Just In
- 8 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 10 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 10 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 11 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಭಾರತದಲ್ಲಿ ಲಸಿಕೆ ಉತ್ಸವದ 4ನೇ ದಿನ ಲಸಿಕೆ ಪಡೆದ ಫಲಾನುಭವಿಗಳೆಷ್ಟು?
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಅಟಮ್ 1.0 ಎಲೆಕ್ಟ್ರಿಕ್ ಬೈಕ್ ವಿತರಣೆ ಆರಂಭ
ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸ್ಟಾರ್ಟ್-ಅಪ್ ಕಂಪನಿಗಳು ಹೊಸ ಮಾದರಿಯ ಇವಿ ವಾಹನಗಳೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಲೋ ಸ್ಪೀಡ್ ವೈಶಿಷ್ಟ್ಯತೆಯ ಅಟಮ್ 1.0 ಇವಿ ಬೈಕ್ ಮಾದರಿಯು ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗುತ್ತಿದೆ. ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸಾಂಪ್ರಾದಾಯಿಕ ವಾಹನ ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳೇ ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿವೆ.

ಹೈದ್ರಾಬಾದ್ ಮೂಲದ ಅಟುಮೊಬೈಲ್ ಪ್ರೈ.ಲೀ(Atumobiles Pvt. Ltd) ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಬೈಕ್ ಮಾದರಿಯೊಂದನ್ನು ಬಿಡುಗಡೆ ಮಾಡಿ ಮಾರಾಟಕ್ಕೆ ಚಾಲನೆ ನೀಡಿದೆ.

ರೆಟ್ರೋ ವಿನ್ಯಾಸ ಹೊಂದಿರುವ ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್ಸೈಕಲ್ ಮಾದರಿಯು ಲೋ ಸ್ಪೀಡ್ ವೈಶಿಷ್ಟ್ಯತೆಯೊಂದಿಗೆ ಹೆಚ್ಚು ಮೈಲೇಜ್ ನೀಡುವ ಎಲೆಕ್ಟ್ರಿಕ್ ವಾಹನ ಮಾದರಿಯಾಗಿದ್ದು, ಇದು 48V 250W ಮೋಟಾರ್ ಮೂಲಕ ಪ್ರತಿ ಚಾರ್ಜ್ಗೆ ಗರಿಷ್ಠ 100 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್ಸೈಕಲ್ ಗರಿಷ್ಠ ವೇಗವನ್ನು ಪ್ರತಿ ಗಂಟೆ 25ಕಿ.ಮೀ ಗೆ ಸೀಮಿತಗೊಳಿಸಲಾಗಿದ್ದು, ಹೊಸ ಮೋಟಾರ್ ಸೈಕಲ್ ಬೆಲೆಯು ರೂ. 50 ಸಾವಿರದಿಂದ ಆರಂಭಗೊಳ್ಳುತ್ತದೆ. ದೇಶಾದ್ಯಂತ ಖರೀದಿಗೆ ಲಭ್ಯವಾಗಲಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಕಳೆದ ಸೆಪ್ಟೆಂಬರ್ನಲ್ಲಿ ಬಿಡುಗಡೆ ಮಾಡಿದ್ದ ಅಟುಮೊಬೈಲ್ ಕಂಪನಿಯು ಇದೀಗ ಬುಕ್ಕಿಂಗ್ ಆಧಾರದ ಮೇಲೆ ವಿತರಣೆ ಆರಂಭಿಸಿದೆ.

ಹೊಸ ಬೈಕಿನ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಿದ ನಂತರ ಇದುವರೆಗೆ ಸುಮಾರು 400 ಗ್ರಾಹಕರು ಬೇಡಿಕೆ ಸಲ್ಲಿಸಿದ್ದು, ಬೇಡಿಕೆಯ ಆಧಾರದ ಮೇಲೆ ಹೊಸ ಬೈಕ್ ವಿತರಣೆ ಮಾಡಲಾಗುತ್ತಿದೆ.

ನೋಂದಣಿ, ಡಿಎಲ್ ಅವಶ್ಯಕತೆಯಿಲ್ಲ..!
ಹೌದು, ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್ಸೈಕಲ್ನ ಮತ್ತೊಂದು ವಿಶೇಷತೆ ಅಂದ್ರೆ ಲೋ ಸ್ಪೀಡ್ ವಾಹನ ಎಂದು ಪರಿಗಣಿಸಿರುವುದರಿಂದ ಈ ವಾಹನಕ್ಕೆ ನೋಂದಣಿಯ ಅವಶ್ಯಕತೆ ಮತ್ತು ಈ ಬೈಕ್ ಚಾಲನೆಗೆ ಡ್ರೈವಿಂಗ್ ಲೆಸೆನ್ಸ್ ಕೂಡಾ ಅವಶ್ಯಕತೆಯಿಲ್ಲ.

ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್ಸೈಕಲ್ ಮಾದರಿಯು ಇಂಟರ್ನ್ಯಾಷನಲ್ ಸೆಂಟರ್ ಫಾರ್ ಆಟೋಮೆಟಿವ್ ಟೆಕ್ನಾಲಜಿ(ಐಸಿಎಟಿ) ಸಂಸ್ಥೆಯಿಂದ ಪ್ರಮಾಣೀಕೃತಗೊಂಡಿದ್ದು, ವಾಣಿಜ್ಯ ಬಳಕೆಗೂ ಅನುಮತಿ ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಬೈಕಿನಲ್ಲಿ ಅಳವಡಿಸಲಾಗಿರುವ 48V ಬ್ಯಾಟರಿ ಪ್ಯಾಕ್ ಪೂರ್ತಿ ಚಾರ್ಜ್ ಆಗಲು ಗರಿಷ್ಠ ನಾಲ್ಕು ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದ್ದು, ಒಂದು ಬಾರಿ ಪೂರ್ಣ ಪ್ರಮಾಣದ ಚಾರ್ಜ್ ಆಗಲು ಗರಿಷ್ಠ 1 ಯನಿಟ್ ವಿದ್ಯುತ್ ಬೇಕಾಗುತ್ತದೆ.

1 ಯುನಿಟ್ ವಿದ್ಯುತ್ ಬೆಲೆಯು ರೂ.7 ರಿಂದ ರೂ. 10 ನಿರ್ವಹಣಾ ವೆಚ್ಚದೊಂದಿಗೆ 100 ಕಿ.ಮೀ ಮೈಲೇಜ್ ಹಿಂದಿರುಗಿಸುವ ಅಟಮ್ 1.0 ಕಫೆ-ರೇಸರ್ ಎಲೆಕ್ಟ್ರಿಕ್ ಮೋಟಾರ್ಸೈಕಲ್ ಅನ್ನು ಎಲ್ಲಾ ವಯೋಮಾನದವರು ಕೂಡಾ ಬಳಕೆ ಮಾಡುವ ಹಾಗೆ ವಿನ್ಯಾಸಗೊಳಿಸಲಾಗಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಜೊತೆಗೆ ಹೊಸ ಎಲೆಕ್ಟ್ರಿಕ್ ಬೈಕಿನಲ್ಲಿ ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ಲೈಟ್, ಎಲ್ಇಡಿ ಟರ್ನ್ ಇಂಡಿಕೇಟರ್, ಸ್ಟೈಲಿಶ್ ಕಫೆ ರೇಸರ್ ವಿನ್ಯಾಸದ ಆಸನ ಸೌಲಭ್ಯ, ಫ್ಯಾಟ್ ಟೈರ್, 280-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್, ಡಿಜಿಟಲ್ ಡಿಸ್ಪ್ಲೇ, ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯಗಳಿವೆ.