ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ಬಜಾಜ್ ಆಟೋ ಕಪನಿಯು 2021ರ ಫೆಬ್ರವರಿ ತಿಂಗಳ ಒಟ್ಟಾರೆ ದ್ವಿಚಕ್ರ ವಾಹನಗಳ ಮಾರಾಟ ವರದಿಯನ್ನು ಪ್ರಕಟಸಿದೆ. ಇದರ ಪ್ರಕಾರ ಕೆಳೆದ ತಿಂಗಳು ಬಜಾಜ್ ಆಟೋ ಕಂಪನಿಯು ವಾರ್ಷಿಕ ಮಾರಾಟದಲ್ಲಿ ಶೇ.6 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ಇದರಲ್ಲಿ ದ್ವಿಚಕ್ರ ಮತ್ತು ವಾಣಿಜ್ಯ ವಾಹನಗಳು ಸೇರಿವೆ. ಬಜಾಜ್ ಆಟೋದ ದ್ವಿಚಕ್ರ ವಾಹನ ಮಾರಾಟವು ಶೇ.7 ರಷ್ಟು ಬೆಳವಣಿಗೆಯನ್ನು ಕಂಡಿದೆ. ಕಂಪನಿಯ ವಾಣಿಜ್ಯ ವಾಹನ ವಿಭಾಗವು ಶೇ.5 ರಷ್ಟು ಕುಸಿತವಾಗಿದೆ. ಕೆಳೆದ ತಿಂಗಳು ಬಜಾಜ್ ಆಟೋ ಕಂಪನಿಯು 332,563 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು 310,222 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು

ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.7 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ಬಜಾಜ್ ಆಟೋ 148,934 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು 183,629 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ದೇಶೀಯ ಮಾರುಕಟ್ಟೆಯಲ್ಲಿನ ಮಾರಾಟವು ಹೆಚ್ಚಾಗಿ ಬದಲಾಗದೆ ಉಳಿದಿದೆ, ಇದು ಕೇವಲ 1 ಶೇಕಡಾ ಬೆಳವಣಿಗೆಯನ್ನು ದಾಖಲಿಸಿದೆ. ಬಜಾಜ್ ಆಟೋಗೆ ರಫ್ತು ಮಾರಾಟವು ತನ್ನ ವಾರ್ಷಿಕ ಹೋಲಿಕೆಯಲ್ಲಿ ಶೇ.12 ರಷ್ಟು ಹೆಚ್ಚಾಗಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ವಾಣಿಜ್ಯ ವಾಹನ ವಿಭಾಗದಲ್ಲಿ ಬಜಾಜ್ ಆಟೋ ತನ್ನ ವಾರ್ಷಿಕ ಮಾರಾಟ ಹೋಲಿಕೆಯಲ್ಲಿ ಒಟ್ಟಾರೆ ಶೇ.5 ರಷ್ಟು ಕುಸಿತವನ್ನು ದಾಖಲಿಸಿದೆ. ಕಳೆದ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು 42,454 ಯುನಿಟ್‌ಗಳನ್ನು ದಾಖಲಿಸಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ಇನ್ನು 2020ರ ಫೆಬ್ರವರಿ ತಿಂಗಳಲ್ಲಿ 44,691 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದರ ವಿಭಾಗದಲ್ಲಿ 26,577 ಯುನಿಟ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಿವೆ. ದೇಶಿಯ ಮಾರುಕಟ್ಟೆಯಲ್ಲಿ ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ.27 ರಷ್ಟು ಕುಸಿತವಾಗಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ಇದರೊಂದಿಗೆ ಬಜಾಜ್ ಆಟೋ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಪಲ್ಸರ್ 180 ಬೈಕನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಬಜಾಜ್ ಪಲ್ಸರ್ 180 ಬೈಕಿನ ಬೆಲೆಯು ನವದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.07 ಲಕ್ಷಗಳಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ಈ ಪಲ್ಸರ್ 150 ಟ್ವಿನ್ ಡಿಸ್ಕ್ ರೂಪಾಂತರದಿಂದ ಸ್ಫೂರ್ತಿ ಪಡೆದ ವಿಭಿನ್ನ ಸ್ಟೈಲಿಂಗ್‌ನೊಂದಿಗೆ ಬಿಡುಗಡೆಗೊಂಡಿದೆ. ಈ ಪಲ್ಸರ್ 180 ಕ್ಲಾಸಿಕ್ ಫ್ಯಾಮಿಲಿ ಸ್ಟೈಲಿಂಗ್ ಅನ್ನು ಒಳಗೊಂಡಿದೆ. ಹೊಸ ಪಲ್ಸರ್ 180 ಬೈಕಿನಲ್ಲಿ ಇದು ಬಾಡಿ ಪ್ಯಾನೆಲ್‌ಗಳು, ಫೆಂಡರ್‌ಗಳು, ಫ್ಯೂಯಲ್ ಟ್ಯಾಂಕ್ ವಿಸ್ತರಣೆಗಳ ಮತ್ತು ಬೆಲ್ಲಿ ಪ್ಯಾನ್‌ನಲ್ಲಿ ಕಾಂಟ್ರಾಸ್ಟ್ ಗ್ರಾಫಿಕ್ ಮುಖ್ಯಾಂಶಗಳನ್ನು ಒಳಗೊಂಡಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ

ಭಾರತೀಯ ಮಾರುಕಟ್ಟೆಯ ದ್ವಿಚಕ್ರ ವಾಹನ ವಿಭಾಗದಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ಉಳಿಸಿಕೊಳ್ಳುವಲ್ಲಿ ಬಜಾಜ್ ಆಟೋ ಯಶಸ್ವಿಯಾಗಿದೆ. ಪಲ್ಸರ್ ಸರಣಿಯ ಬೈಕುಗಳು ಬಜಾಜ್ ಆಟೋ ಕಂಪನಿಗೆ ಮಾರಾಟದದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡಿದೆ.

Most Read Articles

Kannada
English summary
Bajaj Auto Registers An Overall Yearly Growth Of 6 Per Cent. Read In Kannada.
Story first published: Monday, March 1, 2021, 18:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X