Just In
Don't Miss!
- News
ಮತ್ತೊಂದು ದಾಖಲೆಯ ಮಟ್ಟವನ್ನ ತಲುಪಿದ ಪೆಟ್ರೋಲ್, ಡೀಸೆಲ್ ದರ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಿಸೆಂಬರ್ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ಬಜಾಜ್ ಆಟೋ
ಖ್ಯಾತ ಬೈಕ್ ಹಾಗೂ ಸ್ಕೂಟರ್ ತಯಾರಕ ಕಂಪನಿಯಾದ ಬಜಾಜ್ ಆಟೋ 2020ರ ಡಿಸೆಂಬರ್ ತಿಂಗಳಿನ ಮಾರಾಟದ ಅಂಕಿಅಂಶಗಳನ್ನು ಬಿಡುಗಡೆಗೊಳಿಸಿದೆ. ಈ ಅಂಕಿಅಂಶಗಳ ಪ್ರಕಾರ ಬಜಾಜ್ ಆಟೋ ಡಿಸೆಂಬರ್ ತಿಂಗಳಿನಲ್ಲಿ 3,72,532 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ.

ಈ ಮಾರಾಟ ಪ್ರಮಾಣವು 2020ರ ನವೆಂಬರ್ ತಿಂಗಳಿಗೆ ಹೋಲಿಸಿದರೆ 11%ನಷ್ಟು ಹೆಚ್ಚಾಗಿದೆ. ಅಂಕಿಅಂಶಗಳ ಪ್ರಕಾರ ಕಂಪನಿಯು 2019ರ ಡಿಸೆಂಬರ್‌ನಲ್ಲಿ 3,36,055 ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು. ಬಜಾಜ್ ಆಟೋ ಕಂಪನಿಯು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ 1,39,606 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ.

ಕಂಪನಿಯ ದೇಶಿಯ ಮಾರುಕಟ್ಟೆಯಲ್ಲಿನ ಮಾರಾಟವು ಕಳೆದ ತಿಂಗಳು 9%ನಷ್ಟು ಕುಸಿದಿದೆ. 2019ರ ಇದೇ ತಿಂಗಳಿನಲ್ಲಿ ಕಂಪನಿಯು 1,53,163 ವಾಹನಗಳನ್ನು ಮಾರಾಟ ಮಾಡಿತ್ತು. ದೇಶಿಯ ಮಾರುಕಟ್ಟೆಯಲ್ಲಿನ ಮಾರಾಟದಲ್ಲಿ ಕಂಪನಿಯ ಕಮರ್ಷಿಯಲ್ ಹಾಗೂ ದ್ವಿಚಕ್ರ ವಾಹನಗಳು ಸೇರಿವೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ದ್ವಿಚಕ್ರ ವಾಹನಗಳ ಬಗ್ಗೆ ಹೇಳುವುದಾದರೆ, ಕಂಪನಿಯು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ಒಟ್ಟು 1,28,642 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಕಳೆದ ತಿಂಗಳು ಕಂಪನಿಯ ದ್ವಿಚಕ್ರ ವಾಹನಗಳ ಮಾರಾಟವು 4%ನಷ್ಟು ಹೆಚ್ಚಾಗಿದೆ.

2019ರ ಡಿಸೆಂಬರ್ ತಿಂಗಳಿನಲ್ಲಿ ಬಜಾಜ್ ಆಟೋ ಒಟ್ಟು 1,24,125 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿತ್ತು. ಇದೇ ವೇಳೆ ದ್ವಿಚಕ್ರ ವಾಹನ ರಫ್ತಿನಲ್ಲಿ ಕಂಪನಿಯು 31%ನಷ್ಟು ಪ್ರಗತಿಯನ್ನು ಸಾಧಿಸಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕಂಪನಿಯು ಬಿಡುಗಡೆಗೊಳಿಸಿರುವ ಮಾಹಿತಿಯ ಪ್ರಕಾರ, ಬಜಾಜ್ ಆಟೋ ಕಳೆದ ತಿಂಗಳು ಒಟ್ಟು 2,09,942 ಯುನಿಟ್ ದ್ವಿಚಕ್ರ ವಾಹನಗಳನ್ನು ರಫ್ತು ಮಾಡಿದ್ದರೆ, 2019ರ ಡಿಸೆಂಬರ್‌ನಲ್ಲಿ ಒಟ್ಟು 1,60,677 ಯುನಿಟ್ ದ್ವಿಚಕ್ರ ವಾಹನಗಳನ್ನು ರಫ್ತು ಮಾಡಿತ್ತು.

ದ್ವಿಚಕ್ರ ವಾಹನಗಳ ಒಟ್ಟು ಮಾರಾಟದ ಬಗ್ಗೆ ಹೇಳುವುದಾದರೆ ಕಂಪನಿಯು ಕಳೆದ ತಿಂಗಳು ಒಟ್ಟು 3,38,584 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. 2019ರ ಡಿಸೆಂಬರ್ ತಿಂಗಳಿನಲ್ಲಿ ಮಾರಾಟವಾದ 2,84,802 ಯುನಿಟ್'ಗಳಿಗೆ ಹೋಲಿಸಿದರೆ ಕಂಪನಿಯ ಮಾರಾಟವು ಕಳೆದ ತಿಂಗಳು 19%ನಷ್ಟು ಹೆಚ್ಚಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಬಜಾಜ್ ಆಟೋದ ಕಮರ್ಷಿಯಲ್ ವಾಹನಗಳ ಬಗ್ಗೆ ಹೇಳುವುದಾದರೆ ಕಳೆದ ತಿಂಗಳು ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಒಟ್ಟು 10,964 ವಾಹನಗಳನ್ನು ಮಾರಾಟ ಮಾಡಿದೆ. 2019ರ ಡಿಸೆಂಬರ್ ತಿಂಗಳಿನಲ್ಲಿ 29,038 ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಕಳೆದ ತಿಂಗಳು ಕಮರ್ಷಿಯಲ್ ವಾಹನಗಳ ಮಾರಾಟವು 62%ನಷ್ಟು ಕುಸಿದಿದೆ.

ಕಂಪನಿಯು ಕಳೆದ ತಿಂಗಳು ಒಟ್ಟು 22,984 ಕಮರ್ಷಿಯಲ್ ವಾಹನಗಳನ್ನು ರಫ್ತು ಮಾಡಿದೆ. 2019ರ ಡಿಸೆಂಬರ್ ತಿಂಗಳಿನಲ್ಲಿ ಕಂಪನಿಯು ಒಟ್ಟು 22,215 ವಾಹನಗಳನ್ನು ರಫ್ತು ಮಾಡಿತ್ತು. ಕಮರ್ಷಿಯಲ್ ವಾಹನಗಳ ರಫ್ತು ಪ್ರಮಾಣವು ಈ ಬಾರಿ 3%ನಷ್ಟು ಏರಿಕೆಯಾಗಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಬಜಾಜ್ ಆಟೋ ಕಂಪನಿಯ ಕಮರ್ಷಿಯಲ್ ವಾಹನಗಳ ಒಟ್ಟು ಮಾರಾಟದ ಬಗ್ಗೆ ಹೇಳುವುದಾದರೆ ಕಂಪನಿಯು 2020ರ ಡಿಸೆಂಬರ್ ತಿಂಗಳಿನಲ್ಲಿ ಒಟ್ಟು 33,948 ಕಮರ್ಷಿಯಲ್ ವಾಹನಗಳನ್ನು ಮಾರಾಟ ಮಾಡಿದೆ. 2019ರ ಡಿಸೆಂಬರ್ ತಿಂಗಳಿನಲ್ಲಿ 51,253 ಕಮರ್ಷಿಯಲ್ ವಾಹನಗಳು ಮಾರಾಟವಾಗಿದ್ದವು. ಈ ಬಾರಿ ಕಮರ್ಷಿಯಲ್ ವಾಹನಗಳ ಮಾರಾಟವು 34%ನಷ್ಟು ಕುಸಿದಿದೆ.