ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ತಾಂತ್ರಿಕ ಕಾರಣಗಳಿಂದ ಚೇತಕ್ ಇವಿ ಸ್ಕೂಟರ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದ ಬಜಾಜ್ ಆಟೋ ಕಂಪನಿಯು ಇದೀಗ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಮತ್ತೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ್ದು, ಹೊಸ ಸ್ಕೂಟರ್ ಮಾರಾಟವನ್ನು ಮತ್ತೆರಡು ಹೊಸ ನಗರಗಳಲ್ಲಿ ಮಾರಾಟ ಆರಂಭಿಸಲಾಗಿದೆ.

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಹೊಸ ಸ್ಕೂಟರ್ ಬಿಡುಗಡೆಗೊಂಡಿದ್ದ ಸಂದರ್ಭದಲ್ಲಿ ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಚೆನ್ನೈ ಮತ್ತು ಹೈದ್ರಾಬಾದ್‌ನಲ್ಲೂ ಮಾರಾಟ ಆರಂಭಗೊಳ್ಳುತ್ತಿದ್ದು, ಮುಂದಿನ ಕೆಲವೇ ತಿಂಗಳಿನಲ್ಲಿ ಮತ್ತಷ್ಟು ಹೊಸ ನಗರಗಳಲ್ಲಿ ಚೇತಕ್ ಇವಿ ಮಾದರಿಯು ಮಾರಾಟವು ಅಧಿಕೃತವಾಗಿ ಚಾಲನೆ ಪಡೆದುಕೊಳ್ಳುವ ಖಚಿತವಾಗಿದೆ.

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಬಜಾಜ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯನ್ನು ಸದ್ಯಕ್ಕೆ ತನ್ನ ಸಹಭಾಗೀತ್ವದ ಕಂಪನಿ ಕೆಟಿಎಂ ಡೀಲರ್ಸ್‌ಗಳ ಮೂಲಕ ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಹೊಸ ಸ್ಕೂಟರ್ ಮಾದರಿಯನ್ನು ಸಾಮಾನ್ಯ ಬೈಕ್ ಮಾರಾಟ ಮಳಿಗೆಗಳಲ್ಲೂ ಖರೀದಿಗೆ ಲಭ್ಯವಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಹೊಸ ಚೇತಕ್ ಇವಿ ಮಾದರಿಯು ಅರ್ಬೈನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಶೋರೂಂ ಪ್ರಕಾರ ರೂ. 1.42 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.44 ಲಕ್ಷ ಬೆಲೆ ಹೊಂದಿದ್ದು, ಕಳೆದ ವಾರವಷ್ಟೇ ಹೊಸ ಸ್ಕೂಟರ್ ಬೆಲೆ ಹೆಚ್ಚಳ ಮಾಡಿರುವ ಗ್ರಾಹಕರಿಗೆ ತುಸು ಹೊರೆಎನ್ನಿಸಲಿದೆ.

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಚೇತಕ್ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್‍ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಹಾಗೆಯೇ ಹೊಸ ಸ್ಕೂಟರ್‌‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍‍ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಹೊಸ ಬ್ಯಾಟರಿ ಮೇಲೆ ಬಜಾಜ್ ಕಂಪನಿಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿಯನ್ನು ನೀಡಲಿದ್ದು, ಭವಿಷ್ಯದಲ್ಲಿ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಸೌಲಭ್ಯವನ್ನು ಒದಗಿಸುವ ಗುರಿಹೊಂದಿದೆ.

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಸ್ಥಗಿತಗೊಂಡ ಚೇತಕ್ ಇವಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಿದ ಬಜಾಜ್

ಚೇತಕ್ ಇವಿ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದ್ದರೆ ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ.

Article Published On: Friday, May 14, 2021, 12:59 [IST]
English summary
Bajaj Reopen Chetak Electric Scooter Bookings. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+