2020ರ ಅವಧಿಯಲ್ಲಿ 1,337 ಚೇತಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದ ಬಜಾಜ್ ಆಟೋ
80ರ ದಶಕದಲ್ಲಿ ಭಾರತೀಯರ ನೆಚ್ಚಿನ ಸ್ಕೂಟರ್ ಆಗಿದ್ದ ಚೇತಕ್ ಅನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಕಳೆದ ವರ್ಷದಲ್ಲಿ ಬಜಾಜ್ ಕಂಪನಿಯು ಬಿಡುಗಡೆಗೊಳಿಸಿದ್ದರು. ಈ ಐಕಾನಿಕ್ ಚೇತಕ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸುವ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸುವ ಪ್ರಯತ್ನವನ್ನು ಬಜಾಜ್ ಕಂಪನಿಯು ಮಾಡಿತು.

ಆದರೆ ಆರಂಭಿಕ ಹಂತದಿಂದಲೂ ಬಜಾಜ್ ಕಂಪನಿಯು ಹಲವಾರು ವಿಘ್ನಗಳನ್ನು ಎದುರಿಸಬೇಕಾಯಿತು. ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸದ ಬಗ್ಗೆ ಹಲವರು ಟೀಕೆಯನ್ನು ಮಾಡಿದರು. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿದ್ದರು. ಆರಂಭದಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಪುಣೆ ಮತ್ತು ಬೆಂಗಳೂರಿನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ನಂತರದ ದಿನಗಳಲ್ಲಿ ಇತರ ಪ್ರಮುಖ ನಗರಗಳಿಗೆ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ವಿಸ್ತರಿಸಲು ಯೋಜನೆ ರೂಪಿಸಿದ್ದಾರೆ.

ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದ ಮೊದಲ ತಿಂಗಳಲ್ಲಿ ಕೇವಲ 21 ಯುನಿಟ್‍ಗಳನ್ನು ಮಾರಾಟ ಮಾಡಿದ್ದರು. 2020ರ ಫೆಬ್ರವರಿ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ 100 ಯುನಿಟ್‍ಗಳನ್ನು ಮಾರಾಟ ಮಾಡಲಾಗಿತ್ತು.
MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಬಳಿಕ ಮಾರ್ಚ್ ತಿಂಗಳಲ್ಲಿ ಕರೋನಾ ಭೀತಿಯ ನಡುವೆ 91 ಯುನಿಟ್‍ಗಳನ್ನು ಮಾರಾಟ ಮಾಡಲಾಗಿದೆ. ಇನ್ನು ಕರೋನಾ ಸೋಂಕಿನ ಆರ್ಭಟದಿಂದ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ಸ್ಥಗಿತಗೊಳಿಸಿದ್ದರು.

ಕರೋನಾ ಸೋಂಕಿನಿಂದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು. ಇದರಿಂದ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಾಧ್ಯವಾಗದೆ ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಗಾಗಿ ಬುಕ್ಕಿಂಗ್ ಸ್ವೀಕರಿಸುವುದನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಆದರೆ ಜ್ಯುಲೈ ತಿಂಗಳ ಬಳಿಕ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಕಾಣಲು ಪ್ರಾರಂಭಿಸಿತ್ತು. ಇನ್ನು 2020ರ ಸೆಪ್ಟಂಬರ್ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 288 ಯುನಿಟ್‌ಗಳು ಮಾರಾಟವಾಗಿವೆ.

ಇನ್ನು ಆಕ್ಟೋಬರ್ ತಿಂಗಳಲ್ಲಿ ಸಾಲು ಹಬ್ಬಗಳಿದ್ದರೂ ಮಾರಾಟದಲ್ಲಿ ದೊಡ್ಡ ಮಟ್ಟದ ಯಶಸ್ವಿಯನ್ನು ಕಂಡಿಲ್ಲ. ಆಕ್ಟೋಬರ್ ತಿಂಗಳಲ್ಲಿ 258 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ನವೆಂಬರ್ ತಿಂಗಳಲ್ಲಿ ಚೇತಕ್ 264 ಯುನಿಟ್ ಗಳನ್ನು ಮಾರಟಗೊಳಿಸಿತ್ತು.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಇನ್ನು 2020ರ ಡಿಸೆಂಬರ್ ತಿಂಗಳಲ್ಲಿ ಬಿಡಿಭಾಗಗಳ ಪೊರೈಕೆ ಇಲ್ಲದ ಕಾರಣ ಉತ್ಪಾದನೆ ಮತ್ತೆ ಸ್ಥಗಿತಗೊಂಡಿತು. ಇದರಿಂದ ಕಳೆದ ತಿಂಗಳು ಕೇವಲ ಮೂರು ಯೂನಿಟ್‌ಗಳನ್ನು ಮಾತ್ರ ಮಾರಾಟ ಮಾಡಿದೆ. ಆದರೆ ಇದರ ಪ್ರತಿಸ್ಪರ್ಧಿ ಟಿವಿಎಸ್ ಐಕ್ಯೂಬ್ 58 ಯುನಿಟ್ ಗಳನ್ನು ಮಾರಾಟಗೊಳಿಸಿಸಿವೆ

ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಭಾರತದಲ್ಲಿ ಬಿಡುಗಡೆಗೊಂಡು ಇಲ್ಲಿಯವರೆಗೆ 1,337 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಒಂದು ಸಾವಿರ ಗಡಿಯನ್ನು ದಾಟಲು ಹಲವು ತಿಂಗಳನ್ನು ತೆಗೆದುಕೊಂಡಿದೆ.


Click it and Unblock the Notifications