ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಭಾರತೀಯರ ನೆಚ್ಚಿನ ಸ್ಕೂಟರ್ ಆಗಿದ್ದ ಚೇತಕ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಕಳೆದ ವರ್ಷ ಬಜಾಜ್ ಕಂಪನಿಯು ಬಿಡುಗಡೆಗೊಳಿಸಿದ್ದರು. ಈ ಐಕಾನಿಕ್ ಚೇತಕ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸುವ ಪ್ರಯತ್ನವನ್ನು ಬಜಾಜ್ ಕಂಪನಿಯು ಮಾಡಿತು.

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಆದರೆ ಆರಂಭಿಕ ಹಂತದಿಂದಲ್ಲೇ ಬಜಾಜ್ ಕಂಪನಿಯು ಹಲವಾರು ವಿಘ್ನಗಳನ್ನು ಎದುರಿಸಬೇಕಾಯಿತು. ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸದ ಬಗ್ಗೆ ಹಲವರು ಟೀಕೆಯನ್ನು ಮಾಡಿದರು. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕಳೆದ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿದ್ದರು. ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದ ಮೊದಲ ತಿಂಗಳಲ್ಲಿ ಕೇವಲ 21 ಯು‍‍ನಿ‍‍ಟ್‍ಗಳನ್ನು ಮಾರಾಟ ಮಾಡಿದ್ದರು.

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

2020ರ ಫೆಬ್ರವರಿ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ 100 ಯು‍‍ನಿ‍‍ಟ್‍ಗಳನ್ನು ಮಾರಾಟ ಮಾಡಲಾಗಿತ್ತು. ಬಳಿಕ ಮಾರ್ಚ್ ತಿಂಗಳಲ್ಲಿ ಕರೋನಾ ಭೀತಿಯ ನಡುವೆ 91 ಯು‍‍ನಿ‍‍ಟ್‍ಗಳನ್ನು ಮಾರಾಟ ಮಾಡಲಾಗಿದೆ. ಕರೋನಾ ಸೋಂಕಿನ ಆರ್ಭಟದಿಂದ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ಸ್ಥಗಿತಗೊಳಿಸಿದ್ದರು.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಕರೋನಾ ಸೋಂಕಿನಿಂದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯ ಮೇಲೆ ಪರಿಣಾಮ ಬೀರಿತ್ತು. ಇದರಿಂದ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಾಧ್ಯವಾಗದೆ ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಗಾಗಿ ಬುಕ್ಕಿಂಗ್ ಸ್ವೀಕರಿಸುವುದನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಆದರೆ ಜ್ಯುಲೈ ತಿಂಗಳ ಬಳಿಕ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಕಾಣಲು ಪ್ರಾರಂಭಿಸಿತ್ತು. ಇನ್ನು 2020ರ ಸೆಪ್ಟಂಬರ್ ತಿಂಗಳಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 288 ಯುನಿಟ್‌ಗಳು ಮಾರಾಟವಾಗಿವೆ. ಆದರೆ ಬಜಾಜ್ ಚೇತಕ್ ನಂತರ ದೊಡ್ಡ ಸಂಖ್ಯೆಯ ಮಾರಾಟವನ್ನು ಕಂಡಿಲ್ಲ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಇದಕ್ಕೆ ಮುಖ್ಯ ಕಾರಣ ಚೇತಕ್ ಸ್ಕೂಟರ್ ತಯಾರಿಸಲು ವಿದೇಶದಿಂದ ಹಲವಾರು ಘಟಕಗಳನ್ನು ಬಳಸಿಕೊಳ್ಳುತ್ತದೆ ಮತ್ತು ಅವುಗಳ ಕೊರತೆಯಿಂದ ಉತ್ಪಾದನಾ ಅಡಚಣೆಯಾಗಿತ್ತು. ಬಜಾಚ್ ಚೇತಕ್ ಉತ್ಪಾದಿಸಲು ಕೆಲವು ಬಿಡಿಭಾಗಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು.

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಆದರೆ ವಿದೇಶದಿಂದ ಬರುವ ಬಿಡಿಭಾಗಗಳ ಆಮದು ಮಾಡಿಕೊಳ್ಳುವಲ್ಲಿ ಸಮಸ್ಯೆಯಾಗಿತ್ತು. ಇದರಿಂದ ಇತ್ತೀಚೆಗೆ ಬುಕ್ಕಿಂಗ್ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಇತ್ತೀಚೆಗೆ ಎಲೆಕ್ಟ್ರಿಕಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಮಾರಾಟವನ್ನು ಹೆಚ್ಚಿಸಲು ಇದು ಉತ್ತಮ ಅವಕಾಶವಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಇದರಿಂದ ಬಜಾಜ್ ಕಂಪನಿಯು ಏಪ್ರಿಲ್ 13ರಂದು ಈ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸುವುದಾಗಿ ಹೇಳಿದೆ. ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬ್ರ್ಯಾಂಡ್‌ನ‌ ಮೊದಲ ಮಾದರಿಯಾಗಿದೆ.

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ. ಇನ್ನು ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ. ಇದು ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಕೂಡ ಹೊಂದಿದೆ.

ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍‍ನಂತೆ ಕಾಣುತ್ತದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ. ಒಟ್ಟಾರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.

Most Read Articles

Kannada
English summary
Bajaj Chetak Electric Scooter Bookings Reopen. Read In Kannada.
Story first published: Saturday, April 10, 2021, 16:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X