ವಾಹನಗಳಿಗೆ ಸಹಕಾರಿಯಾಗುವಂತೆ ದೇಶಾದ್ಯಂತ ವಿಸ್ತರಿಸಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಚಾಲನೆ ನೀಡಿದ್ದು, ಆರಂಭಿಕ ಹಂತವಾಗಿ 22 ರಾಜ್ಯಗಳಲ್ಲಿ 650 ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಈಗಾಗಲೇ ಭೂಸ್ವಾಧಿನ ಪ್ರಕ್ರಿಯೆಯನ್ನು ಸಹ ಪೂರ್ಣಗೊಳಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ವರ್ಷಾಂತ್ಯಕ್ಕೆ 138 ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆಯಲು ಟೆಂಡರ್ ಕರೆದಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಖಾಸಗಿ ಸಹಭಾಗಿತ್ವದಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಟ್ಟದ ಚಾರ್ಜ್ ಮಾಡಬಹುದಾಗಿದೆ. ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆ ಅಡಿ ಇದೀಗ ಮತ್ತೆ ಇವಿ ವಾಹನಗಳ ಖರೀದಿ ಮೇಲೆ ಪ್ರೋತ್ಸಾಹ ಧನ ಹೆಚ್ಚಿಸಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಯನ್ನು ತಗ್ಗಿಸಲು ತುರ್ತಾಗಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಗೆ ಕೆಲವು ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಸಬ್ಸಡಿ ಪ್ರಮಾಣವನ್ನು ಚಾಲ್ತಿಯಲ್ಲಿರುವ ಪ್ರಮಾಣಕ್ಕಿಂತ ಶೇ.50 ರಷ್ಟು ಹೆಚ್ಚಳ ಮಾಡಿದೆ.

ಇವಿ ಚಾರ್ಜಿಂಗ್ ಸೌಲಭ್ಯ ಒದಗಿಸಲಿದೆ Ather Energy

ಹೊಸ ತಿದ್ದುಪಡಿಯ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸಬ್ಸಿಡಿ ಪ್ರಮಾಣವನ್ನು ಬ್ಯಾಟರಿ ಪ್ಯಾಕ್ ಆಧರಿಸಿ ಪ್ರತಿ ಕಿಲೋವ್ಯಾಟ್‌ಗೆ ರೂ. 15 ಸಾವಿರ ಏರಿಕೆ ಮಾಡಲಾಗಿದ್ದು, ಹೊಸ ತಿದ್ದುಪಡಿಯ ನಂತರ ಪ್ರತಿ ಇವಿ ಸ್ಕೂಟರ್ ಖರೀದಿ ಮೇಲೆ ಗ್ರಾಹಕರು ರೂ. 5 ಸಾವಿರದಿಂದ ರೂ.30 ಸಾವಿರದಷ್ಟು ಉಳಿತಾಯ ಮಾಡಬಹುದಾಗಿದೆ.

Most Read Articles

Kannada
English summary
Ather to setup charging stations in tourist destinations across india soon
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X