ಚೇತಕ್ ಇವಿ ಸ್ಕೂಟರ್ ಉತ್ಪಾದನೆ ಪುನಾರಂಭದೊಂದಿಗೆ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಬಜಾಜ್ ಕಂಪನಿಯು ಶೀಘ್ರದಲ್ಲೇ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಯಾದ ಚೇತಕ್ ಇವಿ ಮಾದರಿಯ ಉತ್ಪಾದನೆಯನ್ನು ಪುನಾರಂಭಿಸಲು ಸಿದ್ದತೆ ನಡೆಸುತ್ತಿದ್ದು, ಹೊಸ ಸ್ಕೂಟರ್ ಉತ್ಪಾದನೆಯೊಂದಿಗೆ ಬೆಲೆ ಹೆಚ್ಚಳವಾಗುವ ನೀರಿಕ್ಷೆಯಿದೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಕೋವಿಡ್ ಪರಿಣಾಮ ಚೇತಕ್ ಇವಿ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ್ದ ಬಜಾಜ್ ಕಂಪನಿಯು ಸ್ಟಾಕ್ ಪ್ರಮಾಣವನ್ನು ಈಗಾಗಲೇ ಪೂರ್ಣಗೊಳಿಸಿದ್ದು, ಉತ್ಪಾದನೆಗೆ ಮರುಚಾಲನೆ ನೀಡುವುದರ ಜೊತೆಗೆ ಹೊಸದಾಗಿ ಮತ್ತಷ್ಟು ಬುಕ್ಕಿಂಗ್ ಪಡೆದುಕೊಳ್ಳುತ್ತಿದೆ. ಹೀಗಾಗಿ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಇವಿ ಸ್ಕೂಟರ್ ಬೆಲೆ ಹೆಚ್ಚಳವಾಗುವ ನೀರಿಕ್ಷೆಗಳಿದ್ದು, ಪೆಟ್ರೋಲ್ ಬೆಲೆ ಹೆಚ್ಚಳದ ನಂತರ ಇವಿ ವಾಹನ ಮಾರುಕಟ್ಟೆ ಸಾಕಷ್ಟು ಚುರುಕುಗೊಂಡಿದೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಕಳೆದ ಕೆಲ ತಿಂಗಳ ಅವಧಿಯಲ್ಲೇ ಇದೇ ಮೊದಲ ಬಾರಿಗೆ ಹಲವು ಇವಿ ಮಾರಾಟ ಕಂಪನಿಗಳು ಭಾರೀ ಪ್ರಮಾಣದಲ್ಲಿ ಹೊಸ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಬಜಾಜ್ ಚೇತಕ್ ಎಲೆಕ್ಟ್ರಿಕ್ ಮಾದರಿಗೂ ಹೆಚ್ಚಿನ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಬಜಾಜ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯನ್ನು ಸದ್ಯಕ್ಕೆ ತನ್ನ ಸಹಭಾಗೀತ್ವದ ಕಂಪನಿ ಕೆಟಿಎಂ ಡೀಲರ್ಸ್‌ಗಳಲ್ಲಿ ಮಾರಾಟ ಮಾಡುತ್ತಿದ್ದು, ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯಕ್ಕೆ ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಶೀಘ್ರದಲ್ಲೇ ವಿವಿಧ ನಗರಗಳಲ್ಲಿ ಮಾರಾಟ ಪ್ರಕ್ರಿಯೆಯನ್ನು ವಿಸ್ತರಿಸುವ ಯೋಜನೆ ರೂಪಿಸಲಾಗಿದ್ದು, ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚಿದಂತೆ ವಿವಿಧ ನಗರಗಳಿಗೂ ಮಾರಾಟ ಜಾಲವನ್ನು ವಿಸ್ತರಿಸಲಾಗುತ್ತಿದೆ. ಇನ್ನು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ವೆರಿಯೆಂಟ್ ಅರ್ಬೈನ್ ಮಾದರಿಯು ರೂ. 1 ಲಕ್ಷ ಬೆಲೆ ಹೊಂದಿದ್ದರೆ ಪ್ರೀಮಿಯಂ ವೆರಿಯೆಂಟ್ ಬೆಲೆಯನ್ನು ರೂ.1.15 ಲಕ್ಷ ಬೆಲೆ ಪಡೆದುಕೊಂಡಿದೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಚೇತಕ್ ಇವಿ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದ್ದರೆ ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಚೇತಕ್ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್‍ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಹಾಗೆಯೇ ಹೊಸ ಸ್ಕೂಟರ್‌‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍‍ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಹೊಸ ಬ್ಯಾಟರಿ ಮೇಲೆ ಬಜಾಜ್ ಕಂಪನಿಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿಯನ್ನು ನೀಡಲಿದ್ದು, ಭವಿಷ್ಯದಲ್ಲಿ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಸೌಲಭ್ಯವನ್ನು ಒದಗಿಸುವ ಗುರಿಹೊಂದಿದೆ.

ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಬಜಾಜ್

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.

Article Published On: Monday, February 8, 2021, 20:31 [IST]
English summary
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+