ಬುಕ್ಕಿಂಗ್ ಆರಂಭ- ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಬಜಾಜ್ ಆಟೋ ಕಂಪನಿಯು ಇತ್ತೀಚೆಗೆ ತನ್ನ ಹೊಸ ಚೇತಕ್ ಇವಿ ಸ್ಕೂಟರ್ ಮಾದರಿಯನ್ನು ನಾಗಪುರ್‌ದಲ್ಲಿ ಮಾರಾಟಕ್ಕೆ ಚಾಲನೆ ನೀಡಿದ್ದು, ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ದೇಶದ ಪ್ರಮುಖ ನಗರಗಳಿಗೆ ವಿಸ್ತರಣೆ ಮಾಡುತ್ತಿದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಬೆಂಗಳೂರು ಮತ್ತು ಪುಣೆಯಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ನಂತರ ಚೆನ್ನೈ ಮತ್ತು ಹೈದ್ರಾಬಾದ್‌‌ನಲ್ಲೂ ಇವಿ ಸ್ಕೂಟರ್ ಮಾರಾಟ ಆರಂಭಿಸಿದ್ದ ಬಜಾಜ್ ಕಂಪನಿಯು ಮೊನ್ನೆಯಷ್ಟೇ ನಾಗಪುರ್‌ದಲ್ಲೂ ಮಾರಾಟ ಆರಂಭಿಸಿತ್ತು. ಇದೀಗ ಕರ್ನಾಟಕ ಮತ್ತು ಮಹಾರಾಷ್ಟ್ರದ ಮತ್ತಷ್ಟು ನಗರಗಳಲ್ಲಿ ಹೊಸ ಸ್ಕೂಟರ್ ಮಾರಾಟ ವಿಸ್ತರಿಸಲು ಸಜ್ಜಾಗಿರುವ ಬಜಾಜ್ ಕಂಪನಿಯು ಮೈಸೂರು, ಮಂಗಳೂರು ಮತ್ತು ಔರಾಂಗಾಬಾದ್ ನಗರಗಳಲ್ಲಿ ರೂ.2 ಸಾವಿರ ಮುಂಗಡ ಪಾವತಿಯೊಂದಿಗೆ ಹೊಸ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಆರಂಭಿಸಿದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಪೆಟ್ರೋಲ್ ಬೆಲೆ ಹೆಚ್ಚಳ ಪರಿಣಾಮ ಹೊಸ ಇವಿ ಸ್ಕೂಟರ್ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬರುತ್ತಿದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಪೆಟ್ರೋಲ್ ಬೆಲೆ ಹೆಚ್ಚುತ್ತಿರುವ ಪರಿಣಾಮ ಹೊಸ ಸ್ಕೂಟರ್ ಖರೀದಿದಾರರು ಇವಿ ಸ್ಕೂಟರ್‌ನತ್ತ ಮುಖ ಮಾಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಗಳು ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್-1 ಮತ್ತು ಟೈರ್-2 ನಗರಗಳಲ್ಲೂ ಇವಿ ವಾಹನ ಮಾರಾಟವನ್ನು ಕೈಗೊಳ್ಳಲು ಸಜ್ಜಾಗಿವೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಬಜಾಜ್ ಕೂಡಾ ತನ್ನ ಸಹಭಾಗಿತ್ವ ಕಂಪನಿಯಾದ ಕೆಟಿಎಂ ಶೋರೂಂಗಳ ಮೂಲಕ ಚೇತಕ್ ಇವಿ ಮಾರಾಟವನ್ನು ಹಂತ-ಹಂತವಾಗಿ ವಿವಿಧ ನಗರಗಳಿಗೆ ಮಾರಾಟ ವಿಸ್ತರಣೆ ಮಾಡುತ್ತಿದ್ದು, ಬಜಾಜ್ ಇವಿ ಸ್ಕೂಟರ್‌ಗಳು ದುಬಾರಿ ಬೆಲೆ ನಡುವೆಯೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಹೊಸ ಚೇತಕ್ ಇವಿ ಮಾದರಿಯು ಅರ್ಬೈನ್ ಮತ್ತು ಪ್ರೀಮಿಯಂ ಎನ್ನುವ ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅರ್ಬೈನ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.42 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.44 ಲಕ್ಷ ಬೆಲೆ ಹೊಂದಿದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಹೊಸ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್‍ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಹಾಗೆಯೇ ಹೊಸ ಸ್ಕೂಟರ್‌‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ಶೀಘ್ರದಲ್ಲೇ ಮೈಸೂರು, ಮಂಗಳೂರಿನಲ್ಲಿ ಆರಂಭವಾಗಲಿದೆ ಚೇತಕ್ ಇವಿ ಮಾರಾಟ

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.

v

Article Published On: Friday, July 23, 2021, 8:45 [IST]
English summary
Bajaj Chetak EV Booking Starts In Mysore, Mangalore And Aurangabad. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+