ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಬಜಾಜ್ ಆಟೋ ಕಂಪನಿಯು ಸದ್ಯ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮೂಲಕ ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಕಂಪನಿಯು ಇವಿ ವಾಹನಗಳ ಅಭಿವೃದ್ದಿಯಲ್ಲಿ ಹೊಸ ಬದಲಾವಣೆಗಾಗಿ ಬೃಹತ್ ಪ್ರಮಾಣದ ಯೋಜನೆಗಳನ್ನು ಜಾರಿಗೆ ತರುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಚೇತಕ್ ಇವಿ ಬಿಡುಗಡೆಯ ನಂತರ ವಿವಿಧ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ವಿಸ್ತರಿಸುತ್ತಿರುವ ಬಜಾಜ್ ಆಟೋ ಕಂಪನಿಯು ತನ್ನ ಸಹಭಾಗೀತ್ವ ಕಂಪನಿಯಾದ ಕೆಟಿಎಂ ಡೀಲರ್ಸ್ ಮೂಲಕ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡುತ್ತಿದೆ. ಆದರೆ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹೊಸ ಯೋಜನೆ ರೂಪಿಸಿರುವ ಬಜಾಜ್ ಇವಿ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯುವ ಸಿದ್ದತೆಯಲ್ಲಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಎಲೆಕ್ಟ್ರಿಕ್ ವಾಹನಗಳನ್ನು ಹೊಸ ಬ್ರಾಂಡ್ ಅಡಿಯಲ್ಲಿ ಅಭಿವೃದ್ದಿ ಮತ್ತು ಮಾರಾಟ ಮಾಡಲು ನಿರ್ಧರಿಸಿರುವ ಬಜಾಜ್ ಕಂಪನಿಯು ಈಗಾಗಲೇ ವಿವಿಧ ಹಂತದಲ್ಲಿ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಹೊಸ ಬ್ರಾಂಡ್ ಅಧಿಕೃತ ಹೆಸರು ಅನಾವರಣಗೊಳ್ಳಲಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಜೊತೆಗೆ ಹೊಸ ಯೋಜನೆಯ ಭಾಗವಾಗಿ ಪ್ರತ್ಯೇಕವಾದ ಇವಿ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡಿದ್ದು, ಹೊಸ ಉತ್ಪಾದನಾ ಘಟಕದಲ್ಲಿನ ಉತ್ಪಾದನಾ ಪ್ರಕ್ರಿಯೆಯನ್ನು ಕಂಪನಿಯು ಇದೀಗ ಅಧಿಕೃತವಾಗಿ ಶುಭಾರಂಭ ಮಾಡಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಬಜಾಜ್ ಕಂಪನಿಯು ಹೊಸ ಇವಿ ವಾಹನ ಉತ್ಪಾದನಾ ಘಟಕ ನಿರ್ಮಾಣಕ್ಕಾಗಿ ರೂ. 300 ಕೋಟಿ ಹೂಡಿಕೆ ಮಾಡಿದ್ದು, ವಾರ್ಷಿಕವಾಗಿ ಹೊಸ ಘಟಕದಲ್ಲಿ ಕಂಪನಿಯು ಹಂತ-ಹಂತವಾಗಿ ಸುಮಾರು 5 ಲಕ್ಷ ಇವಿ ವಾಹನಗಳನ್ನು ಉತ್ಪಾದನೆ ಮಾಡಲು ಗುರಿಹೊಂದಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಪುಣೆ ಬಳಿಯಿರುವ ಅರ್ಕುದ್ದಿಯಲ್ಲಿ ಬಜಾಜ್ ಕಂಪನಿಯ ಹೊಸ ಇವಿ ವಾಹನ ಉತ್ಪಾದನಾ ಘಟಕವು ನಿರ್ಮಾಣಗೊಂಡಿದ್ದು, ಹೊಸ ಘಟಕದಲ್ಲಿನ ಉತ್ಪಾದನಾ ವಾಹನ ಮಾದರಿಯು 2022ರ ಜೂನ್‌ನಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಹೊಸ ಘಟಕದಲ್ಲಿನ ಆರಂಭಿಕ ಉತ್ಪಾದನಾ ಪ್ರಕ್ರಿಯೆಯನ್ನು ಆರಂಭಿಸಲು ಕಂಪನಿಯು ಸುಮಾರು 800 ನುರಿತ ಸಿಬ್ಬಂದಿಯನ್ನು ನೇಮಕಗೊಳಿಸಿದ್ದು, ಹೊಸ ಉತ್ಪಾದನಾ ಘಟಕದ ಮೂಲಕ ಕಂಪನಿಯು ಭಾರತೀಯ ಇವಿ ಬೇಡಿಕೆ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೂ ರಫ್ತು ಮಾಡುವ ಯೋಜನೆ ಹೊಂದಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಸದ್ಯ ಬಜಾಜ್ ಆಟೋ ಕಂಪನಿಯು ಭಾರತದಲ್ಲಿ ಚೇತಕ್ ಇವಿ ಮಾತ್ರ ಮಾರಾಟ ಮಾಡುತ್ತಿದ್ದು, ಸಾಮಾನ್ಯ ವಾಹನಗಳ ಉತ್ಪಾದನಾ ಘಟಕದಲ್ಲಿಯೇ ನಿರ್ಮಾಣಗೊಳ್ಳುತ್ತಿರುವ ಚೇತಕ್ ಇವಿ ಮಾದರಿಯ ಉತ್ಪಾದನೆಯು ಶೀಘ್ರದಲ್ಲಿಯೇ ಹೊಸ ಘಟಕಕ್ಕೆ ವರ್ಗಾವಣೆಗೊಳ್ಳಲಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಹೊಸ ಘಟಕದಲ್ಲಿ ಪೂರ್ಣ ಪ್ರಮಾಣದ ಉತ್ಪಾದನಾ ಪ್ರಕ್ರಿಯೆ ಆರಂಭಗೊಂಡ ನಂತರ ಮತ್ತಷ್ಟು ಹೊಸ ಇವಿ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಬಜಾಜ್ ಕಂಪನಿಯು ದೇಶಾದ್ಯಂತ ಇವಿ ವಾಹನ ಮಾರಾಟವನ್ನು ಆರಂಭಗೊಳಿಸಲಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಪೆಟ್ರೋಲ್ ಬೆಲೆ ಹೆಚ್ಚುತ್ತಿರುವ ಪರಿಣಾಮ ಹೊಸ ಸ್ಕೂಟರ್ ಖರೀದಿದಾರರು ಇವಿ ಸ್ಕೂಟರ್‌ನತ್ತ ಮುಖ ಮಾಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಗಳು ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್-1 ಮತ್ತು ಟೈರ್-2 ನಗರಗಳಲ್ಲೂ ಇವಿ ವಾಹನ ಮಾರಾಟವನ್ನು ಕೈಗೊಳ್ಳಲು ಸಜ್ಜಾಗಿವೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಬಜಾಜ್ ಕೂಡಾ ತನ್ನ ಸಹಭಾಗಿತ್ವ ಕಂಪನಿಯಾದ ಕೆಟಿಎಂ ಶೋರೂಂಗಳ ಮೂಲಕ ಚೇತಕ್ ಇವಿ ಮಾರಾಟವನ್ನು ಹಂತ-ಹಂತವಾಗಿ ವಿವಿಧ ನಗರಗಳಿಗೆ ಮಾರಾಟ ವಿಸ್ತರಣೆ ಮಾಡುತ್ತಿದ್ದು, ಹೊಸ ಬ್ರಾಂಡ್ ಪರಿಚಯಿಸಿದ ನಂತರ ಪ್ರತ್ಯೇಕವಾಗಿ ಮಾರಾಟಗೊಳ್ಳಲಿವೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಇನ್ನು ಹೊಸ ಚೇತಕ್ ಇವಿ ಮಾದರಿಯು ಅರ್ಬೈನ್ ಮತ್ತು ಪ್ರೀಮಿಯಂ ಎನ್ನುವ ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅರ್ಬೈನ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1.48 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.50 ಲಕ್ಷ ಬೆಲೆ ಹೊಂದಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕ ತೆರೆದ ಬಜಾಜ್ ಆಟೋ

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.

Most Read Articles

Kannada
English summary
Bajaj auto announces a new electric vehicle manufacturing unit for india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X