ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸ್ಟಾರ್ಟ್-ಅಪ್ ಕಂಪನಿಗಳು ಹೊಸ ಮಾದರಿಯ ಇವಿ ವಾಹನಗಳೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಲೋ ಸ್ಪೀಡ್ ವೈಶಿಷ್ಟ್ಯತೆಯ ಅಟಮ್ 1.0 ಇವಿ ಬೈಕ್ ಮಾದರಿಯು ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗುತ್ತಿದೆ. ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸಾಂಪ್ರಾದಾಯಿಕ ವಾಹನ ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳೇ ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿವೆ.

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ಹೈದ್ರಾಬಾದ್ ಮೂಲದ ಅಟುಮೊಬೈಲ್ ಪ್ರೈ.ಲೀ(Atumobiles Pvt. Ltd) ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಬೈಕ್ ಮಾದರಿಯೊಂದನ್ನು ಬಿಡುಗಡೆ ಮಾಡಿ ಮಾರಾಟಕ್ಕೆ ಚಾಲನೆ ನೀಡಿದೆ.

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ರೆಟ್ರೋ ವಿನ್ಯಾಸ ಹೊಂದಿರುವ ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾದರಿಯು ಲೋ ಸ್ಪೀಡ್ ವೈಶಿಷ್ಟ್ಯತೆಯೊಂದಿಗೆ ಹೆಚ್ಚು ಮೈಲೇಜ್ ನೀಡುವ ಎಲೆಕ್ಟ್ರಿಕ್ ವಾಹನ ಮಾದರಿಯಾಗಿದ್ದು, ಇದು 48V 250W ಮೋಟಾರ್ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 100 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಗರಿಷ್ಠ ವೇಗವನ್ನು ಪ್ರತಿ ಗಂಟೆ 25ಕಿ.ಮೀ ಗೆ ಸೀಮಿತಗೊಳಿಸಲಾಗಿದ್ದು, ಹೊಸ ಮೋಟಾರ್ ಸೈಕಲ್ ಬೆಲೆಯು ರೂ. 50 ಸಾವಿರದಿಂದ ಆರಂಭಗೊಳ್ಳುತ್ತದೆ. ದೇಶಾದ್ಯಂತ ಖರೀದಿಗೆ ಲಭ್ಯವಾಗಲಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿದ್ದ ಅಟುಮೊಬೈಲ್ ಕಂಪನಿಯು ಇದೀಗ ಬುಕ್ಕಿಂಗ್ ಆಧಾರದ ಮೇಲೆ ವಿತರಣೆ ಆರಂಭಿಸಿದೆ.

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ಹೊಸ ಬೈಕಿನ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಿದ ನಂತರ ಇದುವರೆಗೆ ಸುಮಾರು 400 ಗ್ರಾಹಕರು ಬೇಡಿಕೆ ಸಲ್ಲಿಸಿದ್ದು, ಬೇಡಿಕೆಯ ಆಧಾರದ ಮೇಲೆ ಹೊಸ ಬೈಕ್ ವಿತರಣೆ ಮಾಡಲಾಗುತ್ತಿದೆ.

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ನೋಂದಣಿ, ಡಿಎಲ್ ಅವಶ್ಯಕತೆಯಿಲ್ಲ..!

ಹೌದು, ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ ಮತ್ತೊಂದು ವಿಶೇಷತೆ ಅಂದ್ರೆ ಲೋ ಸ್ಪೀಡ್ ವಾಹನ ಎಂದು ಪರಿಗಣಿಸಿರುವುದರಿಂದ ಈ ವಾಹನಕ್ಕೆ ನೋಂದಣಿಯ ಅವಶ್ಯಕತೆ ಮತ್ತು ಈ ಬೈಕ್ ಚಾಲನೆಗೆ ಡ್ರೈವಿಂಗ್ ಲೆಸೆನ್ಸ್ ಕೂಡಾ ಅವಶ್ಯಕತೆಯಿಲ್ಲ.

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾದರಿಯು ಇಂಟರ್‌ನ್ಯಾಷನಲ್ ಸೆಂಟರ್ ಫಾರ್ ಆಟೋಮೆಟಿವ್ ಟೆಕ್ನಾಲಜಿ(ಐಸಿಎಟಿ) ಸಂಸ್ಥೆಯಿಂದ ಪ್ರಮಾಣೀಕೃತಗೊಂಡಿದ್ದು, ವಾಣಿಜ್ಯ ಬಳಕೆಗೂ ಅನುಮತಿ ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ಹೊಸ ಬೈಕಿನಲ್ಲಿ ಅಳವಡಿಸಲಾಗಿರುವ 48V ಬ್ಯಾಟರಿ ಪ್ಯಾಕ್ ಪೂರ್ತಿ ಚಾರ್ಜ್ ಆಗಲು ಗರಿಷ್ಠ ನಾಲ್ಕು ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದ್ದು, ಒಂದು ಬಾರಿ ಪೂರ್ಣ ಪ್ರಮಾಣದ ಚಾರ್ಜ್ ಆಗಲು ಗರಿಷ್ಠ 1 ಯನಿಟ್ ವಿದ್ಯುತ್ ಬೇಕಾಗುತ್ತದೆ.

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

1 ಯುನಿಟ್ ವಿದ್ಯುತ್ ಬೆಲೆಯು ರೂ.7 ರಿಂದ ರೂ. 10 ನಿರ್ವಹಣಾ ವೆಚ್ಚದೊಂದಿಗೆ 100 ಕಿ.ಮೀ ಮೈಲೇಜ್ ಹಿಂದಿರುಗಿಸುವ ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅನ್ನು ಎಲ್ಲಾ ವಯೋಮಾನದವರು ಕೂಡಾ ಬಳಕೆ ಮಾಡುವ ಹಾಗೆ ವಿನ್ಯಾಸಗೊಳಿಸಲಾಗಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ

ಜೊತೆಗೆ ಹೊಸ ಎಲೆಕ್ಟ್ರಿಕ್ ಬೈಕಿನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್‌ಲೈಟ್, ಎಲ್ಇಡಿ ಟರ್ನ್ ಇಂಡಿಕೇಟರ್, ಸ್ಟೈಲಿಶ್ ಕಫೆ ರೇಸರ್ ವಿನ್ಯಾಸದ ಆಸನ ಸೌಲಭ್ಯ, ಫ್ಯಾಟ್ ಟೈರ್, 280-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್, ಡಿಜಿಟಲ್ ಡಿಸ್‌ಪ್ಲೇ, ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯಗಳಿವೆ.

More from DriveSpark

Article Published On: Monday, March 1, 2021, 14:37 [IST]
English summary
Atum 1.0 Cafe-Racer Style Electric Motorcycle Commences Its Deliveries. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+